ಕೈಗೆಟಕುವ ಬೆಲೆಯಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A03 ಸ್ಮಾರ್ಟ್‌ಫೋನ್ ಬಿಡುಗಡೆ!
ಸ್ಮಾರ್ಟ್‌ಫೋನ್ ದೈತ್ಯ ಸ್ಯಾಮ್‌ಸಂಗ್ ಕಂಪೆನಿ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಗ್ಯಾಲಕ್ಸಿ ಎಂ, ಗ್ಯಾಲಕ್ಸಿ ಎಸ್, ಗ್ಯಾಲಕ್ಸಿ ಎ ಸರಣಿಯಲ್ಲಿ ಅನೇಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಸದ್ಯ ಇದೀಗ ಭಾರತದಲ್ಲಿ ಹೊಸ ಸ್ಯಾಮ್‌ಸಂಗ್ ಗ್ಯಾಲಕ್ಸಿ A03 ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಇದು ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ವಾಟರ್‌ಡ್ರಾಪ್-ಶೈಲಿಯ ಡಿಸ್‌ಪ್ಲೇ ನಾಚ್ ವಿನ್ಯಾಸವನ್ನು ಹೊಂದಿದೆ.

ಹೌದು, ಸ್ಯಾಮ್‌ಸಂಗ್ ಕಂಪೆನಿ ಭಾರತದಲ್ಲಿ ಹೊಸ ಸ್ಯಾಮ್‌ಸಂಗ್ ಗ್ಯಾಲಕ್ಸಿ A03 ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ SoC ಪ್ರೊಸೆಸರ್ ಬಲವನ್ನು ಒಳಗೊಂಡಿದೆ. ಇನ್ನು ಈ ಫೋನ್ ಲೈವ್ ಫೋಕಸ್, ಬ್ಯೂಟಿ ಮೋಡ್ ಮತ್ತು ಸ್ಮಾರ್ಟ್ ಸೆಲ್ಫಿ ಆಂಗಲ್ ಸೇರಿದಂತೆ ಪ್ರೀ ಲೋಡ್ ಮಾಡಲಾದ ಅನೇಕ ಫೀಚರ್ಸ್‌ಗಳನ್ನು ಹೊಂದಿದೆ. ಜೊತೆಗೆ ವೈರ್ಡ್ ಮತ್ತು ಬ್ಲೂಟೂತ್ ಹೆಡ್‌ಸೆಟ್‌ಗಳಲ್ಲಿ ಡಾಲ್ಬಿ ಅಟ್ಮಾಸ್ ಬೆಂಬಲವನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಸ್ಯಾಮ್‌ಸಂಗ್ ಗ್ಯಾಲಕ್ಸಿ A03 ಸ್ಮಾರ್ಟ್‌ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ HD+ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ ಇನ್ಫಿನಿಟಿ-ವಿ ಟಿಎಫ್‌ಟಿ ಡಿಸ್‌ಪ್ಲೇ ಆಗಿದ್ದು, 20:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಇದು 81.8% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್ ಯಾವುದು?
ಸ್ಯಾಮ್‌ಸಂಗ್ ಗ್ಯಾಲಕ್ಸಿ A03 ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಯುನಿಸೊಕ್ T606 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಒಂದು UI ಕೋರ್ 3.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 1TBವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ
ಸ್ಯಾಮ್‌ಸಂಗ್ ಗ್ಯಾಲಕ್ಸಿ A03 ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ f/1.8 ಲೆನ್ಸ್ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಈ ಕ್ಯಾಮರಾ ಸೆಟಪ್ ಅನ್ನು ಎಲ್ಇಡಿ ಫ್ಲ್ಯಾಷ್ನೊಂದಿಗೆ ಜೋಡಿಸಲಾಗಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಈ ಫೋನ್ ಸ್ಮಾರ್ಟ್ ಸೆಲ್ಫಿ ಆಂಗಲ್ ಫೀಚರ್ಸ್ ಅನ್ನು ಸಹ ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ A03 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಸಿಂಗಲ್ ಚಾರ್ಜ್‌ನಲ್ಲಿ ಒಂದು ದಿನದವರೆಗೆ ಬಾಳಿಕೆ ಬರಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi, ಬ್ಲೂಟೂತ್, GPS/ A-GPS, ಮೈಕ್ರೋ-USB, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಬೆಂಬಲಿಸಲಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A03 ಸ್ಮಾರ್ಟ್‌ಫೋನ್ 3GB RAM + 32GB ಸ್ಟೋರೇಜ್ ಆಯ್ಕೆಗೆ 10,499ರೂ. ಬೆಲೆ ಹೊಂದಿದೆ. ಇನ್ನು ಈ ಫೋನ್ 4GB + 64GB ಆಯ್ಕೆಯ ಬೆಲೆ 11,999.ರೂ ಆಗಿದೆ. ಇನ್ನು ಈ ಫೋನ್ ಬ್ಲ್ಯಾಕ್, ಬ್ಲೂ ಮತ್ತು ರೆಡ್ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್ ಮುಂದಿನ ವಾರಗಳಲ್ಲಿ Samsung.com, ಚಿಲ್ಲರೆ ಅಂಗಡಿಗಳು ಮತ್ತು ಪ್ರಮುಖ ಆನ್‌ಲೈನ್ ಪೋರ್ಟಲ್‌ಗಳ ಮೂಲಕ ಲಭ್ಯವಿರುತ್ತದೆ. ಆದರೂ ನಿಖರವಾದ ಮಾರಾಟದ ದಿನಾಂಕವನ್ನು ಇನ್ನೂ ಘೋಷಿಸಲಾಗಿಲ್ಲ.


Click it and Unblock the Notifications








