Home
ಸುದ್ದಿಜಾಲ

ಸ್ಯಾಮ್‌ಸಂಗ್ ಗ್ಯಾಲಕ್ಸಿ A02 ಸ್ಮಾರ್ಟ್‌ಫೋನ್‌ ಲಾಂಚ್‌!

ಸ್ಮಾರ್ಟ್‌ಫೋನ್‌ ದೈತ್ಯ ತನ್ನ ಬಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಂದ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ಸ್ಯಾಮ್‌ಸಂಗ್ ಗ್ಯಾಲಕ್ಸಿ A02 ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಇದು 6.5 ಇಂಚಿನ ಇನ್ಫಿನಿಟಿ-ವಿ ಡಿಸ್‌ಪ್ಲೇ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್‌

ಹೌದು, ಸ್ಯಾಮ್‌ಸಂಗ್‌ ತನ್ನ ಹೊಸ ಗ್ಯಾಲಕ್ಸಿ A02 ಸ್ಮಾರ್ಟ್‌ಫೋನ್‌ ಅನ್ನು ಥೈಲ್ಯಾಂಡ್ ಸೈಟ್‌ನಲ್ಲಿ ಅನಾವರಣಗೊಳಿಸಿದೆ. ಇದು ಮೀಡಿಯಾ ಟೆಕ್ MT6739W ಕ್ವಾಡ್-ಕೋರ್ SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಪ್ರೈಮರಿ ಸೆನ್ಸಾರ್‌ ಕ್ಯಾಮೆರಾ ಒಳಗೊಂಡಿರುವ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಸ್ಯಾಮ್‌ಸಂಗ್ ಗ್ಯಾಲಕ್ಸಿ A02 ಸ್ಮಾರ್ಟ್‌ಫೋನ್‌ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಹೆಚ್‌ಡಿ + ಇನ್ಫಿನಿಟಿ-ವಿ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದ್ದು, ಸ್ಕ್ರೀನ್‌ ಟು ಬಾಡಿ ನಡುವಿನ ಅನುಪಾತ 81.8% ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇದು ಮೀಡಿಯಾಟೆಕ್ MT6739W ಕ್ವಾಡ್-ಕೋರ್ SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 2GB RAM + 32GB, 3GB RAM + 32GB, ಮತ್ತು 3GB RAM + 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಮೂರು ವೇರಿಯೆಂಟ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಸ್ಲಾಟ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ

ಕ್ಯಾಮೆರಾ

ಈ ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದು ಆಟೋ ಫೋಕಸ್, ಡಿಜಿಟಲ್ ಜೂಮ್ ಅಪ್ 8x, ಮತ್ತು ಫ್ಲ್ಯಾಷ್ ಫೀಚರ್ಸ್‌ಗಳನ್ನು ಹೊಂದಿದೆ. ಇನ್ನು ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಅನ್ನು ಸಹ ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ A02 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 7.75W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE , 3.5mm ಹೆಡ್‌ಫೋನ್ ಜ್ಯಾಕ್, ವೈ-ಫೈ, ಬ್ಲೂಟೂತ್ v5.0, GPS + ಮತ್ತು ಮೈಕ್ರೋ-ಯುಎಸ್‌ಬಿ ಪೋರ್ಟ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಈ ಸ್ಮಾರ್ಟ್‌ಫೋನ್ ಥೈಲ್ಯಾಂಡ್‌ನಲ್ಲಿ 2GB RAM + 32 GB ಆನ್‌ಬೋರ್ಡ್ ಶೇಖರಣಾ ರೂಪಾಂತರಕ್ಕೆ THB 2,999 (ಅಂದಾಜು ರೂ. 7,300) ಬೆಲೆ ಹೊಂದಿದೆ. 32 GB ಮತ್ತು 64 GB ಶೇಖರಣಾ ಆಯ್ಕೆಗಳೊಂದಿಗೆ 3GB RAM ರೂಪಾಂತರದ ಬೆಲೆ ಪಟ್ಟಿ ಮಾಡಲಾಗಿಲ್ಲ. ಇದು ಡೆನಿಮ್ ಬ್ಲ್ಯಾಕ್, ಡೆನಿಮ್ ಬ್ಲೂ, ಡೆನಿಮ್ ಗ್ರೇ ಮತ್ತು ಡೆನಿಮ್ ರೆಡ್ ಕಲರ್ ರೂಪಾಂತರಗಳಲ್ಲಿ ನೀಡಲಾಗುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಯಾವಾಗ ಲಭ್ಯವಾಗಲಿದೆ ಎನ್ನುವ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

Best Mobiles in India

English summary
Samsung Galaxy A02 With 5,000mAh Battery Launched.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+