Home
ಸುದ್ದಿಜಾಲ

ಸದ್ದಿಲ್ಲದೆ ಲಾಂಚ್‌ ಆಗಿದೆ Samsung Galaxy A06 ಫೋನ್‌; ಫೀಚರ್ಸ್ ಹೇಗಿವೆ?

ದಕ್ಷಿಣ ಕೊರಿಯಾದ ಟೆಕ್‌ ದೈತ್ಯ ಸ್ಯಾಮ್‌ಸಂಗ್‌ ಕಂಪೆನಿ ಈಗಾಗಲೇ ಭಿನ್ನ ಸ್ಮಾರ್ಟ್‌ಫೋನ್‌ಗಳಿಂದ ಗುರುತಿಸಿಕೊಂಡಿದೆ. ಸ್ಯಾಮ್‌ಸಂಗ್‌ನ ಗ್ಯಾಲಕ್ಸಿ M, ಗ್ಯಾಲಕ್ಸಿ A, ಗ್ಯಾಲಕ್ಸಿ F, ಗ್ಯಾಲಕ್ಸಿ S ಸರಣಿಯ ಸ್ಮಾರ್ಟ್‌ಫೋನ್‌ಗಳು ಜನಪ್ರಿಯತೆ ಪಡೆದಿವೆ. ಸ್ಯಾಮ್‌ಸಂಗ್‌ ಇದೀಗ ಜಾಗತಿಕ ಮಾರುಕಟ್ಟೆಯಲ್ಲಿ ಸದ್ದಿಲ್ಲದೇ ಹೊಸ ಗ್ಯಾಲಕ್ಸಿ A06 ( Samsung Galaxy A06 ) ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದ್ದು, ಈ ಫೋನ್‌ ಮೀಡಿಯಾ ಟೆಕ್ ಹೆಲಿಯೊ G85 SoC ಪ್ರೊಸೆಸರ್‌ ಬಲದಲ್ಲಿ ಕಾರ್ಯ ನಿರ್ವಹಿಸಲಿದೆ.

ಹೌದು, ಸ್ಯಾಮ್‌ಸಂಗ್‌ ಸಂಸ್ಥೆಯು ತನ್ನ ಹೊಸ ಗ್ಯಾಲಕ್ಸಿ A06 ಸ್ಮಾರ್ಟ್‌ಫೋನ್‌ ಅನ್ನು ಗ್ಲೋಬಲ್‌ ಮಾರುಕಟ್ಟೆಗೆ ಲಾಂಚ್‌ ಮಾಡಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಸೈಲೆಂಟ್‌ ಆಗಿ ಎಂಟ್ರಿ ನೀಡಿರುವ ಈ ಸ್ಮಾರ್ಟ್‌ಫೋನ್‌ ಗ್ಯಾಲಕ್ಸಿ A05 ಫೋನಿನ ಉತ್ತರಾಧಿಕಾರಿಯಾಗಿದೆ. ಇದು ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಪಡೆದಿದೆ. ಜೊತೆಗೆ 5,000 mAh ಸಾಮರ್ಥ್ಯ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನಿನ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸದ್ದಿಲ್ಲದೆ ಲಾಂಚ್‌ ಆಗಿದೆ Samsung Galaxy A06 ಫೋನ್‌; ಫೀಚರ್ಸ್ ಹೇಗಿವೆ?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A06 ಫೋನಿನ ಫೀಚರ್ಸ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A06 ಮೊಬೈಲ್‌ 6.5 ಇಂಚಿನ ಫುಲ್‌ HD+ ಐಪಿಎಸ್ ಎಲ್‌ಸಿಡಿ ಡಿಸ್‌ಪ್ಲೇ ರಚನೆ ಹೊಂದಿದೆ. ಈ ಡಿಸ್‌ಪ್ಲೇ 720 x 1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಇದು ಇನ್ಫಿನಿಟಿ ವಿ ಡಿಸ್‌ಪ್ಲೇ ಆಗಿದ್ದು, 60Hz ರಿಫ್ರೆಶ್ ರೇಟ್‌ ಸೌಲಭ್ಯ ಅನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 82.5 % ಸ್ಕ್ರೀನ್‌ ಟು ಬಾಡಿ ಅನುಪಾತವನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A06 ಮೊಬೈಲ್‌ ಮೀಡಿಯಾ ಟೆಕ್ ಹೆಲಿಯೊ G85 SoC ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ನಲ್ಲಿ ಒಂದು UI ಕೋರ್ 4.1 ಜೊತೆಗೆ ರನ್ ಆಗಲಿದೆ. ಹಾಗೆಯೇ 4GB + 64 GB ಹಾಗೂ 6GB + 128 GB ಆಂತರೀಕ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ ಬಾಹ್ಯ ಮೆಮೊರಿ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A06 ಮೊಬೈಲ್‌ ಹಿಂಬದಿಯಲ್ಲಿ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ f/2.4 ಲೆನ್ಸ್‌ ಅನ್ನು ಹೊಂದಿದೆ. ಇನ್ನು ಈ ಕ್ಯಾಮರಾ ರಚನೆ ಅನ್ನು ಎಲ್ಇಡಿ ಫ್ಲ್ಯಾಷ್‌ನೊಂದಿಗೆ ಜೋಡಿಸಲಾಗಿದೆ. ಇದಲ್ಲದೆ ಸೆಲ್ಫಿಗಳು ಮತ್ತು ವೀಡಿಯೊ ಚಾಟ್‌ಗಳಿಗಾಗಿ 8 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A06 ಮೊಬೈಲ್‌ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ 25W ವೇಗದ ಚಾರ್ಜಿಂಗ್‌ ಸೌಲಭ್ಯ ಸಪೋರ್ಟ್‌ ಮಾಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VoLTE, ಡ್ಯುಯಲ್-ಸಿಮ್ ಬೆಂಬಲ, Wi-Fi, ಬ್ಲೂಟೂತ್ 5.0 ಮತ್ತು GPS ಅನ್ನು ಬೆಂಬಲಿಸಲಿದೆ. ಇದು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಮತ್ತು ಟೈಪ್-ಸಿ ಯುಎಸ್‌ಬಿ ಪೋರ್ಟ್ ಅನ್ನು ಸಹ ಹೊಂದಿರುತ್ತದೆ. ಆರಂಭಿಕ 4GB + 64 GB ವೇರಿಯಂಟ್‌ ಬೆಲೆ VND 3,790,000 (ಭಾರತದಲ್ಲಿ ಅಂದಾಜು 12,706ರೂ. ಗಳು)

Best Mobiles in India

English summary
Samsung Galaxy A06 Launched. Check Price, Specifications and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+