ಅಗ್ಗದ ಬೆಲೆಯಲ್ಲಿ ಹೊಸ ಸ್ಯಾಮ್‌ಸಂಗ್ ಗ್ಯಾಲಕ್ಸಿ A03s ಫೋನ್ ಲಾಂಚ್!
ದಕ್ಷಿಣ ಕೊರಿಯಾದ ಜನಪ್ರಿಯ ಟೆಕ್ ದೈತ್ಯ ಸ್ಯಾಮ್‌ಸಂಗ್ ಸಂಸ್ಥೆಯು ಭಾರತದಲ್ಲಿ ಹೊಸದಾಗಿ ಗ್ಯಾಲಕ್ಸಿ A03s ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಇದೊಂದು ಎಂಟ್ರಿ ಲೆವೆಲ್ ಮಾದರಿಯ ಸ್ಮಾರ್ಟ್‌ಫೋನ್ ಆಗಿದ್ದು, ಟ್ರಿಪಲ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದೆ. ಇದರೊಂದಿಗೆ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್ ಅಪ್ ಅನ್ನು ಪಡೆದಿರುವುದು ಆಕರ್ಷಣಿಯವಾಗಿದೆ.

ಹೌದು, ಸ್ಯಾಮ್‌ಸಂಗ್ ಗ್ಯಾಲಕ್ಸಿ A03s ಸ್ಮಾರ್ಟ್‌ಫೋನ್ ಅನ್ನು ದೇಶಿಯ ಮಾರುಕಟ್ಟೆಗೆ ಲಾಂಚ್ ಮಾಡಿದೆ. ಈ ಫೋನ್ ಎರಡು ವೇರಿಯಂಟ್ ಮಾಡೆಲ್ ಆಯ್ಕೆ ಪಡೆದಿದ್ದು, ಅವುಗಳು ಕ್ರಮವಾಗಿ 3GB RAM + 32GB ಮತ್ತು 4GB + 64GB ಸ್ಟೋರೇಜ್ ವೇರಿಯಂಟ್ ಅನ್ನು ಹೊಂದಿವೆ. ಹಾಗೆಯೇ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೂ ಮೆಮೊರಿ ವಿಸ್ತರಿಸುವ ಅವಕಾಶವನ್ನು ಪಡೆದಿದೆ. ಇನ್ನು ಈ ಫೋನ್ ಗ್ರಾಹಕ ಸ್ನೇಹಿ ಬೆಲೆಯನ್ನು ಪಡೆದಿದೆ. ಹಾಗಾದರೇ ಸ್ಯಾಮ್‌ಸಂಗ್ ಗ್ಯಾಲಕ್ಸಿ A03s ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ವಿನ್ಯಾಸ ಮತ್ತು ರಚನೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ A03s ಸ್ಮಾರ್ಟ್‌ಫೋನ್ 720x1,600 ಪಿಕ್ಸಲ್ ರೆಸಲ್ಯೂಶನ್ ಹೊಂದಿರುವ 6.5 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಜೊತೆಗೆ ಇನ್‌ಫಿನಿಟಿ V TFT ಡಿಸ್‌ಪ್ಲೇ ಹೊಂದಿದೆ. ಈ ಫೋನಿನ ಡಿಸ್‌ಪ್ಲೇ ಅನುಪಾತವು 20:9 ಆಗಿದೆ.

ಪ್ರೊಸೆಸರ್ ಯಾವುದು
ಸ್ಯಾಮ್‌ಸಂಗ್ ಗ್ಯಾಲಕ್ಸಿ A03s ಸ್ಮಾರ್ಟ್‌ಫೋನ್ ಸಂಸ್ಥೆಯ ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೋ P35 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 3GB RAM + 32GB ಮತ್ತು 4GB + 64GB ಸ್ಟೋರೇಜ್ ವೇರಿಯಂಟ್ ಅನ್ನು ಹೊಂದಿವೆ. ಹಾಗೆಯೇ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೂ ಮೆಮೊರಿ ವಿಸ್ತರಿಸುವ ಅವಕಾಶವನ್ನು ಪಡೆದಿದೆ.

ಟ್ರಿಪಲ್ ಕ್ಯಾಮೆರಾ ವಿಶೇಷ
ಸ್ಯಾಮ್‌ಸಂಗ್ ಗ್ಯಾಲಕ್ಸಿ A03s ಸ್ಮಾರ್ಟ್‌ಫೋನ್ ತ್ರಿವಳಿ ರಿಯರ್ ಕ್ಯಾಮೆರಾ ಸೆಟ್‌ಆಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 13 ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಸೆಕೆಂಡರಿ ಕ್ಯಾಮೆರಾವು 2 ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದ್ದು, ಇನ್ನು ತೃತೀಯ ಕ್ಯಾಮೆರಾವು 2 ಎಂಪಿ ಸೆನ್ಸಾರ್ ಬಲವನ್ನು ಪಡೆದಿದೆ. ಇದರೊಂದಿಗೆ ಸೆಲ್ಫಿಗಾಗಿ 5 ಎಂಪಿ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ. ಜೊತೆಗೆ ಎಡಿಟಿಂಗ್ ಆಯ್ಕೆಗಳು ಇವೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು
ಸ್ಯಾಮ್‌ಸಂಗ್ ಗ್ಯಾಲಕ್ಸಿ A03s ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್ ಅಪ್ ಸಾಮರ್ಥ್ಯವನ್ನು ಪಡೆದಿದೆ. ಜೊತೆಗೆ ಅತ್ಯುತ್ತಮ ಚಾರ್ಜಿಂಗ್ ಸೌಲಭ್ಯವನ್ನು ನೀಡಿದೆ. ಇದರೊಂದಿಗೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಸಾಮೀಪ್ಯ ಸೆನ್ಸರ್, ಜೊತೆಗೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ A03s ಸ್ಮಾರ್ಟ್‌ಫೋನ್ ಎರಡು ವೇರಿಯಂಟ್ ಮಾಡೆಲ್‌ಗಳ ಆಯ್ಕೆ ಹೊಂದಿದೆ. 3GB RAM + 32GB ಸ್ಟೋರೇಜ್‌ನ ಬೇಸ್ ವೇರಿಯಂಟ್ ದರವು 11,499 ರೂ. ಆಗಿದೆ. ಹಾಗೆಯೇ 4GB + 64GB ವೇರಿಯಂಟ್ ಬೆಲೆಯು 12,499ರೂ. ಆಗಿದೆ. ಇನ್ನು ಈ ಫೋನ್ ಸ್ಯಾಮ್‌ಸಂಗ್ ವೆಬ್‌ಸೈಟ್ ಹಾಗೂ ಪ್ರಮುಖ ಆಫ್‌ಲೈನ್ ಸ್ಟೋರ್‌ಗಳಲ್ಲಿ ಖರೀದಿಗೆ ಸಿಗಲಿದೆ. ಈ ಫೋನ್ ಬ್ಲ್ಯಾಕ್, ವೈಟ್ ಮತ್ತು ಬ್ಲೂ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಾಗಲಿದೆ.


Click it and Unblock the Notifications








