ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A13 ಮತ್ತು ಗ್ಯಾಲಕ್ಸಿ A23 ಬಿಡುಗಡೆ!
ಸ್ಮಾರ್ಟ್‌ಫೋನ್ ದೈತ್ಯ ಸ್ಯಾಮ್‌ಸಂಗ್ ತನ್ನ ವಿಭಿನ್ನ ಮಾದರಿಯ ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಗ್ಯಾಲಕ್ಸಿ ಎ, ಗ್ಯಾಲಕ್ಸಿ ಎಂ, ಗ್ಯಾಲಕ್ಸಿ ಎಸ್ ಸರಣಿಯಲ್ಲಿ ಅನೇಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಭಾರತದಲ್ಲಿ ತನ್ನ ಹೊಸ ಸ್ಯಾಮ್‌ಸಂಗ್ ಗ್ಯಾಲಕ್ಸಿ A13 ಮತ್ತು ಗ್ಯಾಲಕ್ಸಿ A23 ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಈ ಎರಡು ಸ್ಮಾರ್ಟ್‌ಫೋನ್‌ಗಳು ಆಕ್ಟಾ-ಕೋರ್ ಪ್ರೊಸೆಸರ್ ಬಲವನ್ನು ಪಡೆದುಕೊಂಡಿವೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿವೆ.

ಹೌದು, ಸ್ಯಾಮ್‌ಸಂಗ್ ಕಂಪೆನಿ ಭಾರತದಲ್ಲಿ ಗ್ಯಾಲಕ್ಸಿ A13 ಮತ್ತು ಗ್ಯಾಲಕ್ಸಿ A23 ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಎರಡೂ ಸ್ಮಾರ್ಟ್‌ಫೋನ್‌ಗಳು 6.6 ಇಂಚಿನ ಡಿಸ್‌ಪ್ಲೇಯನ್ನು ಹೊಂದಿವೆ. ಇದಲ್ಲದೆ ಈ ಎರಡೂ ಫೋನ್‌ಗಳು ಕೂಡ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಪಡೆದುಕೊಂಡಿವೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿವೆ. ಇನ್ನುಳಿದಂತೆ ಈ ಎರಡೂ ಸ್ಮಾರ್ಟ್‌ಫೋನ್‌ಗಳ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A13
ಸ್ಯಾಮ್‌ಸಂಗ್ ಗ್ಯಾಲಕ್ಸಿ A13 ಸ್ಮಾರ್ಟ್‌ಫೋನ್ 1,080x2,408 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.6 ಇಂಚಿನ ಫುಲ್ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಇದು ಅನಿರ್ದಿಷ್ಟ ಆಕ್ಟಾ-ಕೋರ್ ಪ್ರೊಸೆಸರ್ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್ 12 ಆಧಾರಿತ One UI 4.1 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಈ ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಮತ್ತು ಇನ್ನುಳಿದ ಎರಡೂ ಕ್ಯಾಮೆರಾಗಳು 2 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿವೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G, Wi-Fi, ಬ್ಲೂಟೂತ್ v5.0, GPS, 3.5mm ಹೆಡ್‌ಫೋನ್ ಜ್ಯಾಕ್ ಮತ್ತು USB ಟೈಪ್-C ಪೋರ್ಟ್ ಅನ್ನು ಒಳಗೊಂಡಿವೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A23
ಸ್ಯಾಮ್‌ಸಂಗ್ ಗ್ಯಾಲಕ್ಸಿ A23 ಸ್ಮಾರ್ಟ್‌ಫೋನ್ ಕೂಡ 6.6-ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಅನಿರ್ದಿಷ್ಟ ಆಕ್ಟಾ-ಕೋರ್ ಪ್ರೊಸೆಸರ್ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್ 12-ಆಧಾರಿತ One UI 4.1 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಬಲವನ್ನು ಹೊಂದಿದೆ. ಈ ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಲೆನ್ಸ್ ಮತ್ತು ಮೂರು ಹಾಗೂ ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಕ್ಯಾಮೆರಾಗಳನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 25W ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G, Wi-Fi, ಬ್ಲೂಟೂತ್ v5.0, GPS, 3.5mm ಹೆಡ್‌ಫೋನ್ ಜ್ಯಾಕ್ ಮತ್ತು USB ಟೈಪ್-C ಪೋರ್ಟ್ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A13 ಫೋನ್ ಆರಂಭಿಕ ಬೆಲೆ 4GB RAM + 64GB ಸ್ಟೋರೇಜ್ ಮಾದರಿಗೆ 14,999ರೂ.ಆಗಿದೆ. ಆದರೆ 6GB + 128GB ರೂಪಾಂತರದ ಬೆಲೆ 17,999ರೂ.ಆಗಿದೆ. ಈ ಸ್ಮಾರ್ಟ್‌ಫೋನ್ ಬ್ಲ್ಯಾಕ್, ತಿಳಿ ನೀಲಿ, ಕಿತ್ತಳೆ ಮತ್ತು ಬಿಳಿ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿದೆ.
ಇನ್ನು ಸ್ಯಾಮ್‌ಸಂಗ್ ಗ್ಯಾಲಕ್ಸಿ A23 ಫೋನ್ ಬೆಲೆ 6GB + 128GB ಮಾದರಿಗೆ 19,499ರೂ. ಆಗಿದೆ. ಆದರೆ 8GB + 128GB ರೂಪಾಂತರದ ಬೆಲೆ 20,999ರೂ.ಆಗಿದೆ. ಈ ಫೋನ್ ಕಪ್ಪು, ತಿಳಿ ನೀಲಿ, ಕಿತ್ತಳೆ ಮತ್ತು ಬಿಳಿ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿರುತ್ತದೆ. ಈ ಎರಡೂ ಸ್ಮಾರ್ಟ್‌ಫೋನ್‌ಗಳನ್ನು ಸ್ಯಾಮ್‌ಸಂಗ್ ಇಂಡಿಯಾ ವೆಬ್‌ಸೈಟ್‌ನಲ್ಲಿ ಪಟ್ಟಿ ಮಾಡಲಾಗಿದೆ.


Click it and Unblock the Notifications








