ನವರಾತ್ರಿ ಸಂಭ್ರಮಕ್ಕೆ ಎಂಟ್ರಿ ನೀಡಿದ ಸ್ಯಾಮ್‌ಸಂಗ್ ಗ್ಯಾಲಕ್ಸಿ A05s! ಆಕರ್ಷಕ ಫೀಚರ್ಸ್!
ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕ ಸ್ಯಾಮ್‌ಸಂಗ್ ಕಂಪೆನಿ ಭಾರತದಲ್ಲಿ ಹೊಸ ಸ್ಮಾರ್ಟ್‌ಫೋನ್ ಪರಿಚಯಿಸಿದೆ. ಇದನ್ನು ಸ್ಯಾಮ್‌ಸಂಗ್ ಗ್ಯಾಲಕ್ಸಿ A05s ಸ್ಮಾರ್ಟ್‌ಫೋನ್ ಎಂದು ಹೆಸರಿಸಲಾಗಿದೆ. ಈ ಸ್ಮಾರ್ಟ್‌ಫೋನ್ ಗ್ಯಾಲಕ್ಸಿ A ಸರಣಿಗೆ ಹೊಸ ಸೇರ್ಪಡೆಯಾಗಿದ್ದು, ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.
ಹೌದು, ಸ್ಯಾಮ್‌ಸಂಗ್ ಗ್ಯಾಲಕ್ಸಿ A05s ಸ್ಮಾರ್ಟ್‌ಫೋನ್ ಭಾರತಕ್ಕೆ ಎಂಟ್ರಿ ನೀಡಿದೆ. ಈ ಮೂಲಕ ನವರಾತ್ರಿ ಸಂಭ್ರಮದಲ್ಲಿ ಹೊಸ ಸ್ಯಾಮ್‌ಸಂಗ್ ಫೋನ್ ಖರೀದಿಸಬೇಕೆಂದುಕೊಂಡವರಿಗೆ ಗುಡ್‌ನ್ಯೂಸ್ ನೀಡಿದೆ. ಇನ್ನು ಸ್ಯಾಮ್‌ಸಂಗ್ ಗ್ಯಾಲಕ್ಸಿ A05s ಸ್ಮಾರ್ಟ್‌ಫೋನ್ ಹಲವು ಆಕರ್ಷಕ ಫೀಚರ್ಸ್‌ಗಳನ್ನು ಹೊಂದಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A05s ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಸ್ಯಾಮ್‌ಸಂಗ್ ಗ್ಯಾಲಕ್ಸಿ A05s ಸ್ಮಾರ್ಟ್‌ಫೋನ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080x2,4000 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 82.9% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಒಳಗೊಂಡಿದೆ. ಇದಲ್ಲದೆ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದ್ದು, 393 ppi ಸಾಂದ್ರತೆಯಲ್ಲಿ ಬರಲಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಬೆಂಬಲದೊಂದಿಗೆ ಬರಲಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A05s ಪ್ರೊಸೆಸರ್ ಯಾವುದು?
ಸ್ಯಾಮ್‌ಸಂಗ್ ಗ್ಯಾಲಕ್ಸಿ A05s ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ರನ್ ಆಗಲಿದೆ. ಹಾಗೆಯೇ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಬೆಂಬಲದೊಂದಿಗೆ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತಿರಸಬಹುದಾಗಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A05s ಕ್ಯಾಮೆರಾ ಸೆಟ್‌ಅಪ್
ಸ್ಯಾಮ್‌ಸಂಗ್ ಗ್ಯಾಲಕ್ಸಿ A05s ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಪಡೆದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಹೊಂದಿದೆ. ಇದರ ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್‌ನೊಂದಿಗೆ ಬರಲಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A05s ಬ್ಯಾಟರಿ ಮತ್ತು ಇತರೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ A05s ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 25W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಸಿ ಪೋರ್ಟ್, 3.5 ಎಂಎಂ ಆಡಿಯೊ ಜಾಕ್ ಅನ್ನು ಹೊಂದಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಲೈಟ್ ಸೆನ್ಸರ್, ಪ್ರಾಕ್ಸಿಮಿಟಿ ಸೆನ್ಸರ್, ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಒಳಗೊಂಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A05s ಬೆಲೆ ಮತ್ತು ಲಭ್ಯತೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ A05s ಸ್ಮಾರ್ಟ್‌ಫೋನ್ ಭಾರತದಲ್ಲಿ 6GB RAM + 128GB ಸ್ಟೋರೇಜ್ ಆಯ್ಕೆಗೆ 17,499ರೂ ಬೆಲೆ ಹೊಂದಿದೆ. ಪ್ರಸ್ತುತ ಕಂಪೆನಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಇದರ ಬೆಲೆಯನ್ನು 14,999ರೂ.ಗೆ ನಿಗದಿಪಡಿಸಲಾಗಿದೆ. ಸ್ಯಾಮ್‌ಸಂಗ್ ಇಂಡಿಯಾ ವೆಬ್‌ಸೈಟ್‌ನಲ್ಲಿನ ಪಟ್ಟಿಯ ಪ್ರಕಾರ, SBI ಬ್ಯಾಂಕ್ ಕ್ರೆಡಿಟ್ ಕಾರ್ಡ್ EMI ವಹಿವಾಟುಗಳ ಮೇಲೆ 1,000 ತ್ವರಿತ ರಿಯಾಯಿತಿ ಕೂಡ ಸಿಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕಪ್ಪು, ತಿಳಿ ಹಸಿರು ಮತ್ತು ತಿಳಿ ನೇರಳೆ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿದೆ.


Click it and Unblock the Notifications








