Home
ಸುದ್ದಿಜಾಲ

ಬಿಡುಗಡೆಗೂ ಮುನ್ನವೇ ಸ್ಯಾಮ್‌ಸಂಗ್ ಗ್ಯಾಲಕ್ಸಿ A05 ಫೋನಿನ ಬೆಲೆ ಲೀಕ್‌!

ಜನಪ್ರಿಯ ಸ್ಯಾಮ್‌ಸಂಗ್ ಮೊಬೈಲ್ ಸಂಸ್ಥೆಯು ಗ್ಯಾಲಕ್ಸಿ A ಸರಣಿಯಲ್ಲಿ ಹಲವು ಭಿನ್ನ ಮಾದರಿಯ ಫೋನ್‌ಗಳನ್ನು ಪರಿಚಯಿಸಿ ಗ್ರಾಹಕರ ಗಮನ ಸೆಳೆದಿದೆ. ಇತ್ತೀಚಿಗೆ ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A05s ಫೋನ್‌ ಬಿಡುಗಡೆ ಮಾಡಿದ್ದು, ಅದರ ಮುಂದುವರಿದ ಭಾಗವಾಗಿ ಸಂಸ್ಥೆಯು ಸ್ಯಾಮ್‌ಸಂಗ್ ಗ್ಯಾಲಕ್ಸಿ A05 ಲಾಂಚ್ ಮಾಡಲು ಸಜ್ಜಾಗಿದೆ. ಇದೀಗ ಮುಂಬರುವ ಈ ಫೋನಿನ ಬೆಲೆ ಬಹಿರಂಗವಾಗಿದೆ.

ಹೌದು, ಸ್ಯಾಮ್‌ಸಂಗ್ ಕಂಪನಿಯು ಸ್ಯಾಮ್‌ಸಂಗ್ ಗ್ಯಾಲಕ್ಸಿ A05 ಫೋನ್‌ ಅನ್ನು ಬಿಡುಗಡೆ ಮಾಡಲಿದ್ದು, ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹೆಲಿಯೊ G85 ಪ್ರೊಸೆಸರ್‌ ಒಳಗೊಂಡಿರುವುದು ಬಹುತೇಕ ಖಚಿತ ಆಗಿದೆ. ಅಲ್ಲದೇ ಈ ಫೋನ್‌ 4GB+64GB ಹಾಗೂ 6GB+128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಪಡೆದಿರಲಿದೆ. ಆದರೆ ಅಧಿಕೃತ ಲಾಂಚ್‌ಗೂ ಮುನ್ನವೇ ಈ ಫೋನ್‌ ಬೆಲೆ ಲೀಕ್ ಆಗಿದ್ದು, ಅಚ್ಚರಿ ಮೂಡಿಸಿದೆ.

ಬಿಡುಗಡೆಗೂ ಮುನ್ನವೇ ಸ್ಯಾಮ್‌ಸಂಗ್ ಗ್ಯಾಲಕ್ಸಿ A05 ಫೋನಿನ ಬೆಲೆ ಲೀಕ್‌!

ಲೀಕ್ ಮಾಹಿತಿ ಪ್ರಕಾರ ಸ್ಯಾಮ್‌ಸಂಗ್ ಗ್ಯಾಲಕ್ಸಿ A05 ಫೋನ್ 4GB+64GB ವೇರಿಯಂಟ್‌ ಬೆಲೆಯು 12,499ರೂ. ಎನ್ನಲಾಗಿದೆ. ಅದೇ ರೀತಿ 6GB + 128GB ವೇರಿಯಂಟ್‌ ದರದವು 14,999ರೂ. ಆಗಿರಲಿದೆ ಎಂದು ತಿಳಿದುಬಂದಿದೆ. ಹಾಗಾದರೇ ಗ್ಯಾಲಕ್ಸಿ A05 ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ ಹೀಗಿರಲಿದೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A05 ಸ್ಮಾರ್ಟ್‌ಫೋನ್‌ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ LCD ಡಿಸ್‌ಪ್ಲೇಯನ್ನು ಹೊಂದಿರಲಿದೆ. ಈ ಡಿಸ್‌ಪ್ಲೇ 1,080x2,4000 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿರಲಿದೆ. ಇನ್ನು ಡಿಸ್‌ಪ್ಲೇ 82.9% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಒಳಗೊಂಡಿರಲಿದೆ. ಇದಲ್ಲದೆ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿರಲಿದ್ದು, 393 ppi ಸಾಂದ್ರತೆಯಲ್ಲಿ ಬರಲಿದೆ. ಜೊತೆಗೆ ಈ ಡಿಸ್‌ಪ್ಲೇ 90Hz ರಿಫ್ರೆಶ್‌ ರೇಟ್‌ ಬೆಂಬಲದೊಂದಿಗೆ ಬರಲಿದೆ.

ಬಿಡುಗಡೆಗೂ ಮುನ್ನವೇ ಸ್ಯಾಮ್‌ಸಂಗ್ ಗ್ಯಾಲಕ್ಸಿ A05 ಫೋನಿನ ಬೆಲೆ ಲೀಕ್‌!

ಯಾವ ಪ್ರೊಸೆಸರ್‌ ಇರಲಿದೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A05 ಮೊಬೈಲ್ ಮೀಡಿಯಾಟೆಕ್ ಹೆಲಿಯೊ G85 ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ರನ್‌ ಆಗಲಿದೆ. ಹಾಗೆಯೇ 4GB+64GB ಹಾಗೂ 6GB+128GB ಆಂತರೀಕ ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆ ಪಡೆದಿರಲಿದ್ದು, ಇದಲ್ಲದೆ ಮೆಮೊರಿ ಕಾರ್ಡ್‌ ಬೆಂಬಲದೊಂದಿಗೆ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವ ಆಯ್ಕೆ ನೀಡಲಿದೆ.

ಕ್ಯಾಮೆರಾ ಸೆನ್ಸಾರ್ ಮಾಹಿತಿ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A05 ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿರುವ ಸಾಧ್ಯತೆಗಳಿವೆ. ಆ ಪೈಕಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಇರಲಿದ್ದು. ದ್ವಿತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಅನ್ನು ಹೊಂದಿರಲಿದೆ. ಇದಲ್ಲದೆ ಮುಂಭಾಗದಲ್ಲಿ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿರುವ ನಿರೀಕ್ಷೆಗಳಿವೆ.

ಬಿಡುಗಡೆಗೂ ಮುನ್ನವೇ ಸ್ಯಾಮ್‌ಸಂಗ್ ಗ್ಯಾಲಕ್ಸಿ A05 ಫೋನಿನ ಬೆಲೆ ಲೀಕ್‌!

ಬ್ಯಾಟರಿ ಪವರ್ ಮತ್ತು ಇತರೆ ಸೌಲಭ್ಯಗಳ ಮಾಹಿತಿ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A05 ಮೊಬೈಲ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿರಲಿದ್ದು, ಇದಕ್ಕೆ ಅನುಗುಣವಾಗಿ 25W ಫಾಸ್ಟ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್, 3.5 ಎಂಎಂ ಆಡಿಯೊ ಜಾಕ್ ಅನ್ನು ಪಡೆದಿರಲಿದೆ.

ಬೆಲೆ ಎಷ್ಟು

ಭಾರತೀಯ ಮಾರುಕಟ್ಟೆಯಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A05 ಮೊಬೈಲ್‌ ಅನ್ನು ಬಿಡುಗಡೆ ದಿನಾಂಕವನ್ನು ಸ್ಯಾಮ್‌ಸಂಗ್ ಇನ್ನೂ ಅಧಿಕೃತವಾಗಿ ದೃಢಪಡಿಸಿಲ್ಲ. ಆದರೆ ಲೀಕ್ ಮಾಹಿತಿ ಪ್ರಕಾರ ಈ ಫೋನ್‌ ಎರಡು ವೇರಿಯಂಟ್‌ ಪಡೆದಿರಲಿದ್ದು, ಅವುಗಳ ಬೆಲೆ ಕ್ರಮವಾಗಿ 4GB+64GB ವೇರಿಯಂಟ್‌ಗೆ 12,499ರೂ. ಹಾಗೆಯೇ 6GB + 128GB ವೇರಿಯಂಟ್‌ಗೆ 14,999ರೂ. ಆಗಿರಲಿದೆ ಎಂದು ತಿಳಿದುಬಂದಿದೆ.

Best Mobiles in India

English summary
Samsung Galaxy A05 Indian price leaked; before its official launch.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+