Home
ಸುದ್ದಿಜಾಲ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A05 ಬೆಲೆ ವಿವರ ಬಹಿರಂಗ!..ಫೀಚರ್ಸ್‌ ನಿರೀಕ್ಷೆ ಏನು?

ಭಾರಿ ನಿರೀಕ್ಷೆ ಹುಟ್ಟುಹಾಕಿರುವ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A05 ಸ್ಮಾರ್ಟ್‌ಫೋನ್‌ ಬಿಡುಗಡೆಗೆ ತಯಾರಿ ಜೋರಾಗಿದೆ. ಈಗಾಗಲೇ ಫೀಚರ್ಸ್‌ ಸೋರಿಕೆಯ ಮೂಲಕ ಟೆಕ್‌ ವಲಯದಲ್ಲಿ ಹಲ್‌ಚಲ್‌ ಸೃಷ್ಟಿಸಿರುವ ಸ್ಯಾಮ್‌ಸಂಗ್‌ ಇದೀಗ ಬೆಲೆ ವಿವರಗಳನ್ನು ಬಹಿರಂಗಪಡಿಸಿದೆ. ಈ ಸ್ಮಾರ್ಟ್‌ಫೋನ್‌ ಮಿಡ್‌ರೇಂಜ್‌ ಪ್ರೈಸ್‌ಟ್ಯಾಗ್‌ನಲ್ಲಿ ಲಭ್ಯವಾಗಲಿದೆ ಎನ್ನಲಾಗಿದೆ.

ಹೌದು, ಸ್ಯಾಮ್‌ಸಂಗ್‌ ಗ್ಯಾಲಕ್ಸಿ A05 ಸ್ಮಾರ್ಟ್‌ಫೋನ್‌ ಬೆಲೆ ವಿವರಗಳು ಬಹಿರಂಗವಾಗಿದೆ. ಈ ಸ್ಮಾರ್ಟ್‌ಫೋನ್‌ ಮೂರು ವಿವಿಧ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಾಗಲಿದೆ ಎಂದು ವರದಿಯಾಗಿದೆ. ಇನ್ನು ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ G85 SoC ಪ್ರೊಸೆಸರ್‌ ವೇಗವನ್ನು ಹೊಂದಿರಲಿದೆ ಎನ್ನಲಾಗಿದೆ. ಇದು 25W ವೈರ್ಡ್ ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಹೊಂದಿರಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ನೊಂದಿಗೆ ಬರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A05 ಬೆಲೆ ವಿವರ ಬಹಿರಂಗ!..ಫೀಚರ್ಸ್‌ ನಿರೀಕ್ಷೆ ಏನು?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A05 ಬೆಲೆ ಎಷ್ಟಿರಲಿದೆ?
ಸ್ಯಾಮ್‌ಸಂಗ್‌ ಗ್ಯಾಲಕ್ಸಿ A05 ಸ್ಮಾರ್ಟ್‌ಫೋನ್‌ 4GB + 64GB ರೂಪಾಂತರದ ಆಯ್ಕೆಯು 12,499ರೂ ಬೆಲೆಯಲ್ಲಿ ಬರಲಿದೆ. ಆದರೆ 6GB + 128GB ಆಯ್ಕೆಯನ್ನು 14,999ರೂ.ಬೆಲೆಯಲ್ಲಿ ನೀಡಲಾಗುವುದು ಎಂದು ವರದಿಯಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಅನ್ನು ಕಪ್ಪು, ತಿಳಿ ಹಸಿರು ಮತ್ತು ಸಿಲ್ವರ್ ಬಣ್ಣದ ಆಯ್ಕೆಗಳಲ್ಲಿ ನೀಡಲಾಗುತ್ತದೆ ಎಂದು ಹೇಳಲಾಗಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A05 ಫೀಚರ್ಸ್‌ ನಿರೀಕ್ಷೆ ಏನು?
ಸ್ಯಾಮ್‌ಸಂಗ್‌ ಗ್ಯಾಲಕ್ಸಿ A05 ಸ್ಮಾರ್ಟ್‌ಫೋನ್‌ 6.7 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಇದು 1,600 x 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿ ಬರಲಿದೆ ಎನ್ನಲಾಗಿದೆ. ಇನ್ನು ಡಿಸ್‌ಪ್ಲೇ 60Hz ರಿಫ್ರೆಶ್ ರೇಟ್‌ ಬೆಂಬಲಿಸಲಿದ್ದು, 82.1% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿರಲಿದೆ. ಜೊತೆಗೆ ಡಿಸ್‌ಪ್ಲೇ 20:9 ಅನುಪಾತದಲ್ಲಿ ಬರಲಿದೆ ಎಂದು ಅಂದಾಜಿಸಲಾಗಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A05 ಬೆಲೆ ವಿವರ ಬಹಿರಂಗ!..ಫೀಚರ್ಸ್‌ ನಿರೀಕ್ಷೆ ಏನು?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A05 ಪ್ರೊಸೆಸರ್‌ ಯಾವುದು?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A05 ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ G85 SoC ಪ್ರೊಸೆಸರ್‌ ವೇಗದಲ್ಲಿ ಬರಲಿದೆ. ಇದು Mali G52 GPU ಸಪೋರ್ಟ್‌ ಅನ್ನು ಪಡೆದಿದ್ದು, ಆಂಡ್ರಾಯ್ಡ್‌ 13 ಆಧಾರಿತ OneUI 5.1 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆಯಲ್ಲಿ ಬರುವ ನಿರೀಕ್ಷೆ ಇಡಲಾಗಿದೆ. ಇದರೊಂದಿಗೆ ಮೆಮೊರಿ ಕಾರ್ಡ್‌ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A05 ಬೆಲೆ ವಿವರ ಬಹಿರಂಗ!..ಫೀಚರ್ಸ್‌ ನಿರೀಕ್ಷೆ ಏನು?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A05 ಕ್ಯಾಮೆರಾ ಸೆಟ್‌ಅಪ್‌ ಏನಿರಬಹುದು?
ಸ್ಯಾಮ್‌ಸಂಗ್‌ ಗ್ಯಾಲಕ್ಸಿ A05 ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ನಲ್ಲಿ ಬರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ನಲ್ಲಿರಲಿದೆ, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ನಲ್ಲಿ ಬರಲಿದೆ ಎನ್ನಲಾಗಿದೆ. ಜೊತೆಗೆ LED ಫ್ಲಾಷ್ ಅನ್ನು ಒಳಗೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿರಬಹುದು ಎಂದು ಹೇಳಲಾಗಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A05 ಬ್ಯಾಟರಿ ಮತ್ತು ಇತರೆ ಫೀಚರ್ಸ್‌
ಸ್ಯಾಮ್‌ಸಂಗ್‌ ಗ್ಯಾಲಕ್ಸಿ A05 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 25W ವೈರ್ಡ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G, ವೈಫೈ 802.11, ಬ್ಲೂಟೂತ್ 5.3, USB 2.0, GPS, Glonass ಮತ್ತು USB ಟೈಪ್-C ಕನೆಕ್ಟಿವಿಟಿಯನ್ನು ನೀಡಲಿದೆ. ಇದಲ್ಲದೆ 3.5mm ಆಡಿಯೊ ಜಾಕ್ ಅನ್ನು ಸಹ ಹೊಂದಿರಲಿದೆ. ಜೊತೆಗೆ ಭದ್ರತೆಗಾಗಿ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಪಡೆದಿರಲಿದೆ ಎಂದು ಅಂದಾಜಿಸಲಾಗಿದೆ.

Best Mobiles in India

English summary
Samsung Galaxy A05 Smartphone Price in India Revealed: Expected specifications Details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+