Home
ಸುದ್ದಿಜಾಲ

ಬಿಡುಗಡೆಗೂ ಮುನ್ನವೇ ಸಖತ್‌ ಸೌಂಡ್‌ ಮಾಡ್ತಿದೆ ಸ್ಯಾಮ್‌ಸಂಗ್‌ನ ಈ ಫೋನ್‌ ! ಕಾರಣ ಇಲ್ಲಿದೆ!

ಸ್ಯಾಮ್‌ಸಂಗ್‌ ಕಂಪೆನಿಯ ಫೋನ್‌ಗಳಿಗೆ ಭಾರತದಲ್ಲಿ ಉತ್ತಮ ಮಾರುಕಟ್ಟೆಯಿದೆ. ತನ್ನ ವಿಭಿನ್ನ ಶೈಲಿಯ ಸ್ಮಾರ್ಟ್‌ಫೋನ್‌ಗಳಿಂದಾಗಿ ಭಾರತದ ಮಾರುಕಟ್ಟೆಯಲ್ಲಿ ಸೈ ಎನಿಸಿಕೊಂಡಿದೆ. ಇದೀಗ ಸ್ಯಾಮ್‌ಸಂಗ್ ಗ್ಯಾಲಕ್ಸಿ A05s ಸ್ಮಾರ್ಟ್‌ಫೋನ್‌ ಬಿಡುಗಡೆಗೆ ತಯಾರಿ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಇದೇ ಅಕ್ಟೋಬರ್‌ 18 ರಂದು ಭಾರತದಲ್ಲಿ ಲಾಂಚ್‌ ಆಗಲಿದೆ ಎನ್ನಲಾಗಿದೆ.

ಹೌದು, ಸ್ಯಾಮ್‌ಸಂಗ್‌ ಗ್ಯಾಲಕ್ಸಿ A05s ಸ್ಮಾರ್ಟ್‌ಫೋನ್‌ ಅಕ್ಟೋಬರ್ 18 ರಂದು ಭಾರತಕ್ಕೆ ಕಾಲಿಡಲಿದೆ. ಇದು ಬಜೆಟ್‌ ಬೆಲೆಯಲ್ಲಿ ಬರಲಿದೆ ಅನ್ನೊದನ್ನ ಸ್ಯಾಮ್‌ಸಂಗ್‌ ಕಂಪೆನಿ ಖಚಿತಪಡಿಸಿದೆ. ಇನ್ನು ಸ್ಮಾರ್ಟ್‌ಫೋನ್‌ ಬಿಡುಗಡೆಗೂ ಮುನ್ನವೇ ಫೀಚರ್ಸ್‌ ಬಹಿರಂಗವಾಗಿದ್ದು, ಟೆಕ್‌ ವಲಯದಲ್ಲಿ ಹೊಸ ಬಿರುಗಾಳಿಯನ್ನು ಎಬ್ಬಿಸಿದೆ. ಹಾಗಾದ್ರೆ ಬಜೆಟ್‌ ಬೆಲೆಯಲ್ಲಿ ಎಂಟ್ರಿ ನೀಡಲಿರುವ ಈ ಸ್ಮಾರ್ಟ್‌ಫೋನ್‌ ಈ ಪರಿಯಾಗಿ ಸೌಂಡ್‌ ಮಾಡಲು ಕಾರಣ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಬಿಡುಗಡೆಗೂ ಮುನ್ನವೇ ಸೌಂಡ್‌ ಮಾಡ್ತಿದೆ ಸ್ಯಾಮ್‌ಸಂಗ್‌ನ ಈ ಫೋನ್‌ ! ಕಾರಣ ಇಲ್ಲಿದೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A05s ಡಿಸ್‌ಪ್ಲೇ ರಚನೆ ಹೇಗಿದೆ?
ಸ್ಯಾಮ್‌ಸಂಗ್‌ ಗ್ಯಾಲಕ್ಸಿ A05s ಸ್ಮಾರ್ಟ್‌ಫೋನ್‌ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಇದು ಮುಂಭಾಗದಲ್ಲಿ ಟಿಯರ್‌ಡ್ರಾಪ್ ನಾಚ್ ಅನ್ನು ಹೊಂದಿದೆ ಎನ್ನಲಾಗಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿರಲಿದೆ. ಇನ್ನು ಡಿಸ್‌ಪ್ಲೇ 82.92 % ಸ್ಕ್ರೀನ್‌ ಟು ಬಾಡಿ ನಡುವಿನ ಅನುಪಾತವನ್ನು ಹೊಂದಿದ್ದು, 20:9 ರಚನೆಯ ಅನುಪಾತದಲ್ಲಿ ಬರಲಿದೆ ಎನ್ನಲಾಗಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A05s ಪ್ರೊಸೆಸರ್‌ ಯಾವುದು?
ಸ್ಯಾಮ್‌ಸಂಗ್‌ ಗ್ಯಾಲಕ್ಸಿ A05s ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 680SoC ಪ್ರೊಸೆಸರ್‌ನಲ್ಲಿ ಬರಲಿದೆ. ಇದು ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ ಎನ್ನಲಾಗಿದೆ. ಹಾಗೆಯೇ 6GB RAM ಮತ್ತು 128 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿರಲಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು 1TB ವರೆಗೆ ವಿಸ್ತರಿಸುವ ಅವಕಾಶವನ್ನು ಸಹ ಒಳಗೊಂಡಿರಲಿದೆ ಎನ್ನಲಾಗಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A05s ಕ್ಯಾಮೆರಾ ಸೆಟ್‌ಅಪ್‌ ಏನಿದೆ?
ಸ್ಯಾಮ್‌ಸಂಗ್‌ ಗ್ಯಾಲಕ್ಸಿ A05s ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ನೊಂದಿಗೆ ಬರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಅನ್ನು ಹೊಂದಿರಲಿದೆ ಎನ್ನಲಾಗಿದೆ. ಇದಲ್ಲದೆ 13 ಮೆಗಾಪಿಕ್ಸೆಲ್‌ ಸೆನ್ಸಾರ್‌ ಒಳಗೊಂಡ ಸೆಲ್ಫಿ ಕ್ಯಾಮೆರಾವನ್ನು ಸಹ ಪಡೆದಿರಲಿದೆ ಎಂದು ಅಂದಾಜಿಸಲಾಗಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A05s ಬ್ಯಾಟರಿ ಮತ್ತು ಇತರೆ
ಸ್ಯಾಮ್‌ಸಂಗ್‌ ಗ್ಯಾಲಕ್ಸಿ A05s ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 25W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ ಎಂದು ಅಂದಾಜಿಸಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಅನ್ನು ಹೊಂದಿರಲಿದೆ ಎಂದು ವರದಿಯಾಗಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A05s ಬೆಲೆ ಮತ್ತು ಲಭ್ಯತೆ
ಸ್ಯಾಮ್‌ಸಂಗ್‌ ಗ್ಯಾಲಕ್ಸಿ A05s ಸ್ಮಾರ್ಟ್‌ಫೋನ್‌ 12,999ರೂ ಒಳಗಿನ ಬೆಲೆಯಲ್ಲಿ ಬರಲಿದೆ ಎಂದು ಅಂದಾಜಿಸಲಾಗಿದೆ. ಆದರೆ ಬಿಡುಗಡೆ ದಿನಾಂಕ ಹತ್ತಿರವಾದಾಗ ಇದರ ನಿಖರವಾದ ಬೆಲೆ ಬಹಿರಂಗವಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಈ ಸ್ಮಾರ್ಟ್‌ಫೋನ್‌ ತಿಳಿ ಹಸಿರು, ತಿಳಿ ನೇರಳೆ ಮತ್ತು ಕಪ್ಪು ಬಣ್ಣದ ಆಯ್ಕೆಗಳಲ್ಲಿ ಬರಲಿದೆ ಎಂದು ಕಂಪನಿ ಹೇಳಿದೆ. ಇದು ಬಿಡುಗಡೆಯಾದ ನಂತರ ಇದರ ಸೇಲ್‌ ಡೇಟ್‌ ಬಹಿರಂಗವಾಗಲಿದೆ.

Best Mobiles in India

English summary
Samsung Galaxy A05s launch date set on October 18: Expected price Details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+