Home
ಸುದ್ದಿಜಾಲ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A04 ಸ್ಮಾರ್ಟ್‌ಫೋನ್‌ ಅನಾವರಣ! ಫೀಚರ್ಸ್‌ ಹೇಗಿದೆ?

ದಕ್ಷಿಣ ಕೊರಿಯಾದ ಟೆಕ್‌ ದೈತ್ಯ ಸ್ಯಾಮ್‌ಸಂಗ್‌ ಕಂಪೆನಿ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ತನ್ನ ಗ್ಯಾಲಕ್ಸಿ ಎಂ, ಗ್ಯಾಲಕ್ಸಿ ಎ, ಗ್ಯಾಲಕ್ಸಿ ಎಫ್‌, ಗ್ಯಾಲಕ್ಸಿ ಎಸ್‌ ಸರಣಿಯಲ್ಲಿ ಅನೇಕ ಸ್ಮಾರ್ಟ್‌ಫೋನ್‌ಗಳನ್ನು ಲಾಂಚ್‌ ಮಾಡಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಜಾಗತಿಕ ಮಾರುಕಟ್ಟೆಯಲ್ಲಿ ಹೊಸ ಗ್ಯಾಲಕ್ಸಿ A04 ಸ್ಮಾರ್ಟ್‌ಫೋನ್‌ ಅನಾವರಣಗಳಿಸಲಾಗಿದೆ. ಇದು ಸ್ಯಾಮ್‌ಸಂಗ್‌ ಎಕ್ಸಿನೋಸ್‌ 850 ಪ್ರೊಸೆಸರ್‌ ಬಲದಲ್ಲಿ ಕಾರ್ಯನಿರ್ವಹಿಸಲಿದೆ.

ಸ್ಯಾಮ್‌ಸಂಗ್‌

ಹೌದು, ಸ್ಯಾಮ್‌ಸಂಗ್‌ ಕಂಪೆನಿ ತನ್ನ ಹೊಸ ಗ್ಯಾಲಕ್ಸಿ A04 ಸ್ಮಾರ್ಟ್‌ಫೋನ್‌ ಅನಾವರಣಗೊಳಿಸಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಸೈಲೆಂಟ್‌ ಆಗಿ ಎಂಟ್ರಿ ನೀಡಿರುವ ಈ ಸ್ಮಾರ್ಟ್‌ಫೋನ್‌ ಗ್ಯಾಲಕ್ಸಿ A03 ಫೋನಿನ ಉತ್ತರಾಧಿಕಾರಿಯಾಗಿದೆ. ಇದು ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಪಡೆದಿದೆ. ಜೊತೆಗೆ 5,000mAh ಸಾಮರ್ಥ್ಯ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನಿನ ಫೀಚರ್ಸ್‌ ಹೇಗಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A04 ಸ್ಮಾರ್ಟ್‌ಫೋನ್‌ 6.5-ಇಂಚಿನ ಫುಲ್‌ HD+ ಐಪಿಎಸ್ ಎಲ್‌ಸಿಡಿ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಇದು ಇನ್ಫಿನಿಟಿ ವಿ ಡಿಸ್‌ಪ್ಲೇ ಆಗಿದ್ದು, 60Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 82.5 % ಸ್ಕ್ರೀನ್‌ ಟು ಬಾಡಿ ಅನುಪಾತವನ್ನು ಒಳಗೊಂಡಿದೆ ಎನ್ನಲಾಗಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A04 ಸ್ಮಾರ್ಟ್‌ಫೋನ್‌ ಸ್ಯಾಮ್‌ಸಂಗ್‌ ಎಕ್ಸಿನೋಸ್‌ 850 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ನಲ್ಲಿ ಒಂದು UI ಕೋರ್ 4.1 ಜೊತೆಗೆ ರನ್ ಆಗಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಇನ್ನು RAM ರೂಪಾಂತರಗಳು ಮಾರುಕಟ್ಟೆಗೆ ಬದಲಾಗಬಹುದು ಎಂದು ಹೇಳಲಾಗಿದೆ.

ಕ್ಯಾಮೆರಾ ಎಷ್ಟಿದೆ?

ಕ್ಯಾಮೆರಾ ಎಷ್ಟಿದೆ?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A04 ಸ್ಮಾರ್ಟ್‌ಫೋನ್‌ ಹಿಂಬದಿಯಲ್ಲಿ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ f/2.4 ಲೆನ್ಸ್‌ ಅನ್ನು ಹೊಂದಿದೆ. ಇನ್ನು ಈ ಕ್ಯಾಮರಾ ಸೆಟಪ್ ಅನ್ನು ಎಲ್ಇಡಿ ಫ್ಲ್ಯಾಷ್‌ನೊಂದಿಗೆ ಜೋಡಿಸಲಾಗಿದೆ. ಇದಲ್ಲದೆ ಸೆಲ್ಫಿಗಳು ಮತ್ತು ವೀಡಿಯೊ ಚಾಟ್‌ಗಳಿಗಾಗಿ 5 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A04 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 10W ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VoLTE, ಡ್ಯುಯಲ್-ಸಿಮ್ ಬೆಂಬಲ, Wi-Fi, ಬ್ಲೂಟೂತ್ 5.0 ಮತ್ತು GPS ಅನ್ನು ಬೆಂಬಲಿಸಲಿದೆ. ಇದು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಮತ್ತು ಟೈಪ್-ಸಿ ಯುಎಸ್‌ಬಿ ಪೋರ್ಟ್ ಅನ್ನು ಸಹ ಹೊಂದಿರುತ್ತದೆ. ಜೊತೆಗೆ ಫೇಸ್ ಅನ್‌ಲಾಕ್, ಪಿನ್ ಮತ್ತು ಪಾಸ್‌ವರ್ಡ್ ಪ್ರೊಟೆಕ್ಷನ್‌ ಅನ್ನು ನೀಡಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A04 ಸ್ಮಾರ್ಟ್‌ಫೋನ್‌ ಬೆಲೆ ಎಷ್ಟಿರಲಿದೆ ಎಂಬುದರ ಬಗ್ಗೆ ಕಂಪೆನಿ ಯಾವುದೇ ಮಾಹಿತಿ ಬಹಿರಂಗಪಡಿಸಿಲ್ಲ.ಆದರೆ ಗ್ಯಾಲಕ್ಸಿ A04 ಸ್ಮಾರ್ಟ್‌ಫೋನಿನ ಬೇಸ್‌ ಮಾಡೆಲ್‌ ಬೆಲೆ 13,000ರೂ. ಒಳಗೆ ಇರಲಿದೆ ಎನ್ನಲಾಗಿದೆ. ಈ ಸ್ಮಾರ್ಟ್‌ಫೋನ್‌ ಕಪ್ಪು, ತಾಮ್ರ, ಹಸಿರು ಮತ್ತು ಬಿಳಿ ಬಣ್ಣದ ಆಯ್ಕೆಗಳಲ್ಲಿ ದೊರೆಯಲಿದೆ.

ಸ್ಯಾಮ್‌ಸಂಗ್‌

ಇದಲ್ಲದೆ ಸ್ಯಾಮ್‌ಸಂಗ್‌ ಕಂಪೆನಿ ಇತ್ತೀಚಿಗೆ ತನ್ನ ಹೊಸ ಗ್ಯಾಲಕ್ಸಿ Z ಫೋಲ್ಡ್‌ 4 ಮತ್ತು ಗ್ಯಾಲಕ್ಸಿ Z ಫ್ಲಿಪ್ 4 ಫೋನ್‌ ಲಾಂಚ್‌ ಮಾಡಿದೆ. ಇದರಲ್ಲಿ ಗ್ಯಾಲಕ್ಸಿ Z ಫೋಲ್ಡ್‌ 4 ಟ್ರಿಪಲ್‌ ರಿಯರ್‌ ಕ್ಯಾಮೆರಾ ಹಾಗೂ ಡ್ಯುಯಲ್‌ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಆದರೆ ಗ್ಯಾಲಕ್ಸಿ Z ಫ್ಲಿಪ್ 4 ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದೆ.

Best Mobiles in India

English summary
Samsung Galaxy A04 With 5,000mAh Battery Unveiled
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+