ಸ್ಯಾಮ್‌ಸಂಗ್‌ ಗ್ಯಾಲಕ್ಸಿ A13 5G ಸ್ಮಾರ್ಟ್‌ಫೋನ್‌ ಲಾಂಚ್‌!..50ಎಂಪಿ ಕ್ಯಾಮೆರಾ!

|

ದಕ್ಷಿಣ ಕೊರಿಯಾದ ಟೆಕ್‌ ದೈತ್ಯ ಸ್ಯಾಮ್‌ಸಂಗ್‌ ಕಂಪೆನಿ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಸ್ಯಾಮ್‌ಸಂಗ್‌ ಈಗಾಗಲೇ ಗ್ಯಾಲಕ್ಸಿ M ಮತ್ತು ಗ್ಯಾಲಕ್ಸಿ A ಸರಣಿಯಲ್ಲಿ ಅನೇಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಅದರ ಮುಂದುವರಿದ ಭಾಗವಾಗಿ ಕಂಪನಿಯು ಇದೀಗ ಹೊಸದಾಗಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A13 5G ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಈ ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 700 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A13 5G ಸ್ಮಾರ್ಟ್‌ಫೋನ್‌ ಲಾಂಚ್‌!..50ಎಂಪಿ ಕ್ಯಾಮೆರಾ!

ಹೌದು, ಸ್ಯಾಮ್‌ಸಂಗ್‌ ಕಂಪೆನಿ ಹೊಸ ಗ್ಯಾಲಕ್ಸಿ A13 5G ಸ್ಮಾರ್ಟ್‌ಫೋನ್‌ ಅನ್ನು ಯುಎಸ್‌ ಮಾರುಕಟ್ಟೆಯಲ್ಲಿ ಅನಾವರಣ ಮಾಡಿದೆ. ಈ ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದರೊಂದಿಗೆ ಡಿಸ್‌ಪ್ಲೇಯು 90Hz ರೀಫ್ರೇಶ್‌ ರೇಟ್ ಅನ್ನು ಪಡೆದಿದ್ದು, 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದೆ. ಇನ್ನುಳಿದಂತೆ ಗ್ಯಾಲಕ್ಸಿ A13 5G ಸ್ಮಾರ್ಟ್‌ಫೋನ್‌ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಸ್ಯಾಮ್‌ಸಂಗ್‌ ಗ್ಯಾಲಕ್ಸಿ A13 5G ಸ್ಮಾರ್ಟ್‌ಫೋನ್ 720 x 1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಇನ್ನು I ಡಿಸ್‌ಪ್ಲೇಯು ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A13 5G ಸ್ಮಾರ್ಟ್‌ಫೋನ್‌ ಲಾಂಚ್‌!..50ಎಂಪಿ ಕ್ಯಾಮೆರಾ!

ಪ್ರೊಸೆಸರ್‌ ಪವರ್ ಯಾವುದು?
ಸ್ಯಾಮ್‌ಸಂಗ್‌ ಗ್ಯಾಲಕ್ಸಿ A13 5G ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 700 ಪ್ರೊಸೆಸರ್‌ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 11 ಓಎಸ್‌ ಸಪೋರ್ಟ್‌ ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಸ್ಟೋರೇಜ್‌ ಆಯ್ಕೆ ಹೊಂದಿದೆ. ಇದರೊಂದಿಗೆ ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿಯನ್ನು 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಟ್ರಿಪಲ್ ಕ್ಯಾಮೆರಾ ವಿಶೇಷ
ಸ್ಯಾಮ್‌ಸಂಗ್‌ ಗ್ಯಾಲಕ್ಸಿ A13 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 5 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಫೋಟೊ ಎಡಿಟಿಂಗ್ ಅಗತ್ಯ ಫೀಚರ್ಸ್‌ ಅನ್ನು ಹೊಂದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A13 5G ಸ್ಮಾರ್ಟ್‌ಫೋನ್‌ ಲಾಂಚ್‌!..50ಎಂಪಿ ಕ್ಯಾಮೆರಾ!

ಬ್ಯಾಟರಿ ಮತ್ತು ಇತರೆ
ಸ್ಯಾಮ್‌ಸಂಗ್‌ ಗ್ಯಾಲಕ್ಸಿ A13 5G ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಫೋನ್ ಡ್ಯುಯಲ್-ಬ್ಯಾಂಡ್ Wi-Fi 802.11 a/b/g/n/ac ಅನ್ನು ಬೆಂಬಲಿಸುತ್ತದೆ. ಹಾಗೆಯೇ ಈ ಫೋನ್ 164.5x76.5x8.8mm ಸುತ್ತಳತೆ ಹೊಂದಿದ್ದು, 95 ಗ್ರಾಂ ತೂಕವನ್ನು ಪಡೆದಿದೆ. ಉಳಿದಂತೆ 5mm ಆಡಿಯೋ ಜ್ಯಾಕ್, Wi-Fi, USB ಟೈಪ್-C ಪೋರ್ಟ್ ಹಾಗೂ ಇತರೆ ಕನೆಕ್ಟಿವಿಟಿ ಆಯ್ಕೆಗಳನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಸ್ಯಾಮ್‌ಸಂಗ್‌ ಗ್ಯಾಲಕ್ಸಿ A13 5G ಸ್ಮಾರ್ಟ್‌ಫೋನ್ GB RAM + 64GB ವೇರಿಯಂಟ್ ದರವು ಯುನೈಟೆಡ್ ಸ್ಟೇಟ್ಸ್‌ನಲ್ಲಿ $249.99 (ಭಾರತದಲ್ಲಿ ಅಂದಾಜು 18,700ರೂ) ಆಗಿದೆ. ಇನ್ನು ಈ ಫೋನ್ ಭಾರತದಲ್ಲಿ ಯಾವಾಗ ಎಂಟ್ರಿ ಕೊಡಲಿದೆ ಎನ್ನುವ ಬಗ್ಗೆ ಮಾಹಿತಿ ಇಲ್ಲ.

Best Mobiles in India

English summary
Samsung Galaxy A13 5G offers features like a 6.5-inch HD+ display with a 90Hz refresh rate and a 5,000mAh battery with 15W fast charging.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X