Home
ಸುದ್ದಿಜಾಲ

ಸ್ಯಾಮ್‌ಸಂಗ್‌ನ ಈ ಬಹು ಬೇಡಿಕೆಯ ಫೋನ್‌ಗೆ 27% ಡಿಸ್ಕೌಂಟ್‌!

ಸ್ಮಾರ್ಟ್‌ಫೋನ್‌ಗಳ ವಿಭಾಗದಲ್ಲಿ ಬಹಳ ವಿಶೇಷತೆ ಪಡೆದಿರುವ ಸ್ಯಾಮ್‌ಸಂಗ್‌ ಫೋನ್‌ಗಳು ಗ್ರಾಹಕರಿಗೆ ಅಚ್ಚು ಮೆಚ್ಚು. ಅದರಲ್ಲೂ ಕಾರ್ಯಕ್ಷಮತೆ ಹಾಗೂ ಕ್ಯಾಮೆರಾ ಫೀಚರ್ಸ್‌, ದೀರ್ಘ ಬಾಳಿಕೆ ಸಾಮರ್ಥ್ಯದ ಮೂಲಕ ಇವು ತಮ್ಮದೇ ಆದ ಜನಪ್ರಿಯತೆ ಪಡೆದುಕೊಂಡಿವೆ. ಈ ನಡುವೆ ಸ್ಯಾಮ್‌ಸಂಗ್‌ನ ಈ ಫೋನ್‌ಗೆ 27% ರಿಯಾಯಿತಿ ನೀಡಲಾಗಿದೆ.

ಹೌದು, ಸ್ಯಾಮ್‌ಸಂಗ್‌ ಫೋನ್‌ಗಳು ಆಗಾಗ್ಗೆ ವಿಶೇಷವಾದ ಆಫರ್‌ ಬೆಲೆಯ ಮೂಲಕ ಕಾಣಿಸಿಕೊಳ್ಳುತ್ತಿರುತ್ತವೆ. ಅದರಂತೆ ಈಗ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A04s (Samsung Galaxy A04s) ಫೋನ್‌ಗೆ ಭರ್ಜರಿ ರಿಯಾಯಿತಿ ನೀಡಲಾಗಿದ್ದು, ಈ ಫೋನ್‌ ಟ್ರಿಪಲ್‌ ಕ್ಯಾಮೆರಾ ರಚನೆ ಹಾಗೂ 5000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ ಹಾಗೂ ಸ್ಯಾಮ್‌ಸಂಗ್‌ ಎಕ್ಸಿನೋಸ್ 850 CPU ಬಲ ಪಡೆದುಕೊಂಡಿದೆ. ಹಾಗಿದ್ರೆ, ಇದರ ಪ್ರಮುಖ ಫೀಚರ್ಸ್ ಹಾಗೂ ಆಫರ್‌ ಬೆಲೆ ವಿವರ ತಿಳಿಯೋಣ ಬನ್ನಿ.

ಸ್ಯಾಮ್‌ಸಂಗ್‌ನ ಈ ಬಹು ಬೇಡಿಕೆಯ ಫೋನ್‌ಗೆ 27% ಡಿಸ್ಕೌಂಟ್‌!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A04s ಡಿಸ್‌ಪ್ಲೇ ವಿವರ: ಈ ಫೋನ್ 6.5 ಇಂಚಿನ ಪಿಎಲ್‌ಎಸ್‌ ಎಲ್‌ಸಿಡಿ ಡಿಸ್‌ಪ್ಲೇ ಹೊಂದಿದ್ದು, ಇದು 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯ ಪಡೆದಿದೆ. ಜೊತೆಗೆ 270ppi ಪಿಕ್ಸೆಲ್ ಸಾಂದ್ರತೆ, 20:9 ಆಕಾರ ಅನುಪಾತದ ಮೂಲಕ ವಿಶೇಷ ಎನಿಸಿದೆ. ಇದೆಲ್ಲಕ್ಕೂ ಮಿಗಿಲಾಗಿ ಕ್ಯಾಮೆರಾ ಉದ್ದೇಶಕ್ಕೆ ವಾಟರ್‌ಡ್ರಾಪ್ ಶೈಲಿ ಪಡೆದುಕೊಂಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A04s ಪ್ರೊಸೆಸರ್ ಮಾಹಿತಿ: ಇನ್ನು ಈ ಫೋನ್ ಸ್ಯಾಮ್‌ಸಂಗ್ ಎಕ್ಸಿನೋಸ್ 850 CPU ಪ್ರೊಸೆಸರ್‌ ಬಲ ಹೊಂದಿದ್ದು, ಇದು ಕಾರ್ಟೆಕ್ಸ್ A53 ವಿನ್ಯಾಸ ಮತ್ತು ಗರಿಷ್ಠ 2GHz ಆಪರೇಟಿಂಗ್ ವೇಗದೊಂದಿಗೆ ಆಕ್ಟಾ-ಕೋರ್ CPU ನೊಂದಿಗೆ ಪ್ಯಾಕ್‌ ಆಗಿದೆ. ಜೊತೆಗೆ ಉತ್ತಮ ಕಾರ್ಯಕ್ಷಮತೆ ಮತ್ತು ಅತ್ಯುತ್ತಮ ದೃಶ್ಯಗಳಿಗಾಗಿ 4GB RAM ಮತ್ತು ಮಾಲಿ-G52 MP1 GPU ಆಯ್ಕೆ ಪಡೆದುಕೊಂಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A04s ಕ್ಯಾಮೆರಾ ರಚನೆ: ಉಳಿದಂತೆ ಈ ಫೋನ್ ಟ್ರಿಪಲ್ ಕ್ಯಾಮೆರಾ ರಚನೆ ಹೊಂದಿದ್ದು, ಈ ಮೂಲಕ ಅದ್ಭುತ ಫೋಟೋಗಳನ್ನು ಸೆರೆಹಿಡಿಯಬಹುದಾಗಿದೆ. ಅಂದರೆ 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ನೊಂದಿಗೆ 2 ಮೆಗಾಪಿಕ್ಸೆಲ್ f/2.4 ಡೆಪ್ತ್ ಲೆನ್ಸ್ ಸೆನ್ಸರ್‌ ಇವೆ. ಇದರೊಂದಿಗೆ 5 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಆಯ್ಕೆ ನೀಡಲಾಗಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A04s ಬ್ಯಾಟರಿ ಸಾಮರ್ಥ್ಯ ಹಾಗೂ ಇತರೆ: ಇದರ ಬ್ಯಾಟರಿ ಸಾಮರ್ಥ್ಯದ ವಿಚಾರಕ್ಕೆ ಬರುವುದಾದರೆ ಈ ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯಿಂದ ಪ್ಯಾಕ್ ಆಗಿದ್ದು, 18W ಫಾಸ್ಟ್ ಚಾರ್ಜಿಂಗ್ ಸಿಸ್ಟಮ್‌ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಜೊತೆಗೆ 4G, 3G, 2G ಬೆಂಬಲ, ಬ್ಲೂಟೂತ್ ಆವೃತ್ತಿ v5.2,ವೈ ಫೈ ಆವೃತ್ತಿ 802.11,ಮಿನಿ ಹೆಚ್‌ಡಿಎಮ್‌ಐ ಪೋರ್ಟ್, ಆಡಿಯೋ ಜ್ಯಾಕ್ ಸೇರಿದಂತೆ ಇತರೆ ಕನೆಕ್ಟಿವಿಟಿ ಆಯ್ಕೆ ಪಡೆದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A04s ಬೆಲೆ ಹಾಗೂ ಆಫರ್‌ ವಿವರ: ಈ ಫೋನ್‌ನ ಪ್ರಮುಖ ವಿಚಾರಕ್ಕೆ ಬಂದರೆ, ಇದು 17,990 ರೂ.ಗಳ ಸಾಮಾನ್ಯ ಬೆಲೆ ಹೊಂದಿದೆ. ಆದರೆ ನೀವು ಈಗ ಈ ಫೋನ್‌ ಅನ್ನು ಕೇವಲ 12,990ರೂ.ಗಳಿಗೆ ಖರೀದಿ ಮಾಡಬಹುದು. ಯಾಕೆಂದರೆ ಇದಕ್ಕೆ ಪ್ರಮುಖ ಇ-ಕಾಮರ್ಸ್‌ ಸೈಟ್‌ ಆಗಿರುವ ಅಮೆಜಾನ್ 27% ರಿಯಾಯಿತಿ ನೀಡಲಾಗಿದೆ. ಇಷ್ಟು ಮಾತ್ರವಲ್ಲದೆ ಕೆಲವು ಬ್ಯಾಂಕ್‌ ಕಾರ್ಡ್‌ ಬಳಕೆ ಮಾಡಿಕೊಂಡು ಇನ್ನೂ ಕಡಿಮೆ ಬೆಲೆಗೆ ಈ ಫೋನ್‌ ಖರೀದಿ ಮಾಡಬಹುದು.

ಸ್ಯಾಮ್‌ಸಂಗ್‌ನ ಈ ಬಹು ಬೇಡಿಕೆಯ ಫೋನ್‌ಗೆ 27% ಡಿಸ್ಕೌಂಟ್‌!

ಅದರಂತೆ ಫ್ಲಿಪ್‌ಕಾರ್ಟ್‌ನಲ್ಲಿ ಐಫೋನ್ 13 ಗೂ ಸಹ 17% ಡಿಸ್ಕೌಂಟ್‌ ನೀಡಲಾಗಿದೆ. ಈ ಮೂಲಕ ಗ್ರಾಹಕರು 69,900 ರೂ.ಗಳ ಬೆಲೆ ಇರುವ ಈ ಫೋನ್‌ ಅನ್ನು 57,499ರೂ.ಗಳಿಗೆ ಕೊಂಡುಕೊಳ್ಳಬಹುದು.ಇದರೊಂದಿಗೆ ವಿನಿಮಯ ಆಫರ್‌ ಸಹ ಇದ್ದು, 35,600 ವರೆಗೆ ಉಳಿಸಬಹುದು.ಈ ಫೋನ್ 6.1 ಇಂಚಿನ OLED ಡಿಸ್‌ಪ್ಲೇ ಹೊಂದಿದ್ದು, ಆಪಲ್‌ A15 ಬಯೋನಿಕ್ ಚಿಪ್‌ಸೆಟ್ ಬಲ ಪಡೆದಿದೆ.

Best Mobiles in India

English summary
Samsung Galaxy A04s phone has been given a huge discount, this phone has a triple camera setup and a 5000mAh capacity battery.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+