ಸ್ಯಾಮ್‌ಸಂಗ್‌ನಿಂದ ಬಜೆಟ್ ಬೆಲೆಯ ಗ್ಯಾಲಕ್ಸಿ A12 ಸ್ಮಾರ್ಟ್‌ಫೋನ್ ಲಾಂಚ್!
ಸ್ಮಾರ್ಟ್‌ಫೋನ್ ದೈತ್ಯ ಸ್ಯಾಮ್‌ಸಂಗ್ ಕಂಪೆನಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ A ಸರಣಿಯಲ್ಲಿ ಹಲವು ಸ್ಮಾರ್ಟ್‌ಫೋನ್ ಪರಿಚಯಿಸಿರುವ ಸ್ಯಾಮ್‌ಸಂಗ್ ಇದೀಗ ಹೊಸ ಗ್ಯಾಲಕ್ಸಿ A12 ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕಳೆದ ನವೆಂಬರ್ ತಿಂಗಳಲ್ಲಿಯೇ ಯೂರೋಪ್‌ನಲ್ಲಿ ಬಿಡುಗಡೆ ಆಗಿತ್ತು. ಸದ್ಯ ಭಾರತದಲ್ಲಿ ಬಿಡುಗಡೆ ಆಗಿದ್ದು, ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ಹೌದು, ಸ್ಯಾಮ್‌ಸಂಗ್ ಕಂಪೆನಿ ತನ್ನ ಹೊಸ ಗ್ಯಾಲಕ್ಸಿ A12 ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಲಾಂಚ್ ಮಾಡಿದೆ. ಇದು 6.5 ಇಂಚಿನ ಡಿಸ್‌ಪ್ಲೇ ಹೊಂದಿದ್ದು, TFT ಇನ್ಫಿನಿಟಿ-ವಿ-ಡಿಸ್‌ಪ್ಲೇ ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್ 4GB RAM+64GB 4GBRAM+128GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಆಯ್ಕೆಯಲ್ಲಿ ಲಭ್ಯವಾಗಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ವಿನ್ಯಾಸ
ಸ್ಯಾಮ್‌ಸಂಗ್ ಗ್ಯಾಲಕ್ಸಿ A12 ಸ್ಮಾರ್ಟ್‌ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು TFT ಇನ್ಫಿನಿಟಿ-ವಿ ಡಿಸ್‌ಪ್ಲೇ ಆಗಿದ್ದು, 20:9 ರಚನೆಯ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್
ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ P35 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 10 ನಲ್ಲಿ ಒಂದು ಯುಐ ಕೋರ್ 2.5 ರೊಂದಿಗೆ ಕಾರ್ಯನಿರ್ವಹಿಸುತ್ತದೆ. ಜೊತೆಗೆ 4GB RAM+64GB 4GBRAM+128GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಆಯ್ಕೆಯಲ್ಲಿ ಲಭ್ಯವಾಗಲಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ
ಸ್ಯಾಮ್‌ಸಂಗ್ ಗ್ಯಾಲಕ್ಸಿ A12 ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಇದು 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 15W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಯಲ್ಲಿ 4G LTE, ವೈ-ಫೈ, ಬ್ಲೂಟೂತ್, USB ಟೈಪ್-ಸಿ, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ A12 ಸ್ಮಾರ್ಟ್‌ಫೋನ್ ಭಾರತದಲ್ಲಿ 4GB RAM + 64GB ಇಂಟರ್ ಸ್ಟೋರೇಜ್ ರೂಪಾಂತರಕ್ಕೆ 12,999 ರೂ. ಹಾಗೂ 4GB RAM + 128GB ಸ್ಟೋರೇಜ್ ಆಯ್ಕೆಯನ್ನು ರೂ. 13,999. ಬೆಲೆಯನ್ನು ಹೊಂದಿದೆ. ಈ ಫೋನ್ ಕಪ್ಪು, ನೀಲಿ ಮತ್ತು ಬಿಳಿ ಬಣ್ಣದ ಆಯ್ಕೆಗಳಲ್ಲಿ ಬರುತ್ತದೆ. ಇದು ಫೆಬ್ರವರಿ 17 ರಿಂದ ಚಿಲ್ಲರೆ ಅಂಗಡಿಗಳು, ಸ್ಯಾಮ್‌ಸಂಗ್.ಕಾಮ್ ಮತ್ತು ಪ್ರಮುಖ ಆನ್‌ಲೈನ್ ಪೋರ್ಟಲ್‌ಗಳ ಮೂಲಕ ಖರೀದಿಸಲು ಲಭ್ಯವಿರುತ್ತದೆ. ಇನ್ನು ಸ್ಯಾಮ್‌ಸಂಗ್ ಗ್ಯಾಲಕ್ಸಿ A12 ನಲ್ಲಿ ಲಾಂಚ್ ಆಫರ್‌ನಲ್ಲಿ ಪ್ರಿಪೇಯ್ಡ್ ರೀಚಾರ್ಜ್‌ನಲ್ಲಿ ಜಿಯೋ ಗ್ರಾಹಕರಿಗೆ ರೂ. 349 ಯೋಜನೆ ಮತ್ತು ರೂ. ಪಾಲುದಾರರಿಂದ 4000 ಮೌಲ್ಯದ ವೋಚರ್ಸ್ ಲಭ್ಯವಾಗಲಿದೆ. ಈ ಕೊಡುಗೆ ಹೊಸ ಮತ್ತು ಅಸ್ತಿತ್ವದಲ್ಲಿರುವ ಜಿಯೋ ಚಂದಾದಾರರಿಗೆ ಅನ್ವಯಿಸುತ್ತದೆ. Vi ಯಲ್ಲಿರುವ ಗ್ಯಾಲಕ್ಸಿ ಎ 12 ಗ್ರಾಹಕರಿಗೆ ರೂ. ಮೊದಲ ಮೂರು ತಿಂಗಳು 299 ರೀಚಾರ್ಜ್ ಅಥವಾ ಮೊದಲ ಮೂರು ರೀಚಾರ್ಜ್. ಫೋನ್ ಶೂನ್ಯ ಡೌನ್-ಪೇಮೆಂಟ್ ಇಎಂಐ ಕೊಡುಗೆಗಳೊಂದಿಗೆ ಸಹ ಲಭ್ಯವಿರುತ್ತದೆ.


Click it and Unblock the Notifications








