Home
ಸುದ್ದಿಜಾಲ

ಭಾರತಕ್ಕೆ ಕಾಲಿಟ್ಟ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A05! ಲಾಂಚ್‌ ಆಫರ್‌ನಲ್ಲಿ ಭರ್ಜರಿ ಕ್ಯಾಶ್‌ಬ್ಯಾಕ್‌!

ಭಾರತದ ಮಾರುಕಟ್ಟೆಯಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A05 ಸ್ಮಾರ್ಟ್‌ಫೋನ್‌ ಬಿಡುಗಡೆ ಆಗಿದೆ. ಕಳೆದ ಒಂದು ತಿಂಗಳಿನಿಂದ ಸಾಕಷ್ಟು ಸಂಚಲನ ಮೂಡಿಸಿದ್ದ ಈ ಸ್ಮಾರ್ಟ್‌ಫೋನ್‌ ಎಂಟ್ರಿ ನೀಡಿದ್ದ ಹಾಗೇ ಟ್ರೆಂಡ್‌ ಕ್ರಿಯೆಟ್‌ ಮಾಡಿದೆ. ಇನ್ನು ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ G85 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.

ಹೌದು, ಸ್ಯಾಮ್‌ಸಂಗ್‌ ಗ್ಯಾಲಕ್ಸಿ A05 ಸ್ಮಾರ್ಟ್‌ಫೋನ್‌ ಭಾರತದಲ್ಲಿ ಲಾಂಚ್‌ ಆಗಿದೆ. ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ನೊಂದಿಗೆ ಬರಲಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 25W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನುಳಿದಂತೆ ಈ ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಭಾರತಕ್ಕೆ ಕಾಲಿಟ್ಟ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A05! ಭರ್ಜರಿ ಕ್ಯಾಶ್‌ಬ್ಯಾಕ್‌!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A05 ಡಿಸ್‌ಪ್ಲೇ ರಚನೆ
ಸ್ಯಾಮ್‌ಸಂಗ್‌ ಗ್ಯಾಲಕ್ಸಿ A05 ಸ್ಮಾರ್ಟ್‌ಫೋನ್‌ 6.7 ಇಂಚಿನ HD+ PLS LCD ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದಲ್ಲದೆ ಡಿಸ್‌ಪ್ಲೇ 60Hz ರಿಫ್ರೆಶ್ ರೇಟ್‌ ಬೆಂಬಲಿಸಲಿದ್ದು, 82.1% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದೆ. ಜೊತೆಗೆ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A05 ಪ್ರೊಸೆಸರ್‌ ಯಾವುದು?
ಸ್ಯಾಮ್‌ಸಂಗ್‌ ಗ್ಯಾಲಕ್ಸಿ A05 ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ G85 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 13 ಆಧಾರಿತ One UI ಸ್ಕಿನ್‌ನಲ್ಲಿ ರನ್‌ ಆಗಲಿದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದರೊಂದಿಗೆ Samsung RAM ಪ್ಲಸ್ ಫೀಚರ್ಸ್‌ ಮೂಲಕ ಲಭ್ಯವಿರುವ ಮೆಮೊರಿಯನ್ನು 6GB ವರೆಗೆ ವಿಸ್ತರಿಸಬಹುದು. ಅಲ್ಲದೆ ಮೈಕ್ರೊ SD ಕಾರ್ಡ್ ಸ್ಲಾಟ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು. ಜೊತೆಗೆ ಸ್ಯಾಮ್‌ಸಂಗ್ ನಾಲ್ಕು ವರ್ಷಗಳ ಭದ್ರತಾ ನವೀಕರಣಗಳು ನೀಡುವ ಭರವಸೆ ನೀಡಿದೆ.

ಭಾರತಕ್ಕೆ ಕಾಲಿಟ್ಟ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A05! ಭರ್ಜರಿ ಕ್ಯಾಶ್‌ಬ್ಯಾಕ್‌!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A05 ಕ್ಯಾಮೆರಾ ಸೆಟ್‌ಅಪ್‌ ಏನಿದೆ?
ಸ್ಯಾಮ್‌ಸಂಗ್‌ ಗ್ಯಾಲಕ್ಸಿ A05 ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ f/1.8 ಅಪರ್ಚರ್ ಲೆನ್ಸ್ ಮತ್ತು ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಪಡೆದುಕೊಂಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A05 ಬ್ಯಾಟರಿ ಮತ್ತು ಇತರೆ
ಸ್ಯಾಮ್‌ಸಂಗ್‌ ಗ್ಯಾಲಕ್ಸಿ A05 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 25W ವೇಗದ ಚಾರ್ಜಿಂಗ್ಗೆ ಬೆಂಬಲವನ್ನು ನೀಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G, Wi-Fi, ಬ್ಲೂಟೂತ್, GPS, Glonass, Beidou, Galileo, 3.5mm ಹೆಡ್‌ಫೋನ್ ಜ್ಯಾಕ್ ಮತ್ತು USB ಟೈಪ್-C ಪೋರ್ಟ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಆಕ್ಸಿಲೆರೋಮೀಟರ್‌, ಲೈಟ್‌ ಸೆನ್ಸಾರ್‌, ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಒಳಗೊಂಡಿರುತ್ತದೆ. ಇದರೊಂದಿಗೆ ಫೇಸ್ ಅನ್‌ಲಾಕ್ ಫೀಚರ್ಸ್‌ ಅನ್ನು ಸಹ ಬೆಂಬಲಿಸುತ್ತದೆ.

ಭಾರತಕ್ಕೆ ಕಾಲಿಟ್ಟ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A05! ಭರ್ಜರಿ ಕ್ಯಾಶ್‌ಬ್ಯಾಕ್‌!

ಭಾರತದಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A05 ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A05 ಸ್ಮಾರ್ಟ್‌ಫೋನ್‌ ಭಾರತದಲ್ಲಿ ಬೇಸ್ ಮಾಡೆಲ್‌ 4GB RAM + 64GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 9,999ರೂ.ಬೆಲೆಯನ್ನು ಹೊಂದಿದೆ. ಇದರ ಟಾಪ್-ಆಫ್-ಲೈನ್ 6GB RAM + 128GB ಸ್ಟೋರೇಜ್ ಮಾದರಿಯ ಬೆಲೆ 12,499ರೂ ಆಗಿದೆ. ಇದನ್ನು ನೀವು ಕಪ್ಪು, ತಿಳಿ ಹಸಿರು ಮತ್ತು ಸಿಲ್ವರ್ ಬಣ್ಣದ ಆಯ್ಕೆಗಳಲ್ಲಿ ಖರೀದಿಸಬಹುದು.

ಲಾಂಚ್‌ ಆಫರ್‌ ಏನಿದೆ?
ಇನ್ನು ಈ ಸ್ಮಾರ್ಟ್‌ಫೋನ್‌ ಲಾಂಚ್‌ ಆಫರ್‌ ಪ್ರಯುಕ್ತ SBI ಕ್ರೆಡಿಟ್ ಕಾರ್ಡ್‌ಗಳ ಮೂಲಕ ಖರೀದಿಸಿದರೆ 1,000ರೂ ಕ್ಯಾಶ್‌ಬ್ಯಾಕ್ ಸಿಗಲಿದೆ. ಅಲ್ಲದೆ ತಿಂಗಳಿಗೆ 875 ರೂ ಗಳಿಂದ ಪ್ರಾರಂಭವಾಗುವ EMI ಆಯ್ಕೆಗಳ ಮೂಲಕ ಕೂಡ ಇದನ್ನು ನೀವು ಖರೀದಿಸಬಹುದು. ಅಷ್ಟೇ ಅಲ್ಲ ಸ್ಯಾಮ್‌ಸಂಗ್ ಫೈನಾನ್ಸ್+ ಬಳಸಿಕೊಂಡು ಗ್ರಾಹಕರು ನೋ ಕಾಸ್ಟ್‌ EMI ಆಯ್ಕೆಯನ್ನು ಸಹ ಪಡೆಯಬಹುದು.

Best Mobiles in India

English summary
Samsung Galaxy A05 With 5,000mAh Battery Launched in India: Price Details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+