Home
ಸುದ್ದಿಜಾಲ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A14 4G ಬಿಡುಗಡೆ! ಹೇಗಿದೆ ಕಾರ್ಯವೈಖರಿ? ಏನಿದರ ವಿಶೇಷತೆ?

ಟೆಕ್‌ ದೈತ್ಯ ಸ್ಯಾಮ್‌ಸಂಗ್‌ ಕಂಪೆನಿ ತನ್ನ ಹೊಸ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A14 4G ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಇದು ಮೀಡಿಯಾಟೆಕ್‌ ಹಿಲಿಯೋ G80 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ಹೌದು, ಸ್ಯಾಮ್‌ಸಂಗ್‌ ಕಂಪೆನಿ ಜಾಗತಿಕ ಮಾರುಕಟ್ಟೆಯಲ್ಲಿ ಗ್ಯಾಲಕ್ಸಿ A14 4G ಸ್ಮಾರ್ಟ್‌ಫೋನ್‌ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್‌ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ವಿಶೇಷತೆ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A14 4G ಬಿಡುಗಡೆ! ಹೇಗಿದೆ ಕಾರ್ಯವೈಖರಿ? ಏನಿದರ ವಿಶೇಷ?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A14 4G ಡಿಸ್‌ಪ್ಲೇ ರಚನೆ?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A14 4G ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ ಹೆಚ್‌ಡಿ IPS LCD ಡಿಸ್‌ಪ್ಲೇಯನ್ನು ಹೊಂದಿದೆ. ಇದು 1080 x 2408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಇದಲ್ಲದೆ ಡಿಸ್‌ಪ್ಲೇ 90Hz ರಿಫ್ರೆಶ್‌ ರೇಟ್‌ ಅನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A14 4G ಪ್ರೊಸೆಸರ್‌ ಹೇಗಿದೆ?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A14 4G ಸ್ಮಾರ್ಟ್‌ಫೋನ್‌ 2.0GHz ಆಕ್ಟಾ-ಕೋರ್ ಚಿಪ್‌ಸೆಟ್‌ನಲ್ಲಿ ಕಾರ್ಯನಿರ್ವಹಿಸಲಿದೆ ಎಂದು ಹೇಳಲಾಗಿದೆ. ಆದರೆ ಕೆಲವು ವರದಿಗಳು ಈ ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ G80 ಚಿಪ್‌ಸೆಸ್‌ ಒಳಗೊಂಡಿದೆ ಎಂದು ಬಹಿರಂಗಪಡಿಸಿವೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶ ಕೂಡ ನೀಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A14 4G ಬಿಡುಗಡೆ! ಹೇಗಿದೆ ಕಾರ್ಯವೈಖರಿ? ಏನಿದರ ವಿಶೇಷ?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A14 4G ಕ್ಯಾಮೆರಾ ಸೆಟ್‌ಅಪ್‌ ಏನು?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A14 4G ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಅನ್ನು ಒಳಗೊಂಡಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A14 4G ಬ್ಯಾಟರಿ ಬ್ಯಾಕ್‌ಅಪ್‌ ಎಷ್ಟು?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A14 4G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 15W ಚಾರ್ಜಿಂಗ್ ಅನ್ನು ಬೆಂಬಲಿಸಲಿದ್ದು, ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌ ಅನ್ನು ಬೆಂಬಲಿಸಲಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A14 4G ಬಿಡುಗಡೆ! ಹೇಗಿದೆ ಕಾರ್ಯವೈಖರಿ? ಏನಿದರ ವಿಶೇಷ?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A14 4G ಬೆಲೆ ಮತ್ತು ಲಭ್ಯತೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A14 4G ಸ್ಮಾರ್ಟ್‌ಫೋನ್‌ ಬೆಲೆ ಇನ್ನು ಕೂಡ ಅಧಿಕೃತವಾಗಿ ಬಹಿರಂಗವಾಗಿಲ್ಲ. ಇನ್ನು ಈ ಸ್ಮಾರ್ಟ್‌ಫೋನ್‌ ಕಪ್ಪು, ಬೆಳ್ಳಿ, ಹಸಿರು ಮತ್ತು ಗಾಢ ಕೆಂಪು ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ ಎಂದು ಹೇಳಲಾಗಿದೆ. ಇದು ಭಾರತದಲ್ಲಿ ಲಭ್ಯವಾಗುವುದರ ಬಗ್ಗೆ ಮಾಹಿತಿಯಿಲ್ಲ.

ಇದಲ್ಲದೆ ಸ್ಯಾಮ್‌ಸಂಗ್‌ ಕಂಪೆನಿ ಇತ್ತೀಚಿಗೆ ಭಾರತದಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಅಲ್ಟ್ರಾ ಸ್ಮಾರ್ಟ್‌ಫೋನ್‌ 6.8 ಇಂಚಿನ ಎಡ್ಜ್ QHD+ ಡೈನಾಮಿಕ್ ಅಮೋಲೆಡ್‌ 2X ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ ಡೈನಾಮಿಕ್ ರಿಫ್ರೆಶ್ ರೇಟ್ 1-120Hz ಬೆಂಬಲಿಸಲಿದೆ. ಅಲ್ಲದೆ ಗೇಮ್ ಮೋಡ್‌ನಲ್ಲಿ 240Hz ಟಚ್ ಸ್ಯಾಂಪ್ಲಿಂಗ್ ರೇಟಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ 2 ಪ್ರೊಟೆಕ್ಷನ್‌ ಹಾಗೂ ವಿಷನ್ ಬೂಸ್ಟರ್ ಅನ್ನು ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 Gen 2 SoC ನ ಕಸ್ಟಮ್ ಆವೃತ್ತಿಯನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 13 One UI 5.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 1TB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ.

Best Mobiles in India

English summary
The Galaxy A14 4G has a 6.6-inch IPS LCD display that produces a Full HD+ resolution of 1080 x 2408 pixels and a 20:9 aspect ratio.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+