ಈ ಜನಪ್ರಿಯ ಸ್ಯಾಮ್‌ಸಂಗ್ ಗ್ಯಾಲಕ್ಸಿ ಫೋನ್ ಬೆಲೆಯಲ್ಲಿ 2000ರೂ. ಇಳಿಕೆ!
ದಕ್ಷಿಣ ಕೊರಿಯಾದ ಟೆಕ್ ದೈತ್ಯ ಸ್ಯಾಮ್‌ಸಂಗ್ ಸಂಸ್ಥೆಯ ಸ್ಯಾಮ್‌ಸಂಗ್ ಗ್ಯಾಲಕ್ಸಿ A05s ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಇದೀಗ ಭರ್ಜರಿ ಇಳಿಕೆ ಘೋಷಿಸಿದೆ. ಅಂದಹಾಗೆ ಈ ಫೋನ್ ಅಕ್ಟೋಬರ್ 2023 ರಲ್ಲಿ ಬಿಡುಗಡೆ ಆಗಿದೆ. ಬಜೆಟ್ ಬೆಲೆಯಲ್ಲಿ ಲಭ್ಯ ಇರುವ ಈ ಫೋನ್ ಈಗ ಬೆಲೆ ಕುಸಿತ ಪಡೆದಿದ್ದು, ಗ್ರಾಹಕರಿಗೆ ಸಖತ್ ಖುಷಿ ಎನಿಸಿದೆ.
ಹೌದು, ಸ್ಯಾಮ್‌ಸಂಗ್ ಸಂಸ್ಥೆಯ ಸ್ಯಾಮ್‌ಸಂಗ್ ಗ್ಯಾಲಕ್ಸಿ A05s ಮೊಬೈಲ್ ಬೆಲೆಯಲ್ಲಿ ಈಗ 2000ರೂ. ಗಳ ಇಳಿಕೆ ಆಗಿದೆ. ಬೆಲೆ ಇಳಿಕೆಯಿಂದಾಗಿ 6GB RAM + 128GB ಸ್ಟೋರೇಜ್ ವೇರಿಯಂಟ್ ಫೋನ್ ಈಗ 12,999ರೂ. ಗಳ ಪ್ರೈಸ್ ಟ್ಯಾಗ್‌ನಲ್ಲಿ ಖರೀದಿಗೆ ಲಭ್ಯ. ಅಂದಹಾಗೆ ಈ ಫೋನ್ ಬ್ಲ್ಯಾಕ್, ಲೈಟ್ ಗ್ರೀನ್ ಹಾಗೂ ಲೈಟ್ ವೈಲೆಟ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ ಇದೆ.

ಇನ್ನು ಈ ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680SoC ಪ್ರೊಸೆಸರ್ ಪವರ್ ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಆಗಿದೆ. ಅಲ್ಲದೇ ಈ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಕೂಡಾ ಪಡೆದುಕೊಂಡಿದೆ. ಹಾಗಾದರೇ ಸ್ಯಾಮ್‌ಸಂಗ್ ಗ್ಯಾಲಕ್ಸಿ A05s ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A05s ಫೀಚರ್ಸ್
ಸ್ಯಾಮ್‌ಸಂಗ್ ಗ್ಯಾಲಕ್ಸಿ A05s ಮೊಬೈಲ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇ 1,080 x 2,4000 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 82.9% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಒಳಗೊಂಡಿದ್ದು, ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಪಡೆದಿದೆ. ಇದರ ಜೊತೆಗೆ 393 ppi ಸಾಂದ್ರತೆ ಹಾಗೂ ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಸಪೋರ್ಟ್ ಹೊಂದಿದೆ.

ಸ್ಯಾಮ್‌ಸಂಗ್ ಸಂಸ್ಥೆಯ ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680SoC ಪ್ರೊಸೆಸರ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಇದು ಆಂಡ್ರಾಯ್ಡ್ 13 ಓಎಸ್ ಸಪೋರ್ಟ್ ಜೊತೆಗೆ ಕಾರ್ಯ ಮಾಡಲಿದೆ. ಅಲ್ಲದೇ ಇದು 6GB RAM ಮತ್ತು 128GB ಆಂತರೀಕ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದ್ದು, ಹೆಚ್ಚುವರಿಯಾಗಿ ಎಸ್‌ಡಿ ಕಾರ್ಡ್ ಮೂಲಕ ಸುಮಾರು 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಸಬಹುದಾಗಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A05s ಮೊಬೈಲ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದ್ದು, ಮೊದಲ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ದ್ವಿತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಹೊಂದಿದ್ದು, ತೃತೀಯ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್‌ನೊಂದಿಗೆ ಬರಲಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A05s ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದಿದ್ದು, 25W ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡಲಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಸಿ ಪೋರ್ಟ್, 3.5 ಎಂಎಂ ಆಡಿಯೊ ಜಾಕ್ ಅನ್ನು ಪಡೆದಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಲೈಟ್ ಸೆನ್ಸರ್, ಪ್ರಾಕ್ಸಿಮಿಟಿ ಸೆನ್ಸರ್, ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಒಳಗೊಂಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A05s ಮೊಬೈಲ್ ಭಾರತದಲ್ಲಿ 6GB RAM + 128GB ಸ್ಟೋರೇಜ್‌ಯ ವೇರಿಯಂಟ್ ಹೊಂದಿದೆ. ಹಾಗೆಯೇ ಈ ಫೋನ್ ಬ್ಲ್ಯಾಕ್, ಲೈಟ್ ಗ್ರೀನ್ ಹಾಗೂ ಲೈಟ್ ವೈಲೆಟ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ ಇದೆ.


Click it and Unblock the Notifications








