ಬಿಡುಗಡೆಗೂ ಮುನ್ನವೇ ಸಖತ್ ಸೌಂಡ್ ಮಾಡ್ತಿದೆ ಈ ಸ್ಮಾರ್ಟ್‌ಫೋನ್! ಯಾಕಿಷ್ಟು ಕುತೂಹಲ!
ಭಾರತದ ಮೊಬೈಲ್ ಮಾರುಕಟ್ಟೆಯಲ್ಲಿ ಸ್ಯಾಮ್‌ಸಂಗ್ ಕಂಪೆನಿ ಅಗ್ರಸ್ಥಾನದಲ್ಲಿದೆ. ತನ್ನ ಗ್ಯಾಲಕ್ಸಿ ಎಂ, ಎ,ಎಫ್, ಎಸ್ ಸರಣಿಯ ಫೋನ್‌ಗಳ ಜೊತೆಗೆ ಗ್ಯಾಲಕ್ಸಿ ಫೋಲ್ಡ್ ಸ್ಮಾರ್ಟ್‌ಫೋನ್‌ಗಳ ಮೂಲಕ ಕೂಡ ಸದ್ದು ಮಾಡಿದೆ. ಇದೀಗ ತನ್ನ ಗ್ಯಾಲಕ್ಸಿ A ಸರಣಿಯಲ್ಲಿ ಹೊಸ ಬಜೆಟ್ ಸ್ಮಾರ್ಟ್‌ಫೋನ್ ಪರಿಚಯಿಸಲು ತಯಾರಿ ನಡೆಸಿದೆ.
ಹೌದು, ಸ್ಯಾಮ್‌ಸಂಗ್ ಕಂಪೆನಿ ಹೊಸ ಗ್ಯಾಲಕ್ಸಿ A14 4G ಸ್ಮಾರ್ಟ್‌ಫೋನ್ ಬಿಡುಗಡೆಗೆ ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್‌ಫೋನ್ ಶೀಘ್ರದಲ್ಲೇ ಭಾರತಕ್ಕೆ ಎಂಟ್ರಿ ನೀಡಲಿದೆ ಎನ್ನಲಾಗಿದೆ. ಸದ್ಯ ಸ್ಮಾರ್ಟ್‌ಫೋನ್ ಲಾಂಚ್ ಡೇಟ್ ಬಹಿರಂಗವಾಗಿಲ್ಲವಾದರೂ, ಫೋನ್‌ನ ಫೀಚರ್ಸ್‌ಗಳು ಆನ್‌ಲೈನ್‌ನಲ್ಲಿ ಬಹಿರಂಗವಾಗಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A14 4G ಸ್ಮಾರ್ಟ್‌ಫೋನ್ ಫೀಚರ್ಸ್ ನಿರೀಕ್ಷೆ ಏನು?
ಸ್ಯಾಮ್‌ಸಂಗ್ ಗ್ಯಾಲಕ್ಸಿ A14 4G ಸ್ಮಾರ್ಟ್‌ಫೋನ್ 6.6 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿರಲಿದೆ. ಡಿಸ್‌ಪ್ಲೇ 1,080x2,408 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿರಲಿದೆ ಎನ್ನಲಾಗಿದೆ. ಇನ್ನು ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಬೆಂಬಲಿಸಲಿದೆ ಎನ್ನಲಾಗಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A14 4G ಸ್ಮಾರ್ಟ್‌ಫೋನ್ ಪ್ರೊಸೆಸರ್ ಯಾವುದು?
ಸ್ಯಾಮ್‌ಸಂಗ್ ಗ್ಯಾಲಕ್ಸಿ A14 4G ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಹಿಲಿಯೋ G80 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುವ ನಿರೀಕ್ಷೆಯಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 13 ಬೆಂಬಲವನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ. ಹಾಗೆಯೇ 4GB RAM + 64GB ಸಂಗ್ರಹಣೆ ಮತ್ತು 4GB RAM + 128GB ಇಂಟರ್ ಸ್ಟೋರೇಜ್ ಸಾಮರ್ಥ್ದ ಆಯ್ಕೆಯಲ್ಲಿ ಬರಲಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A14 4G ಸ್ಮಾರ್ಟ್‌ಫೋನ್ ಕ್ಯಾಮೆರಾ ಸೆಟ್‌ಅಪ್
ಸ್ಯಾಮ್‌ಸಂಗ್ ಗ್ಯಾಲಕ್ಸಿ A14 4G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರುವ ನಿರೀಕ್ಷೆಯಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿರಲಿದೆ ಎಂದು ನಿರೀಕ್ಷಿಸಲಾಗಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A14 4G ಸ್ಮಾರ್ಟ್‌ಫೋನ್ ಬ್ಯಾಟರಿ
ಸ್ಯಾಮ್‌ಸಂಗ್ ಗ್ಯಾಲಕ್ಸಿ A14 4G ಸ್ಮಾರ್ಟ್‌ಫೋನ್ 5,000mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿರಲಿದೆ. ಇದು 15W ಚಾರ್ಜಿಂಗ್ ಬೆಂಬಲಿಸಲಿದೆ ಎಂದು ಹೇಳಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಯುಎಸ್‌ಬಿ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿರಲಿದೆ ಎಂದು ವರದಿಯಾಗಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A14 4G ಸ್ಮಾರ್ಟ್‌ಫೋನ್ ಬೆಲೆ ಏನಿರಬಹುದು?
ಸ್ಯಾಮ್‌ಸಂಗ್ ಗ್ಯಾಲಕ್ಸಿ A14 4G ಸ್ಮಾರ್ಟ್‌ಫೋನ್ ಬೇಸ್ ಮಾಡೆಲ್ 13,999ರೂ. ಬೆಲೆಯಲ್ಲಿ ಬರುವ ನಿರೀಕ್ಷೆಯಿದೆ. ಆದರೆ 128GB ಸ್ಟೋರೇಜ್ ರೂಪಾಂತರವು 14,999ರೂ.ಬೆಲೆಯಲ್ಲಿ ಬರಲಿದೆ ಎಂದು ಅಂದಾಜಿಸಲಾಗಿದೆ.
ಇನ್ನು ಸ್ಯಾಮ್‌ಸಂಗ್ ಕಂಪೆನಿ ಇತ್ತೀಚಿಗೆ ಗ್ಯಾಲಕ್ಸಿ M14 5G ಸ್ಮಾರ್ಟ್‌ಫೋನ್ ಪರಿಚಯಿಸಿತ್ತು. ಈ ಸ್ಮಾರ್ಟ್‌ಫೋನ್ 6.6 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 2408 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇದು 90Hz ರಿಫ್ರೆಶ್ ರೇಟ್ ಅನ್ನು ಬೆಂಬಲಿಸಲಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಲೇಯರ್ ಪ್ರೊಟೆಕ್ಷನ್ ಅನ್ನು ಪಡೆದಿದೆ. ಸ್ಯಾಮ್‌ಸಂಗ್ ಗ್ಯಾಲಕ್ಸಿ M14 5G ಸ್ಮಾರ್ಟ್‌ಫೋನ್ ಎಕ್ಸಿನೋಸ್ 1330 ಆಕ್ಟಾ-ಕೋರ್ SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಮಾಲಿ G68 GPU ಸಪೊರ್ಟ್ ಅನ್ನು ಪಡೆದಿದೆ. ಹಾಗೆಯೇ 6GB RAM ಮತ್ತು 128GB ಇಂಟರ್ ಸ್ಟೋರೇಜ್‌ನೊಂದಿಗೆ ಬರಲಿದೆ.


Click it and Unblock the Notifications








