ಸ್ಯಾಮ್‌ಸಂಗ್‌ ಗ್ಯಾಲಕ್ಸಿ A04e ಸ್ಮಾರ್ಟ್‌ಫೋನ್‌ ಅನಾವರಣ!..ಫೀಚರ್ಸ್‌ ಏನು?

|

ದಕ್ಷಿಣ ಕೊರಿಯಾದ ಟೆಕ್‌ ದೈತ್ಯ ಸ್ಯಾಮ್‌ಸಂಗ್‌ ಕಂಪೆನಿ ಈಗಾಗಲೇ ಭಿನ್ನ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಜನಪ್ರಿಯ ಗ್ಯಾಲಕ್ಸಿ A ಸರಣಿಯಲ್ಲಿ ಇತ್ತೀಚಿಗೆ ಗ್ಯಾಲಕ್ಸಿ A04 ಸ್ಮಾರ್ಟ್‌ಫೋನ್‌ ಅನ್ನು ಅನಾವರಣ ಮಾಡಿದೆ. ಅದರ ಬೆನ್ನಲ್ಲೇ ಇದೀಗ ಸ್ಯಾಮ್‌ಸಂಗ್‌ ಹೊಸದಾಗಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A04e ಸ್ಮಾರ್ಟ್‌ಫೋನ್‌ ಅನ್ನು ಅನಾವರಣ ಮಾಡಿದ್ದು, ಗ್ರಾಹಕರಿಗೆ ಅಚ್ಚರಿ ಮೂಡಿಸಿದೆ.

ಗ್ಯಾಲಕ್ಸಿ A04e

ಹೌದು, ಸ್ಯಾಮ್‌ಸಂಗ್‌ ಕಂಪೆನಿ ತನ್ನ ಹೊಸ ಗ್ಯಾಲಕ್ಸಿ A04e ಸ್ಮಾರ್ಟ್‌ಫೋನ್‌ ಅನ್ನು ಘೋಷಿಸಿದೆ. ಈ ಸ್ಮಾರ್ಟ್‌ಫೋನ್‌ ಎಂಟ್ರಿ ಲೆವೆಲ್ ಮಾದರಿಯ ಫೋನ್‌ ಆಗಿದ್ದು, ಮೀಡಿಯಾ ಟೆಕ್ ಹಿಲಿಯೋ G35 ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದಿದೆ. ಹಾಗೆಯೇ ಈ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದ್ದು, ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದೆ.

ಗ್ಯಾಲಕ್ಸಿ A04e

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A04e ಸ್ಮಾರ್ಟ್‌ಫೋನಿನ ಪ್ರಾಥಮಿಕ ಕ್ಯಾಮರಾ 13 ಮೆಗಾ ಪಿಕ್ಸಲ್‌ ಸೆನ್ಸಾರ್‌ನಲ್ಲಿದ್ದು, 3GB + 32GB, 4GB + 64GB ಮತ್ತು 4GB + 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಒಳಗೊಂಡಿದೆ. ಹಾಗೆಯೇ ಇದು ಆಂಡ್ರಾಯ್ಡ್‌ 12 ಓಎಸ್‌ ಸಪೋರ್ಟ್‌ ಸಹ ಪಡೆದಿದೆ. ಹಾಗಾದರೇ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A04e ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A04e ಸ್ಮಾರ್ಟ್‌ಫೋನ್‌ 6.5 ಇಂಚಿನ ಫುಲ್‌ HD+ ಐಪಿಎಸ್ ಎಲ್‌ಸಿಡಿ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 720 x 1520 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಇದು ಇನ್ಫಿನಿಟಿ ವಿ ಡಿಸ್‌ಪ್ಲೇ ಆಗಿದ್ದು, 60Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 82.5 % ಸ್ಕ್ರೀನ್‌ ಟು ಬಾಡಿ ಅನುಪಾತವನ್ನು ಒಳಗೊಂಡಿದೆ ಎನ್ನಲಾಗಿದೆ.

ಪ್ರೊಸೆಸರ್‌ ಪವರ್ ಯಾವುದು?

ಪ್ರೊಸೆಸರ್‌ ಪವರ್ ಯಾವುದು?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A04e ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹಿಲಿಯೋ G35 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಓಎಸ್‌ ಬೆಂಬಲ ಪಡೆದಿದೆ. ಹಾಗೆಯೇ ಈ ಫೋನ್ 3GB + 32GB, 4GB + 64GB ಮತ್ತು 4GB + 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಒಳಗೊಂಡಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ ಬಾಹ್ಯ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಡ್ಯುಯಲ್ ಕ್ಯಾಮೆರಾ ಸೆನ್ಸಾರ್

ಡ್ಯುಯಲ್ ಕ್ಯಾಮೆರಾ ಸೆನ್ಸಾರ್

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A04e ಸ್ಮಾರ್ಟ್‌ಫೋನ್‌ ಹಿಂಬದಿಯಲ್ಲಿ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ f/2.4 ಲೆನ್ಸ್‌ ಅನ್ನು ಹೊಂದಿದೆ. ಇನ್ನು ಈ ಕ್ಯಾಮರಾ LED ಫ್ಲ್ಯಾಶ್‌ ಸೌಲಭ್ಯವನ್ನು ಪಡೆದಿದೆ. ಇದಲ್ಲದೆ 5 ಮೆಗಾ ಪಿಕ್ಸೆಲ್ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A04e ಸ್ಮಾರ್ಟ್‌ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಸಿಮ್, 4G, ವೈಫೈ 802.11 ಎಸಿ, ಬ್ಲೂಟೂತ್ 5.0, ಜಿಪಿಎಸ್ ಆಯ್ಕೆಗಳನ್ನು ಪಡೆದಿದೆ. ಇನ್ನು ಈ ಫೋನ್ 188 ಗ್ರಾಂ ತೂಕ ಹೊಂದಿದ್ದು, 164.2 × 75.9 × 9.1mm ಸುತ್ತಳತೆ ಪಡೆದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A04e ಸ್ಮಾರ್ಟ್‌ಫೋನ್‌ ಬೆಲೆ ಎಷ್ಟಿರಲಿದೆ ಎಂಬುದರ ಬಗ್ಗೆ ಕಂಪೆನಿ ಯಾವುದೇ ಮಾಹಿತಿ ಬಹಿರಂಗಪಡಿಸಿಲ್ಲ. ಇನ್ನು ಈ ಫೋನ್ ಬ್ಲ್ಯಾಕ್‌, ಆರೆಂಜ್ ಕಾಪರ್ ಹಾಗೂ ಲೈಟ್‌ ಬ್ಲೂ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಾಗಲಿದೆ.

Best Mobiles in India

English summary
Samsung Galaxy A04e with MediaTek Helio G35 announced: Specifications.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X