Home
ಸುದ್ದಿಜಾಲ

ಸದ್ಯದಲ್ಲಿಯೇ ಬಿಡುಗಡೆ ಆಗಲಿದೆ ಅಗ್ಗದ ಸ್ಯಾಮ್‌ಸಂಗ್ ಗ್ಯಾಲಕ್ಸಿ A12 ಫೋನ್!

ದಕ್ಷಿಣ ಕೊರಿಯಾದ ಟೆಕ್ ದೈತ್ಯ ಸ್ಯಾಮ್‌ಸಂಗ್ ದೇಶಿಯ ಮಾರುಕಟ್ಟೆಯಲ್ಲಿ A ಸರಣಿಯಲ್ಲಿ ಈಗಾಗಲೇ ಹಲವು ಬಜೆಟ್‌ ಫೋನ್‌ಗಳನ್ನು ಬಿಡುಗಡೆ ಮಾಡಿ ಗ್ರಾಹಕರಿಂದ ಸೈ ಅನಿಸಿಕೊಂಡಿದೆ. ಅದರ ಮುಂದುವರಿದ ಭಾಗವಾಗಿ ಕಂಪನಿಯು ಇದೀಗ A ಸರಣಿಯಲ್ಲಿ ಮತ್ತೊಂದು ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಲು ಸಿದ್ಧವಾಗಿದೆ. ಈ ನೂತನ ಸ್ಮಾರ್ಟ್‌ಫೋನ್ ಅಗ್ಗದ ಪ್ರೈಸ್‌ಟ್ಯಾಗ್‌ ಹೊಂದಿರಲಿದೆ ಎನ್ನಲಾಗಿದೆ.

ಸ್ಯಾಮ್‌ಸಂಗ್

ಹೌದು, ಸ್ಯಾಮ್‌ಸಂಗ್ ಸಂಸ್ಥೆಯು ಬಜೆಟ್ ಸ್ನೇಹಿ ಬೆಲೆಯಲ್ಲಿ ಹೊಸದಾಗಿ ಗ್ಯಾಲಕ್ಸಿ A12 ಸ್ಮಾರ್ಟ್‌ಫೋನ್ ಲಾಂಚ್‌ ಮಾಡಲು ಸಿದ್ಧತೆ ನಡೆಸಿದೆ. ಸದ್ಯದಲ್ಲಿಯೇ ಬಿಡುಗಡೆ ಆಗಲಿರುವ ಈ ಫೋನ್ ಎಂಟ್ರಿ ಲೆವೆಲ್ ಫೋನ್‌ಗಳ ಲಿಸ್ಟಿನಲ್ಲಿ ಕಾಣಿಸಿಕೊಳ್ಳಲಿದೆ. ಇನ್ನು ಈ ಸ್ಮಾರ್ಟ್‌ಫೋನ್ 32GB ಮತ್ತು 64GB ಆಂತರಿಕ ಸ್ಟೋರೇಜ್‌ನ ಎರಡು ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿರುವ ಸಾಧ್ಯತೆಗಳಿವೆ ಎನ್ನಲಾಗಿದೆ. ಈ ಫೋನಿನ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ

ಡಿಸ್‌ಪ್ಲೇ ರಚನೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ A12 ಸ್ಮಾರ್ಟ್‌ಫೋನ್ 6.4 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿರಲಿದೆ. LCD ಮಾದರಿಯ ಡಿಸ್‌ಪ್ಲೇ ಇರಲಿದ್ದು, ಅತ್ಯುತ್ತಮ ರೆಸಲ್ಯೂಶನನ್ನು ಒಳಗೊಂಡಿರಲಿದೆ. ಸ್ಕ್ರೀನ್‌ ರಕ್ಷಣೆಗೆ ಗೊರಿಲ್ಲಾ ಗ್ಲಾಸ್ ಒದಗಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಪ್ರೊಸೆಸರ್ ಬಲ

ಪ್ರೊಸೆಸರ್ ಬಲ

ಸ್ಯಾಮ್‌ಸಂಗ್ ಗ್ಯಾಲಕ್ಸಿ A12 ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಸ್ನ್ಯಾಪ್‌ಡ್ರಾಗನ್ 450 ಪ್ರೊಸೆಸರ್ ಹೊಂದಿರಲಿದ್ದು, ಇದರೊಂದಿಗೆ ಆಂಡ್ರಾಯ್ಡ್ 10 ಓಎಸ್‌ ಹಾಗೂ ಒನ್‌ UI ಸ್ಕೀನ್ ಓಎಸ್ ಬೆಂಬಲ ಇರಲಿದೆ ಎನ್ನಲಾಗಿದೆ. 3GB RAM ಮತ್ತು 32GB ಮತ್ತು 64GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳು ಇರುವ ಸಾಧ್ಯತೆಗಳಿವೆ.

ಕ್ಯಾಮೆರಾ ಸೆನ್ಸಾರ್

ಕ್ಯಾಮೆರಾ ಸೆನ್ಸಾರ್

ಗ್ಯಾಲಕ್ಸಿ A12 ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ಒಟ್ಟು ತ್ರಿವಳಿ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿರಲಿದ್ದು, ಮುಖ್ಯ ಕ್ಯಾಮೆರಾವು 13ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿರಲಿದೆ. ಹಾಗೆಯೇ ಇನ್ನೆರಡು ಕ್ಯಾಮೆರಾಗಳು 5ಎಂಪಿ ಹಾಗೂ 2ಎಂಪಿ ಸೆನ್ಸಾರ್ ಪಡೆದಿರಲಿವೆ. ಇನ್ನು ಮುಂಭಾಗದಲ್ಲಿ ಸೆಲ್ಫಿಗಾಗಿ 8ಎಂಪಿ ಕ್ಯಾಮೆರಾ ಸೆನ್ಸಾರ್ ಹೊಂದಿರಲಿದೆ.

ಬ್ಯಾಟರಿ ಲೈಫ್

ಬ್ಯಾಟರಿ ಲೈಫ್

ಸ್ಯಾಮ್‌ಸಂಗ್ ಗ್ಯಾಲಕ್ಸಿ A12 ಸ್ಮಾರ್ಟ್‌ಫೋನ್ 4000mAh ಬ್ಯಾಟರಿ ಬ್ಯಾಕ್‌ಅಪ್ ಸಾಮರ್ಥ್ಯ ಪಡೆದಿರಲಿದ್ದು, 15W ಸಾಮರ್ಥ್ಯದ ಫಾಸ್ಟ್‌ ಚಾರ್ಜರ್ ಸೌಲಭ್ಯ ಇರಲಿದೆ. ಹಾಗೆಯೇ ಇದರೊಂದಿಗೆ ಯುಎಸ್‌ಬಿ ಟೈಪ್-ಸಿ ಪೋರ್ಟ್‌, ಜಿಪಿಎಸ್, ಬ್ಲೂಟೂತ್, ವೈಫೈ, ಸೇರಿದಂತೆ ಇತ್ತೀಚಿನ ಅಗತ್ಯ ಫೀಚರ್ಸ್‌ಗಳು ಸಹ ಇರಲಿವೆ.

Best Mobiles in India

English summary
Samsung Galaxy A12 will come in two internal storage between 32GB and 64GB.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+