ಬರಲಿದೆ ಸ್ಯಾಮ್‌ಸಂಗ್‌ನಿಂದ ಮತ್ತೊಂದು ಬಜೆಟ್ ಬೆಲೆಯ ಸ್ಮಾರ್ಟ್‌ಫೋನ್!
ದಕ್ಷಿಣ ಕೊರಿಯಾದ ಟೆಕ್ ದೈತ್ಯ ಸ್ಯಾಮ್‌ಸಂಗ್ ದೇಶಿಯ ಮಾರುಕಟ್ಟೆಯಲ್ಲಿ A ಸರಣಿಯಲ್ಲಿ ಈಗಾಗಲೇ ಹಲವು ಬಜೆಟ್ ಫೋನ್‌ಗಳನ್ನು ಬಿಡುಗಡೆ ಮಾಡಿದೆ. ಆದರೆ ಇದೀಗ A ಸರಣಿಯಲ್ಲಿ ಮತ್ತೊಂದು ಹೊಸ ಬಜೆಟ್ ಸ್ಮಾರ್ಟ್‌ಫೋನ್ ಪರಿಚಯಿಸಲು ತಯಾರಾಗಿದೆ. ಅದುವೇ ಸ್ಯಾಮ್‌ಸಂಗ್ ಗ್ಯಾಲಕ್ಸಿ A11 ಸ್ಮಾರ್ಟ್‌ಫೋನ್ ಆಗಿದ್ದು, ಈ ಫೋನ್ ಬೆಲೆಯು 10,000ರೂ. ಒಳಗಡೆಯೇ ಇರಲಿದೆ ಎಂದು ನಿರೀಕ್ಷಿಸಲಾಗುತ್ತಿದೆ.

ಹೌದು, ಸ್ಮಾರ್ಟ್‌ಫೋನ್ ಪ್ರಿಯರ ನೆಚ್ಚಿನ ಸ್ಯಾಮ್‌ಸಂಗ್ ಈಗ ಗ್ಯಾಲಕ್ಸಿ A11 ಸ್ಮಾರ್ಟ್‌ಫೋನ್ ಲಾಂಚ್‌ಗೆ ಸಿದ್ಧತೆ ನಡೆಸಿದ್ದು, ಸದ್ಯದಲ್ಲಿಯೇ ಬಿಡುಗಡೆ ಕಾಣಲಿದೆ. ಇನ್ನು ಈ ಬಜೆಟ್ ಫೋನ್ ಒಟ್ಟು ತ್ರಿವಳಿ ಕ್ಯಾಮೆರಾ ಸೆಟ್‌ಅಪ್ ಪಡೆದಿರಲಿದ್ದು, ಜೊತೆಗೆ ಮುಂಭಾಗದಲ್ಲಿ ಪಂಚ್-ಹೋಲ್ ಕ್ಯಾಮೆರಾ ರಚನೆಯನ್ನು ಪಡೆದಿರಲಿದೆ ಎನ್ನುತ್ತಿವೆ ಲೀಕ್ ಮಾಹಿತಿಗಳು . ಹಾಗೆಯೇ ಈ ಫೋನ್ 4,000mAh ಬ್ಯಾಟರಿ ಬ್ಯಾಕ್‌ಅಪ್ ಸಾಮರ್ಥ್ಯ ಹೊಂದಿರಲಿದೆ ಎನ್ನಲಾಗಿದೆ.

ಡಿಸ್‌ಪ್ಲೇ ರಚನೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ A11 ಸ್ಮಾರ್ಟ್‌ಫೋನ್ 6.4 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿರಲಿದೆ. LCD ಮಾದರಿಯ ಡಿಸ್‌ಪ್ಲೇ ಇರಲಿದ್ದು, ಅತ್ಯುತ್ತಮ ರೆಸಲ್ಯೂಶನನ್ನು ಒಳಗೊಂಡಿರಲಿದೆ. ಸ್ಕ್ರೀನ್ ರಕ್ಷಣೆಗೆ ಗೊರಿಲ್ಲಾ ಗ್ಲಾಸ್ ಒದಗಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಪ್ರೊಸೆಸರ್ ಬಲ
ಸ್ಯಾಮ್‌ಸಂಗ್ ಗ್ಯಾಲಕ್ಸಿ A11 ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಸ್ನ್ಯಾಪ್‌ಡ್ರಾಗನ್ ಪ್ರೊಸೆಸರ್ ಹೊಂದಿರಲಿದ್ದು, ಪ್ರೊಸೆಸರ್ ಸಾಮರ್ಥ್ಯದ ಮಾಹಿತಿ ಲೀಕ್ ಆಗಿಲ್ಲ. ಇದರೊಂದಿಗೆ ಆಂಡ್ರಾಯ್ಡ್ 10 ಓಎಸ್ ಹಾಗೂ ಒನ್ UI ಸ್ಕೀನ್ ಓಎಸ್ ಬೆಂಬಲ ಇರಲಿದೆ ಎನ್ನಲಾಗಿದೆ. 4GB RAM ಮತ್ತು 64GB/128GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳು ಇರುವ ಸಾಧ್ಯತೆಗಳಿವೆ.

ಕ್ಯಾಮೆರಾ ಸೆನ್ಸಾರ್
ಗ್ಯಾಲಕ್ಸಿ A11 ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ಒಟ್ಟು ತ್ರಿವಳಿ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿರಲಿದ್ದು, ಮುಖ್ಯ ಕ್ಯಾಮೆರಾವು 13ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿರಲಿದೆ. ಹಾಗೆಯೇ ಇನ್ನೆರಡು ಕ್ಯಾಮೆರಾಗಳು ಪೂರಕ ಲೆನ್ಸ್ ಸೆನ್ಸಾರ್ ಪಡೆದಿರಲಿವೆ. ಇನ್ನು ಮುಂಭಾಗದಲ್ಲಿ ಸೆಲ್ಫಿಗಾಗಿ 8ಎಂಪಿ ಕ್ಯಾಮೆರಾ ಸೆನ್ಸಾರ್ ಹೊಂದಿರಲಿದೆ.

ಬ್ಯಾಟರಿ ಲೈಫ್
ಸ್ಯಾಮ್‌ಸಂಗ್ ಗ್ಯಾಲಕ್ಸಿ A11 ಸ್ಮಾರ್ಟ್‌ಫೋನ್ 4000mAh ಬ್ಯಾಟರಿ ಬ್ಯಾಕ್‌ಅಪ್ ಸಾಮರ್ಥ್ಯ ಪಡೆದಿರಲಿದ್ದು, ಅತ್ಯುತ್ತಮ ಚಾರ್ಜರ್ ಸೌಲಭ್ಯ ಇರಲಿದೆ. ಹಾಗೆಯೇ ಇದರೊಂದಿಗೆ ಯುಎಸ್‌ಬಿ ಟೈಪ್-ಸಿ ಪೋರ್ಟ್, ಜಿಪಿಎಸ್, ಬ್ಲೂಟೂತ್, ವೈಫೈ, ಸೇರಿದಂತೆ ಇತ್ತೀಚಿನ ಅಗತ್ಯ ಫೀಚರ್ಸ್‌ಗಳು ಸಹ ಇರಲಿವೆ.


Click it and Unblock the Notifications








