ಸ್ಯಾಮ್‌ಸಂಗ್‌ನಿಂದ ಬಿಡುಗಡೆ ಆಗಲಿದೆ ಗ್ಯಾಲಕ್ಸಿ A12 5G ಫೋನ್!

|

ಜನಪ್ರಿಯ ಟೆಕ್ ದೈತ್ಯ ಸ್ಯಾಮ್‌ಸಂಗ್ ಮೊಬೈಲ್ ಕಂಪನಿಯು A ಸರಣಿಯಲ್ಲಿ ಈಗಾಗಲೇ ಹಲವು ಬಜೆಟ್‌ ಫೋನ್‌ಗಳನ್ನು ಪರಿಚಯಿಸಿದೆ. ಇದೀಗ ಇದೇ ಸರಣಿಯಲ್ಲಿ ಮತ್ತೊಂದು 5G ಆವೃತ್ತಿಯ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಲು ಸಜ್ಜಾಗಿದ್ದು, ಅದುವೇ ಗ್ಯಾಲಕ್ಸಿ ಗ್ಯಾಲಕ್ಸಿ A12 5G ಸ್ಮಾರ್ಟ್‌ಫೋನ್. ಈ ಸ್ಮಾರ್ಟ್‌ಫೋನ್ ಆಕರ್ಷಕ ಫೀಚರ್ಸ್‌ಗಳಿಂದ ಒಳಗೊಂಡಿರಲಿದೆ ಎಂದು ಲೀಕ್ ಮಾಹಿತಿಗಳಿಂದ ತಿಳಿದಿದೆ.

ಸ್ಯಾಮ್‌ಸಂಗ್

ಹೌದು, ಸ್ಯಾಮ್‌ಸಂಗ್ ಸಂಸ್ಥೆಯು ನೂತನವಾಗಿ ಗ್ಯಾಲಕ್ಸಿ A12 5G ಸ್ಮಾರ್ಟ್‌ಫೋನ್ ಲಾಂಚ್‌ ಮಾಡಲು ತಯಾರಿ ನಡೆಸಿದೆ. ಈ ಸ್ಮಾರ್ಟ್‌ಫೋನ್ ಸದ್ಯದಲ್ಲಿಯೇ ಬಿಡುಗಡೆ ಆಗಲಿದ್ದು, ಈ ಫೋನ್ ಎಂಟ್ರಿ ಲೆವೆಲ್ ಫೋನ್‌ಗಳ ಲಿಸ್ಟಿನಲ್ಲಿ ಕಾಣಿಸಿಕೊಳ್ಳಲಿದೆ. ಇನ್ನು ಈ ಸ್ಮಾರ್ಟ್‌ಫೋನ್ 32GB ಮತ್ತು 64GB ಆಂತರಿಕ ಸ್ಟೋರೇಜ್‌ನ ಆಯ್ಕೆ ಹೊಂದಿರಲಿದೆ ಹಾಗೂ ಮೀಡಿಯಾ ಟೆಕ್ ಹಿಲಿಯೊ P35 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ ಎನ್ನಲಾಗಿದೆ. ಈ ಫೋನಿನ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ಡಿಸೈನ್

ಡಿಸ್‌ಪ್ಲೇ ಡಿಸೈನ್

ಸ್ಯಾಮ್‌ಸಂಗ್ ಗ್ಯಾಲಕ್ಸಿ A12 5G ಸ್ಮಾರ್ಟ್‌ಫೋನ್ 6.4 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿರಲಿದೆ. LCD ಮಾದರಿಯ ಡಿಸ್‌ಪ್ಲೇ ಇರಲಿದ್ದು, ಅತ್ಯುತ್ತಮ ರೆಸಲ್ಯೂಶನನ್ನು ಒಳಗೊಂಡಿರಲಿದೆ. ಸ್ಕ್ರೀನ್‌ ರಕ್ಷಣೆಗೆ ಗೊರಿಲ್ಲಾ ಗ್ಲಾಸ್ ಒದಗಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಪ್ರೊಸೆಸರ್ ಬಲ

ಪ್ರೊಸೆಸರ್ ಬಲ

ಸ್ಯಾಮ್‌ಸಂಗ್ ಗ್ಯಾಲಕ್ಸಿ A12 5G ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಸ್ನ್ಯಾಪ್‌ಡ್ರಾಗನ್ 450 ಪ್ರೊಸೆಸರ್ ಹೊಂದಿರಲಿದ್ದು, ಇದರೊಂದಿಗೆ ಆಂಡ್ರಾಯ್ಡ್ 10 ಓಎಸ್‌ ಹಾಗೂ ಒನ್‌ UI ಸ್ಕೀನ್ ಓಎಸ್ ಬೆಂಬಲ ಇರಲಿದೆ ಎನ್ನಲಾಗಿದೆ. 3GB RAM ಮತ್ತು 32GB ಮತ್ತು 64GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳು ಇರುವ ಸಾಧ್ಯತೆಗಳಿವೆ.

ಕ್ಯಾಮೆರಾ ಸೆನ್ಸಾರ್

ಕ್ಯಾಮೆರಾ ಸೆನ್ಸಾರ್

ಗ್ಯಾಲಕ್ಸಿ A12 5G ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ಒಟ್ಟು ನಾಲ್ಕು ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿರಲಿದ್ದು, ಮುಖ್ಯ ಕ್ಯಾಮೆರಾವು 13ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿರಲಿದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾ 5ಎಂಪಿ ಯಲ್ಲಿರಲಿದ್ದು, ಉಳಿದೆರಡು 2ಎಂಪಿ ಸೆನ್ಸಾರ್ ಪಡೆದಿರಲಿವೆ. ಇನ್ನು ಮುಂಭಾಗದಲ್ಲಿ ಸೆಲ್ಫಿಗಾಗಿ 8ಎಂಪಿ ಕ್ಯಾಮೆರಾ ಸೆನ್ಸಾರ್ ಹೊಂದಿರಲಿದೆ.

ಬ್ಯಾಟರಿ ಬಾಳಿಕೆ

ಬ್ಯಾಟರಿ ಬಾಳಿಕೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ A12 5G ಸ್ಮಾರ್ಟ್‌ಫೋನ್ 4000mAh ಬ್ಯಾಟರಿ ಬ್ಯಾಕ್‌ಅಪ್ ಸಾಮರ್ಥ್ಯ ಪಡೆದಿರಲಿದ್ದು, 15W ಸಾಮರ್ಥ್ಯದ ಫಾಸ್ಟ್‌ ಚಾರ್ಜರ್ ಸೌಲಭ್ಯ ಇರಲಿದೆ. ಹಾಗೆಯೇ ಇದರೊಂದಿಗೆ ಯುಎಸ್‌ಬಿ ಟೈಪ್-ಸಿ ಪೋರ್ಟ್‌, ಜಿಪಿಎಸ್, ಬ್ಲೂಟೂತ್, ವೈಫೈ, ಸೇರಿದಂತೆ ಇತ್ತೀಚಿನ ಅಗತ್ಯ ಫೀಚರ್ಸ್‌ಗಳು ಸಹ ಇರಲಿವೆ.

Best Mobiles in India

English summary
Galaxy A12 5G case renders have surfaced on-line that counsel the existence of the brand new mannequin.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X