ಶೀಘ್ರದಲ್ಲೇ ಬರಲಿವೆ ಸ್ಯಾಮ್‌ಸಂಗ್‌ನ ಎರಡು ಬಜೆಟ್‌ ಬೆಲೆಯ 5G ಫೋನ್‌ಗಳು!

|

ಜನಪ್ರಿಯ ಸ್ಯಾಮ್‌ಸಂಗ್ ಸಂಸ್ಥೆಯು ಇತ್ತೀಚಿಗೆ ಗ್ಯಾಲಕ್ಸಿ A ಸರಣಿಯಲ್ಲಿ ಹಲವು ಬಜೆಟ್‌ ದರದ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಅನಿಸಿಕೊಂಡಿದೆ. ಅದರ ಮುಂದುವರಿದ ಭಾಗವಾಗಿ ಗ್ಯಾಲಕ್ಸಿ A13 5G ಮತ್ತು ಗ್ಯಾಲಕ್ಸಿ A23 5G ಫೋನ್‌ಗಳ ಮೂಲಕ ಮತ್ತೆ ಸದ್ದು ಮಾಡಿದೆ. ಈ ಎರಡು ಸ್ಮಾರ್ಟ್‌ಫೋನ್‌ಗಳು ಕೆಲವು ಆಕರ್ಷಕ ಫೀಚರ್ಸ್‌ಗಳ ಮೂಲಕ ಗ್ರಾಹಕರ ಗಮನ ಸೆಳೆದಿವೆ.

ಎರಡು

ಸ್ಯಾಮ್‌ಸಂಗ್ ಕಂಪನಿಯು ಇತ್ತೀಚಿಗೆ A ಸರಣಿಯಲ್ಲಿ ಪರಿಚಯಿಸಿರುವ ಗ್ಯಾಲಕ್ಸಿ A13 5G ಮತ್ತು ಗ್ಯಾಲಕ್ಸಿ A23 5G ಫೋನ್‌ಗಳು ಶೀಘ್ರದಲ್ಲೇ ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲಿವೆ. ಹಾಗೆಯೇ ಈ ಎರಡು ಫೋನ್‌ಗಳ ಬೆಲೆಯ ಬಗ್ಗೆಯು ಮಾಹಿತಿ ಲೀಕ್ ಆಗಿದೆ. ಇನ್ನು ಈ ಎರಡು ಫೋನ್‌ಗಳು 5000 mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದ್ದು, ಎರಡು ಫೋನ್‌ಗಳ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸಲ್‌ ಸೆನ್ಸಾರ್‌ನಲ್ಲಿದೆ. ಹಾಗಾದರೆ, ಭಾರತದಲ್ಲಿ ಗ್ಯಾಲಕ್ಸಿ A13 5G ಮತ್ತು ಗ್ಯಾಲಕ್ಸಿ A23 5G ಫೋನ್‌ಗಳ ಬೆಲೆ ಎಷ್ಟಿರಲಿದೆ ಹಾಗೂ ಫೀಚರ್ಸ್‌ ಏನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಗ್ಯಾಲಕ್ಸಿ A13 5G: ಡಿಸ್‌ಪ್ಲೇ ರಚನೆ

ಗ್ಯಾಲಕ್ಸಿ A13 5G: ಡಿಸ್‌ಪ್ಲೇ ರಚನೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A13 5G ಸ್ಮಾರ್ಟ್‌ಫೋನ್ 720 x 1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ.

ಗ್ಯಾಲಕ್ಸಿ A13 5G: ಪ್ರೊಸೆಸರ್‌ ಪವರ್

ಗ್ಯಾಲಕ್ಸಿ A13 5G: ಪ್ರೊಸೆಸರ್‌ ಪವರ್

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A13 5G ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 700 ಪ್ರೊಸೆಸರ್‌ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 11 ಓಎಸ್‌ ಸಪೋರ್ಟ್‌ ನಲ್ಲಿ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಸ್ಟೋರೇಜ್‌ ಆಯ್ಕೆ ಹೊಂದಿದೆ. ಇದರೊಂದಿಗೆ ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿಯನ್ನು 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಗ್ಯಾಲಕ್ಸಿ A13 5G: ಟ್ರಿಪಲ್ ಕ್ಯಾಮೆರಾ

ಗ್ಯಾಲಕ್ಸಿ A13 5G: ಟ್ರಿಪಲ್ ಕ್ಯಾಮೆರಾ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A13 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 5 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಫೋಟೊ ಎಡಿಟಿಂಗ್ ಅಗತ್ಯ ಫೀಚರ್ಸ್‌ ಅನ್ನು ಹೊಂದಿದೆ.

ಗ್ಯಾಲಕ್ಸಿ A13 5G: ಬ್ಯಾಟರಿ ಮತ್ತು ಇತರೆ

ಗ್ಯಾಲಕ್ಸಿ A13 5G: ಬ್ಯಾಟರಿ ಮತ್ತು ಇತರೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A13 5G ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಫೋನ್ ಡ್ಯುಯಲ್-ಬ್ಯಾಂಡ್ Wi-Fi 802.11 a/b/g/n/ac ಅನ್ನು ಬೆಂಬಲಿಸುತ್ತದೆ. ಹಾಗೆಯೇ ಈ ಫೋನ್ 164.5x76.5x8.8mm ಸುತ್ತಳತೆ ಹೊಂದಿದ್ದು, 95 ಗ್ರಾಂ ತೂಕವನ್ನು ಪಡೆದಿದೆ. ಉಳಿದಂತೆ 5mm ಆಡಿಯೋ ಜ್ಯಾಕ್, Wi-Fi, USB ಟೈಪ್-C ಪೋರ್ಟ್ ಹಾಗೂ ಇತರೆ ಕನೆಕ್ಟಿವಿಟಿ ಆಯ್ಕೆಗಳನ್ನು ಒಳಗೊಂಡಿದೆ.

ಗ್ಯಾಲಕ್ಸಿ A23 5G ಫೋನಿನ ಫೀಚರ್ಸ್‌

ಗ್ಯಾಲಕ್ಸಿ A23 5G ಫೋನಿನ ಫೀಚರ್ಸ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A23 5G ಸ್ಯಾಮ್‌ಸಂಗ್‌ 6.6 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಅನಿರ್ದಿಷ್ಟ ಆಕ್ಟಾ ಕೋರ್‌ ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್‌ 12 ಆಧಾರಿತ One UI 4.1 ನಲ್ಲಿ ಕಾರ್ಯ ನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 128 GB ಇಂಟರ್‌ ಸ್ಟೋರೇಜ್‌ ಬಲವನ್ನು ಹೊಂದಿದೆ. ಈ ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಜೊತೆಗೆ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 25W ಫಾಸ್ಟ್ ಚಾರ್ಜಿಂಗ್‌ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G, Wi-Fi, ಬ್ಲೂಟೂತ್ v5.0, GPS, 3.5mm ಹೆಡ್‌ಫೋನ್ ಜ್ಯಾಕ್ ಮತ್ತು USB ಟೈಪ್-C ಪೋರ್ಟ್ ಅನ್ನು ಒಳಗೊಂಡಿದೆ.

ನಿರೀಕ್ಷಿತ ಬೆಲೆ ಎಷ್ಟು?

ನಿರೀಕ್ಷಿತ ಬೆಲೆ ಎಷ್ಟು?

ಸದ್ಯದಲ್ಲೇ ಭಾರತಕ್ಕೆ ಸ್ಯಾಮ್‌ಸಂಗ್ ಗ್ಯಾಲಕ್ಸಿ A13 5G ಮತ್ತು ಗ್ಯಾಲಕ್ಸಿ A23 5G ಫೋನ್‌ಗಳು ಎಂಟ್ರಿ ಕೊಡಲಿವೆ. ಇನ್ನು ಗ್ಯಾಲಕ್ಸಿ A13 5G 4GB + 64GB ಸ್ಟೋರೇಜ್‌ ವೇರಿಯಂಟ್‌ ಬೆಲೆಯು NTD 6,990 (ಭಾರತದಲ್ಲಿ ಅಂದಾಜು 18,500 ರೂ. ಗಳು ಎನ್ನಲಾಗಿದೆ.) ಹಾಗೆಯೇ ಗ್ಯಾಲಕ್ಸಿ A23 5G ಫೋನ್ NTD 8990 (ಭಾರತದಲ್ಲಿ ಅಂದಾಜು 23,800 ರೂ. ಗಳು ಎಂದು ಅಂದಾಜಿಸಲಾಗಿದೆ).

Best Mobiles in India

English summary
Samsung Galaxy A13 5G, Galaxy A23 5G Price, Features Announced: Details.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X