ಅಗ್ಗದ ಬೆಲೆಯಲ್ಲಿ ಭಾರತಕ್ಕೆ ಎಂಟ್ರಿ ಕೊಟ್ಟ ಸ್ಯಾಮ್‌ಸಂಗ್ ಗ್ಯಾಲಕ್ಸಿ A03 ಫೋನ್!
ದಕ್ಷಿಣ ಕೊರಿಯಾದ ಜನಪ್ರಿಯ ಟೆಕ್ ದೈತ್ಯ ಸ್ಯಾಮ್‌ಸಂಗ್ ಸಂಸ್ಥೆಯು ಭಾರತದಲ್ಲಿ ಹೊಸದಾಗಿ ಗ್ಯಾಲಕ್ಸಿ A03 ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಇದೊಂದು ಎಂಟ್ರಿ ಲೆವೆಲ್ ಮಾದರಿಯ ಸ್ಮಾರ್ಟ್‌ಫೋನ್ ಆಗಿದ್ದು, ಸಿಂಗಲ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದೆ. ಇದರೊಂದಿಗೆ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್ ಅಪ್ ಅನ್ನು ಪಡೆದಿರುವುದು ಆಕರ್ಷಣಿಯವಾಗಿದೆ.

ಹೌದು, ಸ್ಯಾಮ್‌ಸಂಗ್ ಗ್ಯಾಲಕ್ಸಿ A03 ಸ್ಮಾರ್ಟ್‌ಫೋನ್ ಅನ್ನು ದೇಶಿಯ ಮಾರುಕಟ್ಟೆಗೆ ಲಾಂಚ್ ಮಾಡಿದೆ. ಈ ಫೋನ್ 2GB RAM + 32GB ಸಂಗ್ರಹದ ವೇರಿಯಂಟ್ ಆಯ್ಕೆ ಪಡೆದಿದೆ. ಹಾಗೆಯೇ ಆಂಡ್ರಾಯ್ಡ್ 11 ಗೋ ಎಡಿಷನ್ ಓಎಸ್ ಅನ್ನು ಹೊಂದಿದೆ. ಇದರೊಂದಿಗೆ ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸುವ ಅವಕಾಶವನ್ನು ಪಡೆದಿದೆ. ಇನ್ನು ಈ ಫೋನ್ ಬ್ಲೂ ಮತ್ತು ಬ್ಲ್ಯಾಕ್ ಬಣ್ಣಗಳ ಆಯ್ಕೆ ಪಡೆದಿದೆ. ಹಾಗಾದರೇ ಸ್ಯಾಮ್‌ಸಂಗ್ ಗ್ಯಾಲಕ್ಸಿ A03 ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ವಿನ್ಯಾಸ ಮತ್ತು ರಚನೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ A03 ಸ್ಮಾರ್ಟ್‌ಫೋನ್ 720 x 1,600 ಪಿಕ್ಸಲ್ ರೆಸಲ್ಯೂಶನ್ ಹೊಂದಿರುವ 6.5 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಜೊತೆಗೆ ಇನ್‌ಫಿನಿಟಿ V TFT ಡಿಸ್‌ಪ್ಲೇ ಹೊಂದಿದೆ. ಈ ಫೋನಿನ ಡಿಸ್‌ಪ್ಲೇ ಅನುಪಾತವು 20:9 ಆಗಿದೆ.

ಪ್ರೊಸೆಸರ್ ಯಾವುದು
ಸ್ಯಾಮ್‌ಸಂಗ್ ಗ್ಯಾಲಕ್ಸಿ A03s ಸ್ಮಾರ್ಟ್‌ಫೋನ್ ಸಂಸ್ಥೆಯ Unisoc SC9863A SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11 ಗೋ ಓಎಸ್ ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಜೊತೆಗೆ ಈ ಫೋನ್ ಸಿಂಗಲ್ ಸಂಗ್ರಹ ಸಾಮರ್ಥ್ಯದ ಆಯ್ಕೆ ಪಡೆದಿದ್ದು, ಅದು 2 GB RAM + 32 GB ವೇರಿಯಂಟ್ ಆಗಿದೆ. ಹಾಗೆಯೇ ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸುವ ಅವಕಾಶವನ್ನು ಪಡೆದಿದೆ.

ಸಿಂಗಲ್ ರಿಯರ್ ಕ್ಯಾಮೆರಾ
ಸ್ಯಾಮ್‌ಸಂಗ್ ಗ್ಯಾಲಕ್ಸಿ A03 ಸ್ಮಾರ್ಟ್‌ಫೋನ್ ಸಿಂಗಲ್ ರಿಯರ್ ಕ್ಯಾಮೆರಾ ರಚನೆ ಒಳಗೊಂಡಿದ್ದು, ಅದು 8 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಇದರೊಂದಿಗೆ ಸೆಲ್ಫಿಗಾಗಿ 5 ಮೆಗಾ ಪಿಕ್ಸಲ್ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ. ಜೊತೆಗೆ ಎಡಿಟಿಂಗ್ ಆಯ್ಕೆಗಳು ಇವೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು
ಸ್ಯಾಮ್‌ಸಂಗ್ ಗ್ಯಾಲಕ್ಸಿ A03 ಸ್ಮಾರ್ಟ್‌ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್ ಅಪ್ ಸಾಮರ್ಥ್ಯ ವನ್ನು ಪಡೆದಿದೆ. ಜೊತೆಗೆ ಅತ್ಯುತ್ತಮ ಚಾರ್ಜಿಂಗ್ ಸೌಲಭ್ಯ ವನ್ನು ನೀಡಿದೆ. ಇದರೊಂದಿಗೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಸಾಮೀಪ್ಯ ಸೆನ್ಸರ್, ಜೊತೆಗೆ ಇದು 164.2 x 75.9 x 9.1mm ಸುತ್ತಳತೆ ಹೊಂದಿದ್ದು, 211 ಗ್ರಾಂ ತೂಕ ಪಡೆದಿದೆ.

ಬೆಲೆ ಮತ್ತು ಲಭ್ಯತೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ A03 ಸ್ಮಾರ್ಟ್‌ಫೋನ್ ಸಿಂಗಲ್ ವೇರಿಯಂಟ್ ಮಾಡೆಲ್‌ಗಳ ಆಯ್ಕೆ ಹೊಂದಿದೆ. 2GB RAM + 32GB ವೇರಿಯಂಟ್ ದರವು 7,999 ರೂ. ಆಗಿದೆ. ಇನ್ನು ಸ್ಯಾಮ್‌ಸಂಗ್ ಗ್ಯಾಲಕ್ಸಿ A03 ಸ್ಮಾರ್ಟ್‌ಫೋನ್ ಕಪ್ಪು ಮತ್ತು ನೀಲಿ ಬಣ್ಣದ ಆಯ್ಕೆಗಳನ್ನು ಹೊಂದಿದೆ. ಇದು ಅಧಿಕೃತ ಆನ್‌ಲೈನ್ ಸ್ಟೋರ್ ಮತ್ತು ಪ್ರಮುಖ ಆನ್‌ಲೈನ್ ಮತ್ತು ಆಫ್‌ಲೈನ್ ಚಿಲ್ಲರೆ ವ್ಯಾಪಾರಿಗಳ ಮೂಲಕ ಖರೀದಿಸಲು ಲಭ್ಯವಿದೆ.

ಹಾಗೆಯೇ ಸ್ಯಾಮ್‌ಸಂಗ್ ಕಂಪನಿಯು ಅಗಷ್ಟ್ 2021 ರಲ್ಲಿ ಸ್ಯಾಮ್‌ಸಂಗ್ ಭಾರತದಲ್ಲಿ ಗ್ಯಾಲಕ್ಸಿ A03s ಫೋನ್ ಬಿಡುಗಡೆ ಮಾಡಿತ್ತು. ಈ ಫೋನ್ ಎರಡು ವೇರಿಯಂಟ್ ಮಾಡೆಲ್ ಆಯ್ಕೆ ಪಡೆದಿದ್ದು, ಅವುಗಳು ಕ್ರಮವಾಗಿ 3GB RAM + 32GB ಮತ್ತು 4GB + 64GB ಸ್ಟೋರೇಜ್ ವೇರಿಯಂಟ್ ಅನ್ನು ಹೊಂದಿವೆ. ಹಾಗೆಯೇ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೂ ಮೆಮೊರಿ ವಿಸ್ತರಿಸುವ ಅವಕಾಶವನ್ನು ಪಡೆದಿದೆ. ಇನ್ನು ಈ ಫೋನ್ ಗ್ರಾಹಕ ಸ್ನೇಹಿ ಬೆಲೆಯನ್ನು ಪಡೆದಿದೆ. ಹಾಗಾದರೇ ಸ್ಯಾಮ್‌ಸಂಗ್ ಗ್ಯಾಲಕ್ಸಿ A03s ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ವಿನ್ಯಾಸ ಮತ್ತು ರಚನೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ A03s ಸ್ಮಾರ್ಟ್‌ಫೋನ್ 720x1,600 ಪಿಕ್ಸಲ್ ರೆಸಲ್ಯೂಶನ್ ಹೊಂದಿರುವ 6.5 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಜೊತೆಗೆ ಇನ್‌ಫಿನಿಟಿ V TFT ಡಿಸ್‌ಪ್ಲೇ ಹೊಂದಿದೆ. ಈ ಫೋನಿನ ಡಿಸ್‌ಪ್ಲೇ ಅನುಪಾತವು 20:9 ಆಗಿದೆ.

ಪ್ರೊಸೆಸರ್ ಯಾವುದು
ಸ್ಯಾಮ್‌ಸಂಗ್ ಗ್ಯಾಲಕ್ಸಿ A03s ಸ್ಮಾರ್ಟ್‌ಫೋನ್ ಸಂಸ್ಥೆಯ ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೋ P35 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 3GB RAM + 32GB ಮತ್ತು 4GB + 64GB ಸ್ಟೋರೇಜ್ ವೇರಿಯಂಟ್ ಅನ್ನು ಹೊಂದಿವೆ. ಹಾಗೆಯೇ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೂ ಮೆಮೊರಿ ವಿಸ್ತರಿಸುವ ಅವಕಾಶವನ್ನು ಪಡೆದಿದೆ.

ಟ್ರಿಪಲ್ ಕ್ಯಾಮೆರಾ ವಿಶೇಷ
ಸ್ಯಾಮ್‌ಸಂಗ್ ಗ್ಯಾಲಕ್ಸಿ A03s ಸ್ಮಾರ್ಟ್‌ಫೋನ್ ತ್ರಿವಳಿ ರಿಯರ್ ಕ್ಯಾಮೆರಾ ಸೆಟ್‌ಆಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 13 ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಸೆಕೆಂಡರಿ ಕ್ಯಾಮೆರಾವು 2 ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದ್ದು, ಇನ್ನು ತೃತೀಯ ಕ್ಯಾಮೆರಾವು 2 ಎಂಪಿ ಸೆನ್ಸಾರ್ ಬಲವನ್ನು ಪಡೆದಿದೆ. ಇದರೊಂದಿಗೆ ಸೆಲ್ಫಿಗಾಗಿ 5 ಎಂಪಿ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ. ಜೊತೆಗೆ ಎಡಿಟಿಂಗ್ ಆಯ್ಕೆಗಳು ಇವೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು
ಸ್ಯಾಮ್‌ಸಂಗ್ ಗ್ಯಾಲಕ್ಸಿ A03s ಸ್ಮಾರ್ಟ್‌ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್ ಅಪ್ ಸಾಮರ್ಥ್ಯ ವನ್ನು ಪಡೆದಿದೆ. ಜೊತೆಗೆ ಅತ್ಯುತ್ತಮ ಚಾರ್ಜಿಂಗ್ ಸೌಲಭ್ಯವನ್ನು ನೀಡಿದೆ. ಇದರೊಂದಿಗೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಸಾಮೀಪ್ಯ ಸೆನ್ಸರ್, ಜೊತೆಗೆ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಒಳಗೊಂಡಿದೆ.


Click it and Unblock the Notifications








