ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A04s ಫೋನ್ ಲಾಂಚ್! ಬೆಲೆ ಎಷ್ಟು?
ಭಾರತದ ಮೊಬೈಲ್ ಮಾರುಕಟ್ಟೆಯಲ್ಲಿ ಸ್ಯಾಮ್‌ಸಂಗ್ ಕಂಪೆನಿ ಭಾರಿ ಜನಪ್ರಿಯತೆ ಪಡೆದಿದೆ. ಸ್ಯಾಮ್‌ಸಂಗ್ ಕಂಪೆನಿ ತನ್ನ ಗ್ಯಾಲಕ್ಸಿ ಎ, ಗ್ಯಾಲಕ್ಸಿ ಎಂ, ಗ್ಯಾಲಕ್ಸಿ ಎಸ್ ಸರಣಿಯ ಫೋನ್‌ಗಳ ಜೊತೆಗೆ ಫೋಲ್ಡೇಬಲ್ ಫೋನ್‌ಗಳನ್ನು ಕೂಡ ಪರಿಚಯಿಸುತ್ತಾ ಬಂದಿದೆ. ಇದೀಗ ತನ್ನ ಹೊಸ ಗ್ಯಾಲಕ್ಸಿ A04s ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಎಕ್ಸಿನೋಸ್ 850 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದೆ.

ಹೌದು, ಸ್ಯಾಮ್‌ಸಂಗ್ ಕಂಪೆನಿ ತನ್ನ ಗ್ಯಾಲಕ್ಸಿ ಎ ಸರಣಿಯಲ್ಲಿ ಹೊಸ ಗ್ಯಾಲಕ್ಸಿ A04s ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ವಾಯರ್‌ಲೆಸ್ ಮತ್ತು ವೈರ್ಡ್ ಹೆಡ್‌ಫೋನ್‌ಗಳ ಮೂಲಕ ಡಾಲ್ಬಿ ಅಟ್ಮೋಸ್ ಆಡಿಯೊವನ್ನು ಬೆಂಬಲಿಸಲಿದೆ. ಗ್ಯಾಲಕ್ಸಿ A04s ಸ್ಮಾರ್ಟ್‌ಫೋನ್ RAM ಪ್ಲಸ್ ಫೀಚರ್ಸ್ ಅನ್ನು ಪಡೆದುಕೊಂಡಿದೆ. ಇದರಿಂದ ಸ್ಮಾರ್ಟ್‌ಫೋನ್ ಕಾರ್ಯಕ್ಷಮತೆಗಾಗಿ ಬಳಕೆಯಾಗದ ಸ್ಟೋರೇಜ್ ಅನ್ನು ಮೆಮೊರಿಯಾಗಿ ಬಳಸುವುದಕ್ಕೆ ಅನುಮತಿಸಲಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನಿನ ವಿಶೇಷ ಫೀಚರ್ಸ್‌ಗಳೇನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿಶೇಷತೆ ಏನು?
ಸ್ಯಾಮ್‌ಸಂಗ್ ಗ್ಯಾಲಕ್ಸಿ A04s ಸ್ಮಾರ್ಟ್‌ಫೋನ್ 6.5 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಇನ್ಪಿನಿಟಿ ವಿ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 720 x 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಇದು 80.7% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಪಡೆದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಅನ್ನು ಬೆಂಬಲಿಸಲಿದೆ.

ಪ್ರೊಸೆಸರ್ ಬಲ ಹೇಗಿದೆ?
ಸ್ಯಾಮ್‌ಸಂಗ್ ಗ್ಯಾಲಕ್ಸಿ A04s ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಎಕ್ಸಿನೋಸ್ 850 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 12 ನಲ್ಲಿ ಒಂದು UI ಕೋರ್ 4.1 ಜೊತೆಗೆ ರನ್ ಆಗುತ್ತದೆ. ಹಾಗೆಯೇ 4GB RAM ಮತ್ತು 64GB ಇನ್‌ಬಿಲ್ಟ್ ಸ್ಟೋರೇಜ್ ಅನ್ನು ಹೊಂದಿದೆ. ಇದಲ್ಲದೆ ಸ್ಯಾಮ್‌ಸಂಗ್ RAM ಪ್ಲಸ್ ಫೀಚರ್ಸ್ ಮೂಲಕ RAM ಅನ್ನು 8GB ವರೆಗೆ ವಿಸ್ತರಿಸಬಹುದು. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ಸೆಟ್‌ಅಪ್ ಏನಿದೆ?
ಸ್ಯಾಮ್‌ಸಂಗ್ ಗ್ಯಾಲಕ್ಸಿ A04s ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಮತ್ತು 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್‌ಗಳನ್ನು ಹೊಂದಿದೆ. ಇದಲ್ಲದೆ ಸೆಲ್ಫಿಗಳು ಮತ್ತು ವೀಡಿಯೊ ಚಾಟ್‌ಗಳಿಗಾಗಿ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ A04s ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 15W ವೇಗದ ಚಾರ್ಜಿಂಗ್‌ಗೆ ಬೆಂಬಲಿಸಲಿದೆ. ಇನ್ನು ಸಿಂಗಲ್ ಚಾರ್ಜ್‌ನಲ್ಲಿ ಎರಡು ದಿನಗಳ ಪ್ಲೇಬ್ಯಾಕ್ ಟೈಂ ನೀಡಲಿದೆ ಎಂದು ಸ್ಯಾಮ್‌ಸಂಗ್ ಕಂಪೆನಿ ಹೇಳಿಕೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ವೈಫೈ , ಬ್ಲೂಟೂತ್ v5, ಮತ್ತು GPS/ A-GPS ಸೇರಿವೆ. ಇದಲ್ಲದೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಸಹ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A04s ಸ್ಮಾರ್ಟ್‌ಫೋನ್ 4GB RAM + 64GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 13,499ರೂ.ಬೆಲೆ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಬ್ಲಾಕ್, ಕಾಪರ್ ಅಂಡ್ ಗ್ರೀನ್ ಬಣ್ಣಗಳ ಆಯ್ಕೆಯಲ್ಲಿ ಬರುತ್ತದೆ. ಇದು ಸ್ಯಾಮ್‌ಸಂಗ್‌ನ ಅಧಿಕೃತ ವೆಬ್‌ಸೈಟ್ ಮತ್ತು ಪ್ರಮುಖ ಆನ್‌ಲೈನ್ ಪೋರ್ಟಲ್‌ಗಳ ಮೂಲಕ ಖರೀದಿಸಲು ಲಭ್ಯವಿದೆ. ಸ್ಯಾಮ್‌ಸಂಗ್ ಗ್ಯಾಲಕ್ಸಿ A04s ಸ್ಮಾರ್ಟ್‌ಫೋನ್ ಅನ್ನು SBI ಬ್ಯಾಂಕ್ ಕ್ರೆಡಿಟ್ ಕಾರ್ಡ್‌ಗಳು, ಒಂದು ಕಾರ್ಡ್, ಸ್ಲೈಸ್ ಕಾರ್ಡ್‌ಗಳು ಮತ್ತು ಪ್ರಮುಖ NBFC ಪಾಲುದಾರರ ಮೂಲಕ ಖರೀದಿ ಮಾಡಿದರೆ 1,000ರೂ. ಕ್ಯಾಶ್‌ಬ್ಯಾಕ್ ದೊರೆಯಲಿದೆ.


Click it and Unblock the Notifications








