ಸ್ಯಾಮ್‌ಸಂಗ್ ಗ್ಯಾಲಕ್ಸಿ A12 ಫೋನಿನ ಫೀಚರ್ಸ್ ಮತ್ತು ಬೆಲೆ ಬಹಿರಂಗ!
ದಕ್ಷಿಣ ಕೊರಿಯಾದ ಟೆಕ್ ದೈತ್ಯ ಸ್ಯಾಮ್‌ಸಂಗ್ ಕಳೆದ ನವೆಂಬರ್‌ನಲ್ಲಿ ಅನಾವರಣ ಆಗಿರುವ ಗ್ಯಾಲಕ್ಸಿ A12 ಸ್ಮಾರ್ಟ್‌ಫೋನ್ ಈಗ ಭಾರತದಲ್ಲಿ ಬಿಡುಗಡೆ ಆಗುವ ಸೂಚನೆ ನೀಡಿದೆ. ಸ್ಯಾಮ್‌ಸಂಗ್ ಗ್ಯಾಲಕ್ಸಿ A12 ಇಂಡಿಯಾ ಸಪೋರ್ಟ್ ಪೇಜ್‌ನಲ್ಲಿ 4GB RAM ವೇರಿಯಂಟ್ ಫೋನ್ ಕಾಣಿಸಿಕೊಂಡಿದೆ. ಇನ್ನು ಈ ಫೋನಿನ ಲೀಕ್ ಫೀಚರ್ಸ್‌ಗಳು ಹಾಗೂ ಬೆಲೆ ಗ್ರಾಹಕರಲ್ಲಿ ಕುತೂಹಲ ಮೂಡಿಸಿದೆ.

ಹೌದು, ಸ್ಯಾಮ್‌ಸಂಗ್ ಕಂಪನಿಯು ಗ್ಯಾಲಕ್ಸಿ A12 (4GB) ಸ್ಮಾರ್ಟ್‌ಫೋನ್ ಅನ್ನು ದೇಶದಲ್ಲಿ ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ ಎನ್ನಲಾಗಿದ್ದು, ಆದರೆ ಸ್ಯಾಮ್‌ಸಂಗ್ ಇನ್ನೂ ಅಧಿಕೃತ ಬಿಡುಗಡೆ ದಿನಾಂಕವನ್ನು ಹಂಚಿಕೊಂಡಿಲ್ಲ. ಇನ್ನು ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಪಡೆದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ವಿನ್ಯಾಸ
ಸ್ಯಾಮ್‌ಸಂಗ್ ಗ್ಯಾಲಕ್ಸಿ A12 ಸ್ಮಾರ್ಟ್‌ಫೋನ್ 6.4 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿರಲಿದೆ. LCD ಮಾದರಿಯ ಡಿಸ್‌ಪ್ಲೇ ಇರಲಿದ್ದು, ಅತ್ಯುತ್ತಮ ರೆಸಲ್ಯೂಶನನ್ನು ಒಳಗೊಂಡಿರಲಿದೆ. ಸ್ಕ್ರೀನ್ ರಕ್ಷಣೆಗೆ ಗೊರಿಲ್ಲಾ ಗ್ಲಾಸ್ ಒದಗಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಪ್ರೊಸೆಸರ್ ಕಾರ್ಯ
ಸ್ಯಾಮ್‌ಸಂಗ್ ಗ್ಯಾಲಕ್ಸಿ A12 ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಸ್ನ್ಯಾಪ್‌ಡ್ರಾಗನ್ 450 ಪ್ರೊಸೆಸರ್ ಹೊಂದಿರಲಿದ್ದು, ಇದರೊಂದಿಗೆ ಆಂಡ್ರಾಯ್ಡ್ 10 ಓಎಸ್ ಹಾಗೂ ಒನ್ UI ಸ್ಕೀನ್ ಓಎಸ್ ಬೆಂಬಲ ಇರಲಿದೆ ಎನ್ನಲಾಗಿದೆ. 4GB RAM ಮತ್ತು 64GB ಸ್ಟೋರೇಜ್ ವೇರಿಯಂಟ್ ಆಯ್ಕೆ ಇರುವ ಸಾಧ್ಯತೆಗಳಿವೆ.

ತ್ರಿವಳಿ ಕ್ಯಾಮೆರಾ ಸೆನ್ಸಾರ್
ಗ್ಯಾಲಕ್ಸಿ A12 ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ಒಟ್ಟು ತ್ರಿವಳಿ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿರಲಿದ್ದು, ಮುಖ್ಯ ಕ್ಯಾಮೆರಾವು 13ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿರಲಿದೆ. ಹಾಗೆಯೇ ಇನ್ನೆರಡು ಕ್ಯಾಮೆರಾಗಳು 5ಎಂಪಿ ಹಾಗೂ 2ಎಂಪಿ ಸೆನ್ಸಾರ್ ಪಡೆದಿರಲಿವೆ. ಇನ್ನು ಮುಂಭಾಗದಲ್ಲಿ ಸೆಲ್ಫಿಗಾಗಿ 8ಎಂಪಿ ಕ್ಯಾಮೆರಾ ಸೆನ್ಸಾರ್ ಹೊಂದಿರಲಿದೆ.

ಬ್ಯಾಟರಿ ಬ್ಯಾಕ್‌ಅಪ್
ಸ್ಯಾಮ್‌ಸಂಗ್ ಗ್ಯಾಲಕ್ಸಿ A12 ಸ್ಮಾರ್ಟ್‌ಫೋನ್ 5,000mAh ಬ್ಯಾಟರಿ ಬ್ಯಾಕ್‌ಅಪ್ ಸಾಮರ್ಥ್ಯ ಪಡೆದಿರಲಿದ್ದು, 15W ಸಾಮರ್ಥ್ಯದ ಫಾಸ್ಟ್ ಚಾರ್ಜರ್ ಸೌಲಭ್ಯ ಇರಲಿದೆ. ಹಾಗೆಯೇ ಇದರೊಂದಿಗೆ ಯುಎಸ್‌ಬಿ ಟೈಪ್-ಸಿ ಪೋರ್ಟ್, ಜಿಪಿಎಸ್, ಬ್ಲೂಟೂತ್, ವೈಫೈ, ಸೇರಿದಂತೆ ಇತ್ತೀಚಿನ ಅಗತ್ಯ ಫೀಚರ್ಸ್‌ಗಳು ಸಹ ಇರಲಿವೆ.


Click it and Unblock the Notifications








