Home
ಸುದ್ದಿಜಾಲ

ಭಾರಿ ಸದ್ದು ಮಾಡಿದ್ದ ಸ್ಯಾಮ್‌ಸಂಗ್‌ನ ಈ ಫೋನ್‌ ಬೆಲೆಯಲ್ಲಿ ಭಾರಿ ಇಳಿಕೆ

ಕಳೆದ ವರ್ಷ ಭಾರತಕ್ಕೆ ಎಂಟ್ರಿ ನೀಡಿ ಸಾಕಷ್ಟು ಸದ್ದು ಮಾಡಿದ್ದ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A05 ಫೋನ್‌ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ. ಈ ಸ್ಮಾರ್ಟ್‌ಫೋನ್‌ ಇದೀಗ ಹೊಸ ಬೆಲೆಯಲ್ಲಿ ಲಭ್ಯವಾಗುತ್ತಿದೆ. ಇನ್ನು ಬೆಲೆ ಕಡಿತದ ನಂತರದ ಹೊಸ ಬೆಲೆಯು RAM ಮತ್ತು ಶೇಖರಣಾ ಕಾನ್ಫಿಗರೇಶನ್‌ಗಳೆರಡಕ್ಕೂ ಅನ್ವಯಿಸುತ್ತದೆ. ಇದು ಕಂಪನಿಯ ಅಧಿಕೃತ ವೆಬ್‌ಸೈಟ್‌ನಲ್ಲಿಯೂ ಕೂಡ ಲೈವ್‌ ಆಗಿದೆ.

ಹೌದು, ಸ್ಯಾಮ್‌ಸಂಗ್‌ ಗ್ಯಾಲಕ್ಸಿ A05 ಸ್ಮಾರ್ಟ್‌ಫೋನ್‌ ಬೆಲೆಯನ್ನು ಭಾರತದಲ್ಲಿ ಕಡಿತಗೊಳಿಸಲಾಗಿದೆ. ಇದರಿಂದ ಮೊಬೈಲ್‌ ಖರೀದಿಸಬೇಕೆಂದುಕೊಂಡವರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಈ ಸ್ಮಾರ್ಟ್‌ಫೋನ್‌ 4GB + 64GB ಮತ್ತು 6GB + 128GB RAM ಮತ್ತು ಸ್ಟೋರೇಜ್ ಕಾನ್ಫಿಗರೇಶನ್‌ಗಳಲ್ಲಿ ಲಭ್ಯವಾಗುತ್ತಿದೆ. ಹಾಗಾದ್ರೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A05 ಫೋನ್‌ನ ಬೆಲೆ ಇಳಿಕೆಯ ನಂತರದ ಬೆಲೆ ಎಷ್ಟು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಭಾರಿ ಸದ್ದು ಮಾಡಿದ್ದ ಸ್ಯಾಮ್‌ಸಂಗ್‌ನ ಈ ಫೋನ್‌ ಬೆಲೆಯಲ್ಲಿ ಭಾರಿ ಇಳಿಕೆ

Samsung Galaxy A05 ಬೆಲೆಯನ್ನು ಕಡಿತಗೊಳಿಸಲಾಗಿದೆ
Samsung Galaxy A05 ಸ್ಮಾರ್ಟ್‌ಫೋನ್‌ 4GB + 64GB ಸ್ಟೋರೇಜ್‌ ಆಯ್ಕೆಯು 1,300ರೂ ಬೆಲೆ ಕಡಿತವನ್ನು ಪಡೆದುಕೊಂಡಿದೆ. ಇದರಿಂದ 9,999ರೂ ಬೆಲೆಯ ಬದಲಿಗೆ 8,699ರೂ ಬೆಲೆಯಲ್ಲಿ ಲಭ್ಯವಾಗಲಿದೆ. ಇನ್ನು ಸ್ಮಾರ್ಟ್‌ಫೋನ್‌ 6GB RAM + 128GB ಸ್ಟೋರೇಜ್ ಕಾನ್ಫಿಗರೇಶನ್‌ ಆಯ್ಕೆಯು 2,000ರೂ ಬೆಲೆ ಇಳಿಕೆಯನ್ನು ಪಡೆದಿದೆ. ಆದರಿಂದ ಈ ಸ್ಮಾರ್ಟ್‌ಫೋನ್‌ 12,999ರೂ. ಬೆಲೆ ಬದಲಿಗೆ 10,999ರೂ ಗಳಿಗೆ ದೊರೆಯಲಿದೆ. ಆಸಕ್ತ ಗ್ರಾಹಕರು ಸ್ಯಾಮ್‌ಸಂಗ್‌ನ ಅಧಿಕೃತ ವೆಬ್‌ಸೈಟ್ ಮತ್ತು ಕ್ರೋಮಾದಿಂದ ಪರಿಷ್ಕೃತ ಬೆಲೆಯಲ್ಲಿ ಖರೀದಿಸಬಹುದು.

Samsung Galaxy A05 ಫೀಚರ್ಸ್‌ ಹೇಗಿದೆ?
Samsung Galaxy A05 ಸ್ಮಾರ್ಟ್‌ಫೋನ್‌ 6.7 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿದೆ. ಇನ್ನು ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದ್ದು, 262 ppi ಸಾಂದ್ರತೆಯಲ್ಲಿದೆ. ಇದರೊಂದಿಗೆ 82.1% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಪಡೆದುಕೊಂಡಿದೆ.

Samsung Galaxy A05 ಪ್ರೊಸೆಸರ್‌ ಯಾವುದು?
Samsung Galaxy A05 ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್ ಹಿಲಿಯೋ G85 SoC ಪ್ರೊಸೆಸರ್‌ ವೇಗದಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ರನ್‌ ಆಗಲಿದೆ. ಹಾಗೆಯೇ 4GB RAM + 64GB ಹಾಗೂ 6GB RAM + 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದಲ್ಲಿ ಲಭ್ಯವಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಕೂಡ ಅವಕಾಶವನ್ನು ನೀಡಲಾಗಿದೆ.

Samsung Galaxy A05 ಕ್ಯಾಮೆರಾ ಸೆಟಪ್‌ ಏನಿದೆ?
Samsung Galaxy A05 ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ನಲ್ಲಿದೆ. ಇದರ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹಾಗೂ ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಪಡೆದುಕೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

Samsung Galaxy A05 ಬ್ಯಾಟರಿ ಮತ್ತು ಇತರೆ
Samsung Galaxy A05 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 25W ವೇಗದ ಚಾರ್ಜಿಂಗ್‌ ಬೆಂಬಲವನ್ನು ಪಡೆದುಕೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ, ಯುಎಸ್‌ಬಿ ಟೈಪ್‌ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಅನ್ನು ಒಳಗೊಂಡಿದೆ. ಇದಲ್ಲದೆ ಪ್ರಾಕ್ಸಿಮಿಟಿ ಸೆನ್ಸಾರ್‌, ಅಕ್ಸಿಲೆರೋ ಮೀಟರ್‌, ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಹೊಂದಿದೆ. ಈ ಫೋನ್‌ ತಿಳಿ ಹಸಿರು, ಕಪ್ಪು ಮತ್ತು ಬೆಳ್ಳಿ ಬಣ್ಣದ ಆಯ್ಕೆಯಲ್ಲಿ ದೊರೆಯಲಿದೆ.

Best Mobiles in India

English summary
Samsung Galaxy A05 Smartphone Gets A Price In India slashed
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+