ಸ್ಯಾಮ್‌ಸಂಗ್ ಫೋನ್ ಖರೀದಿಗೂ ಮುನ್ನ ಈ ಆಫರ್ ಗಮನಿಸಿ!..ಭಾರೀ ಡಿಸ್ಕೌಂಟ್!
ದಕ್ಷಿಣ ಕೊರಿಯಾದ ಟೆಕ್ ದೈತ್ಯ ಸ್ಯಾಮ್‌ಸಂಗ್ ಅಗ್ಗದ ಬೆಲೆಯಿಂದ ದುಬಾರಿ ಬೆಲೆಯ ಹಲವು ಫೋನ್‌ಗಳ ಆಯ್ಕೆ ಒಳಗೊಂಡಿದೆ. ಅವುಗಳ ಪೈಕಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A04e ಫೋನ್ ಎಂಟ್ರಿ ಲೆವೆಲ್ ಮಾದರಿಯಲ್ಲಿ ಗುರುತಿಸಿಕೊಂಡಿದ್ದು, ಇದೀಗ ಭರ್ಜರಿ ಬೆಲೆ ಇಳಿಕೆಯಿಂದಾಗಿ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿದೆ.
ಹೌದು, ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A04e ಸ್ಮಾರ್ಟ್‌ಫೋನ್ ಶೇ.27% ರಷ್ಟು ರಿಯಾಯಿತಿ ಪಡೆದಿದೆ. 4GB+128GB ಸ್ಟೋರೇಜ್ ಈ ಫೋನ್ ಬೆಲೆ 14,999ರೂ. ಇದ್ದು, ಈಗ 10,999ರೂ. ಗಳ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಇದರೊಂದಿಗೆ ನೋ ಕಾಸ್ಟ್ ಇಎಮ್‌ಐ ಸೌಲಭ್ಯದ ಆಯ್ಕೆಗಳು ಹಾಗೂ ಆಯ್ದ ಕೆಲವು ಬ್ಯಾಂಕ್‌ಗಳಿಂದ ಹೆಚ್ಚುವರಿ ರಿಯಾಯಿತಿ ಸಹ ಲಭ್ಯವಾಗಲಿದೆ. ಹಾಗಾದರೇ ಸ್ಯಾಮ್‌ಸಂಗ್ ಗ್ಯಾಲಕ್ಸಿ A04e ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಗ್ಯಾಲಕ್ಸಿ A04e ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ : ಸ್ಯಾಮ್‌ಸಂಗ್ ಗ್ಯಾಲಕ್ಸಿ A04e ಸ್ಮಾರ್ಟ್‌ಫೋನ್ 6.5 ಇಂಚಿನ ಫುಲ್ HD+ ಐಪಿಎಸ್ ಎಲ್‌ಸಿಡಿ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 720 x 1520 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಇದು ಇನ್ಫಿನಿಟಿ ವಿ ಡಿಸ್‌ಪ್ಲೇ ಆಗಿದ್ದು, 60Hz ರಿಫ್ರೆಶ್ ರೇಟ್ ಅನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 82.5 % ಸ್ಕ್ರೀನ್ ಟು ಬಾಡಿ ಅನುಪಾತವನ್ನು ಒಳಗೊಂಡಿದೆ ಎನ್ನಲಾಗಿದೆ.
ಗ್ಯಾಲಕ್ಸಿ A04e ಪ್ರೊಸೆಸರ್ ಪವರ್ ಯಾವುದು : ಸ್ಯಾಮ್‌ಸಂಗ್ ಗ್ಯಾಲಕ್ಸಿ A04e ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೋ G35 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಓಎಸ್ ಬೆಂಬಲ ಪಡೆದಿದೆ. ಹಾಗೆಯೇ ಈ ಫೋನ್ 3GB + 32GB, 4GB + 64GB ಮತ್ತು 4GB + 128GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ ಬಾಹ್ಯ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಗ್ಯಾಲಕ್ಸಿ A04e ಡ್ಯುಯಲ್ ಕ್ಯಾಮೆರಾ ಸೆನ್ಸಾರ್ : ಸ್ಯಾಮ್‌ಸಂಗ್ ಗ್ಯಾಲಕ್ಸಿ A04e ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ f/2.4 ಲೆನ್ಸ್ ಅನ್ನು ಹೊಂದಿದೆ. ಇನ್ನು ಈ ಕ್ಯಾಮರಾ LED ಫ್ಲ್ಯಾಶ್ ಸೌಲಭ್ಯವನ್ನು ಪಡೆದಿದೆ. ಇದಲ್ಲದೆ 5 ಮೆಗಾ ಪಿಕ್ಸೆಲ್ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.
ಗ್ಯಾಲಕ್ಸಿ A04e ಬ್ಯಾಟರಿ ಮತ್ತು ಇತರೆ : ಸ್ಯಾಮ್‌ಸಂಗ್ ಗ್ಯಾಲಕ್ಸಿ A04e ಸ್ಮಾರ್ಟ್‌ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಸಿಮ್, 4G, ವೈಫೈ 802.11 ಎಸಿ, ಬ್ಲೂಟೂತ್ 5.0, ಜಿಪಿಎಸ್ ಆಯ್ಕೆಗಳನ್ನು ಪಡೆದಿದೆ. ಇನ್ನು ಈ ಫೋನ್ 188 ಗ್ರಾಂ ತೂಕ ಹೊಂದಿದ್ದು, 164.2 × 75.9 × 9.1mm ಸುತ್ತಳತೆ ಪಡೆದಿದೆ.
ಗ್ಯಾಲಕ್ಸಿ A04e ಮೆಮೊರಿ ಮತ್ತು ಕಲರ್ ಆಯ್ಕೆ : ಸ್ಯಾಮ್‌ಸಂಗ್ ಗ್ಯಾಲಕ್ಸಿ A04e 3GB + 32GB, 4GB + 64GB ಮತ್ತು 4GB + 128GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದೆ. ಇನ್ನು ಈ ಫೋನ್ ಬ್ಲ್ಯಾಕ್, ಆರೆಂಜ್ ಕಾಪರ್ ಹಾಗೂ ಲೈಟ್ ಬ್ಲೂ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯ.


Click it and Unblock the Notifications








