Just In
- 10 hrs ago
ಒಪ್ಪೋ ರೆನೋ 8T 5G ಫಸ್ಟ್ ಲುಕ್: ಪವರ್ಫುಲ್ ಫೀಚರ್ಸ್ ಜೊತೆಗೆ ಹೊಸ ಲುಕ್!
- 13 hrs ago
ಕ್ಯಾನನ್ ಕಂಪೆನಿಯಿಂದ ಹೊಸ ಪ್ರಿಂಟರ್ ಬಿಡುಗಡೆ! ಏನೆಲ್ಲಾ ಸೌಲಭ್ಯವಿದೆ ಗೊತ್ತಾ?
- 13 hrs ago
ನಿಮ್ಮ ರಕ್ಷಣೆಗೆ ನೆರವಾಗಲಿವೆ ಈ ಗ್ಯಾಜೆಟ್ಗಳು; ಮಹಿಳೆಯರಿಗಂತೂ ಅಗತ್ಯ!
- 15 hrs ago
Oppo Reno 8T 5G : ಭಾರತಕ್ಕೆ ಎಂಟ್ರಿ ಕೊಟ್ಟ ಒಪ್ಪೋ ರೆನೋ 8T 5G! ಕ್ಯಾಮೆರಾ ಹೇಗಿದೆ? ವಿಶೇಷತೆ ಏನು?
Don't Miss
- Movies
Lakshana Seria: ಶ್ವೇತಾಗೆ ಎಚ್ಚರಿಕೆ ಕೊಟ್ಟ ಭೂಪತಿ, ನಕ್ಷತ್ರ ಜೊತೆ ಚೆಲ್ಲಾಟ
- News
ಫೆಬ್ರವರಿ 4ರಂದು 313 ರೈಲುಗಳನ್ನು ರದ್ದುಗೊಳಿಸಿದ ಭಾರತೀಯ ರೈಲ್ವೆ- ಸಂಪೂರ್ಣ ಪಟ್ಟಿ ಇಲ್ಲಿದೆ
- Sports
ಭಾರತ vs ಆಸ್ಟ್ರೇಲಿಯಾ: ಸುಂದರ್ ಸೇರಿ ನಾಲ್ವರು ಸ್ಪಿನ್ನರ್ಗಳು ನೆಟ್ ಬೌಲರ್ಗಳಾಗಿ ತಂಡಕ್ಕೆ ಸೇರ್ಪಡೆ
- Lifestyle
Horoscope Today 4 Feb 2023: ಶನಿವಾರ : ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- Automobiles
ಹೊಸ ನವೀಕರಣಗಳೊಂದಿಗೆ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಜನಪ್ರಿಯ ಕಿಯಾ ಸೆಲ್ಟೋಸ್
- Finance
ಅದಾನಿ ಕಳೆದುಕೊಂಡಿದ್ದು ಎಷ್ಟು ಲಕ್ಷ ಕೋಟಿ? ಕುಸಿಯುತ್ತಿವೆ ಷೇರುಗಳು- ಭಾರತದ ಶ್ರೀಮಂತನಿಗೆ ಮಂದೇನು ಕಾದಿದೆ?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಸ್ಯಾಮ್‌ಸಂಗ್‌ನಿಂದ ಬಜೆಟ್ ಬೆಲೆಯ ಎರಡು ಸ್ಮಾರ್ಟ್‌ಫೋನ್ ಅನಾವರಣ! ಫೀಚರ್ಸ್ ಹೇಗಿದೆ?
ಭಾರತದ ಸ್ಮಾರ್ಟ್‌ಫೋನ್ ವಲಯದಲ್ಲಿ ಸ್ಯಾಮ್‌ಸಂಗ್ ಕಂಪೆನಿ ಮುಂಚೂಣಿ ಬ್ರ್ಯಾಂಡ್‌ಗಳಲ್ಲಿ ಒಂದೆನಿಸಿಕೊಂಡಿದೆ. ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ತನ್ನದೇ ಆದ ಪ್ರಾಬಲ್ಯವನ್ನು ಸಾಧಿಸಿದೆ. ಸದ್ಯ ಇದೀಗ ತನ್ನ ಗ್ಯಾಲಕ್ಸಿ A ಸ್ಮಾರ್ಟ್‌ಫೋನ್ ಸರಣಿಯಲ್ಲಿ ಎರಡು ಹೊಸ ಫೋನ್‌ಗಳನ್ನು ಬಿಡುಗಡೆ ಮಾಡಿದೆ. ಇವುಗಳನ್ನು ಸ್ಯಾಮ್‌ಸಂಗ್ ಗ್ಯಾಲಕ್ಸಿ A04 ಮತ್ತು ಗ್ಯಾಲಕ್ಸಿ A04e ಸ್ಮಾರ್ಟ್‌ಫೋನ್ ಎಂದು ಹೆಸರಿಸಲಾಗಿದೆ. ಈ ಎರಡು ಸ್ಮಾರ್ಟ್‌ಫೋನ್‌ಗಳು ಬಹುತೇಕ ಒಂದೇ ಮಾದರಿಯ ಫೀಚರ್ಸ್‌ಗಳನ್ನು ಒಳಗೊಂಡಿವೆ.

ಹೌದು, ಸ್ಯಾಮ್‌ಸಂಗ್ ಕಂಪೆನಿ ಭಾರತದಲ್ಲಿ ಗ್ಯಾಲಕ್ಸಿ A04 ಮತ್ತು ಗ್ಯಾಲಕ್ಸಿ A04e ಸ್ಮಾರ್ಟ್‌ಫೋನ್ ಪರಿಚಯಿಸಿದೆ. ಈ ಎರಡು ಸ್ಮಾರ್ಟ್‌ಫೋನ್‌ಗಳು ಬಜೆಟ್ ಬೆಲೆಯ ಸ್ಮಾರ್ಟ್‌ಫೋನ್‌ಗಳಾಗಿದ್ದು, ಮೀಡಿಯಾ ಟೆಕ್ ಹೆಲಿಯೊ P35 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿವೆ. ಇದಲ್ಲದೆ 6.5 ಇಂಚಿನ HD+ LCD ಇನ್ಫಿನಿಟಿ-ವಿ ಡಿಸ್‌ಪ್ಲೇಯನ್ನು ಹೊಂದಿವೆ. ಇನ್ನುಳಿದಂತೆ ಈ ಎರಡು ಸ್ಮಾರ್ಟ್‌ಫೋನ್‌ಗಳು ಯಾವೆಲ್ಲಾ ವಿಶೇಷತೆ ಗಳನ್ನು ಒಳಗೊಂಡಿವೆ ಅನ್ನದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿನ್ಯಾಸ ಹೇಗಿದೆ?
ಸ್ಯಾಮ್‌ಸಂಗ್ ಗ್ಯಾಲಕ್ಸಿ A04 ಮತ್ತು ಗ್ಯಾಲಕ್ಸಿ A04e ಫೋನ್ 6.5 ಇಂಚಿನ HD+ LCD ಇನ್ಫಿನಿಟಿ-ವಿ ಡಿಸ್‌ಪ್ಲೇಯನ್ನು ಹೊಂದಿವೆ. ಈ ಡಿಸ್‌ಪ್ಲೇ 720 x 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿವೆ. ಇದು 81.3% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದ್ದು, 20:9 ರಚನೆಯ ಅನುಪಾತವನ್ನು ಒಳಗೊಂಡಿದೆ.

ಪ್ರೊಸೆಸರ್ ಯಾವುದು?
ಸ್ಯಾಮ್‌ಸಂಗ್ ಗ್ಯಾಲಕ್ಸಿ A04 ಮತ್ತು ಗ್ಯಾಲಕ್ಸಿ A04e ಫೋನ್‌ಗಳು ಮೀಡಿಯಾ ಟೆಕ್ ಹಿಲಿಯೊ P35 SoC ಪ್ರೊಸೆಸರ್ ವೇಗವನ್ನು ಪಡೆದಿವೆ. ಇವು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿವೆ. ಹಾಗೆಯೇ 4GB RAM + 128GB ಇನ್‌ಬಿಲ್ಟ್ ಸ್ಟೋರೇಜ್ ಹೊಂದಿವೆ. ಇದಲ್ಲದೆ ವರ್ಚುವಲ್ RAM ಪ್ಲಸ್ ಫೀಚರ್ಸ್ ಮೂಲಕ 4GB ವರೆಗೆ ವಿಸ್ತರಿಸಬಹುದಾಗಿದೆ. ಇದರಿಂದ ನಿಮಗೆ ಒಟ್ಟು 8GB RAM ಸಿಗಲಿದೆ.

ಕ್ಯಾಮೆರಾ ಸೆಟ್‌ಅಪ್ ಏನಿದೆ?
ಇನ್ನು ಈ ಎರಡು ಸ್ಮಾರ್ಟ್‌ಫೋನ್‌ಗಳು ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿವೆ. ಇದರಲ್ಲಿ ಗ್ಯಾಲಕ್ಸಿ A04 ಸ್ಮಾರ್ಟ್‌ಫೋನ್ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಪಡೆದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಹೊಂದಿದೆ. ಆದರೆ ಗ್ಯಾಲಕ್ಸಿ A04e ಸ್ಮಾರ್ಟ್‌ಫೋನ್ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಪಡೆದುಕೊಂಡಿದೆ. ಈ ಎರಡು ಫೋನ್‌ಗಳು 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿವೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್‌ಗಳೇನು?
ಸ್ಯಾಮ್‌ಸಂಗ್ ಗ್ಯಾಲಕ್ಸಿ A04 ಮತ್ತು ಗ್ಯಾಲಕ್ಸಿ A04e ಸ್ಮಾರ್ಟ್‌ಫೋನ್‌ಗಳು 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿವೆ. ಇದು ಯುಎಸ್‌ಬಿ ಟೈಪ್ ಸಿ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ, ಬ್ಲೂಟೂತ್ v5.0 ಮತ್ತು LTEಯನ್ನು ಬೆಂಬಲಿಸಲಿದೆ. ಇದಲ್ಲದೆ ಆಕ್ಸಿಲೆರೋಮೀಟರ್, ಪ್ರಾಕ್ಸಿಮಿಟಿ ಸೆನ್ಸಾರ್ ಅನ್ನು ಒಳಗೊಂಡಿವೆ.

ಬೆಲೆ ಮತ್ತು ಲಭ್ಯತೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ A04e ಸ್ಮಾರ್ಟ್‌ಫೋನ್ 3GB RAM + 32GB ಆಯ್ಕೆಗೆ 9,299ರೂ. ಬೆಲೆ ಹೊಂದಿದೆ. ಇದರ 3GB + 64GB ಆಯ್ಕೆಗೆ 9,999ರೂ. ಬೆಲೆ ಪಡೆದಿದೆ. ಜೊತೆಗೆ 4GB + 128GB ಮಾದರಿಯ ಬೆಲೆ 11,499ರೂ.ಆಗಿದೆ. ಇದು ಲೈಟ್ ಬ್ಲೂ ಮತ್ತು ತಾಮ್ರದ ಬಣ್ಣದ ಆಯ್ಕೆಗಳಲ್ಲಿ ಬರಲಿದೆ.
ಇನ್ನು ಸ್ಯಾಮ್‌ಸಂಗ್ ಗ್ಯಾಲಕ್ಸಿ A04 ಸ್ಮಾರ್ಟ್‌ಫೋನ್ 4GB RAM + 64GBಆಯ್ಕೆಗೆ 11,999ರೂ. ಬೆಲೆ ಹೊಂದಿದೆ. ಇದರ 4GB RAM + 128GB ಮಾದರಿಯ ಬೆಲೆ 12,999ರೂ.ಆಗಿದೆ. ಈ ಸ್ಮಾರ್ಟ್‌ಫೋನ್ ಗ್ರೀನ್, ಬ್ಲ್ಯಾಕ್ ಮತ್ತು ತಾಮ್ರ ಬಣ್ಣದ ಆಯ್ಕೆಗಳಲ್ಲಿ ಬರುತ್ತದೆ.

ಆಫರ್ ಏನಿದೆ?
ಇನ್ನು ಲಾಂಚ್ ಆಫರ್‌ನಲ್ಲಿ ಈ ಫೋನ್‌ಗಳನ್ನು ಖರೀದಿಸುವ ಗ್ರಾಹಕರು 999ರೂ. ಗಳಿಂದ ಪ್ರಾರಂಭವಾಗುವ ಆಕರ್ಷಕ EMI ಆಯ್ಕೆ ಪಡೆದುಕೊಳ್ಳಬಹುದು. ಇದಲ್ಲದೆ ಹೆಚ್ಚುವರಿಯಾಗಿ, ಸ್ಯಾಮ್‌ಸಂಗ್ ಫೈನಾನ್ಸ್+, ಝೆಸ್ಟ್ ಮತ್ತು ಐಡಿಎಫ್‌ಸಿ ಫಸ್ಟ್ ಬಳಸಿಕೊಂಡು ಗ್ರಾಹಕರು 1000ರೂ. ಮೌಲ್ಯದ ಕ್ಯಾಶ್‌ಬ್ಯಾಕ್ ಪಡೆಯಬಹುದು. ಈ ಸ್ಮಾರ್ಟ್‌ಫೋನ್‌ಗಳು ಇದೇ ಡಿಸೆಂಬರ್ 20, 2022 ರಿಂದ ಸೇಲ್ ಆಗಲಿವೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470