ಸ್ಯಾಮ್‌ಸಂಗ್‌ನಿಂದ ಮತ್ತೆ ಎರಡು 5G ಫೋನ್ ಲಾಂಚ್‌!..ಅಚ್ಚರಿಯ ಬೆಲೆ!

|

ಜನಪ್ರಿಯ ಸ್ಯಾಮ್‌ಸಂಗ್‌ ಕಂಪೆನಿ ಇತ್ತೀಚಿಗೆ A ಸರಣಿಯಲ್ಲಿ ಯುರೋಪ್‌ನಲ್ಲಿ ಅನಾವರಣ ಮಾಡಿದ್ದ 'ಗ್ಯಾಲಕ್ಸಿ A14 5G' ಸ್ಮಾರ್ಟ್‌ಫೋನ್‌ ಅನ್ನು ಇದೀಗ ಭಾರತದಲ್ಲಿ ಲಾಂಚ್ ಮಾಡಿದೆ. ಇದರೊಂದಿಗೆ ಸಂಸ್ಥೆಯು ನೂತನವಾಗಿ ಗ್ಯಾಲಕ್ಸಿ A23 5G ಸ್ಮಾರ್ಟ್‌ಫೋನ್‌ ಅನ್ನು ಸಹ ದೇಶಿಯ ಮಾರುಕಟ್ಟೆಯಲ್ಲಿ ಪರಿಚಯಿಸಿದೆ. ಈ ಎರಡು ಫೋನ್‌ಗಳು 5G ಸಪೋರ್ಟ್‌ ಪಡೆದಿದ್ದು, ಗ್ರಾಹಕರಿಗೆ ಕೈಗೆಟಕುವ ಬೆಲೆಯನ್ನು ಪಡೆದಿವೆ.

ಸ್ಯಾಮ್‌ಸಂಗ್‌ನಿಂದ ಮತ್ತೆ ಎರಡು 5G ಫೋನ್ ಲಾಂಚ್‌!..ಅಚ್ಚರಿಯ ಬೆಲೆ!

ಹೌದು, ಸ್ಯಾಮ್‌ಸಂಗ್‌ ಸಂಸ್ಥೆಯು ಭಾರತದಲ್ಲಿ ಇದೀಗ ನೂತನವಾಗಿ 'ಗ್ಯಾಲಕ್ಸಿ A14 5G' ಮತ್ತು 'ಗ್ಯಾಲಕ್ಸಿ A23 5G' ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿದೆ. ಈ ಎರಡು ಫೋನ್‌ಗಳು 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದ್ದು, ಭಿನ್ನ ಕ್ಯಾಮೆರಾ ರಚನೆಯನ್ನು ಪಡೆದಿವೆ. ಹಾಗಾದರೆ 'ಗ್ಯಾಲಕ್ಸಿ A14 5G' ಮತ್ತು 'ಗ್ಯಾಲಕ್ಸಿ A23 5G' ಫೋನ್‌ಗಳ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A14 5G ಫೀಚರ್ಸ್‌
ಸ್ಯಾಮ್‌ಸಂಗ್‌ ಗ್ಯಾಲಕ್ಸಿ A14 5G ಸ್ಮಾರ್ಟ್‌ಫೋನ್‌ 720 x 1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. 20:9 ರಚನೆಯ ಅನುಪಾತವನ್ನು ಹೊಂದಿದೆ. ಹಾಗೆಯೇ ಇದು ಆಕ್ಟಾ ಕೋರ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 13 ಓಎಸ್‌ ನಲ್ಲಿ ಕಾರ್ಯನಿರ್ವಹಿಸುತ್ತದೆ. ಜೊತೆಗೆ 6 GB RAM + 128 GB ಆಯ್ಕೆ ಪಡೆದಿದ್ದು, ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿಯನ್ನು 1TB ವರೆಗೂ ವಿಸ್ತರಿಸಬಹುದಾದ ಆಯ್ಕೆ ನೀಡಿದೆ.

ಸ್ಯಾಮ್‌ಸಂಗ್‌ನಿಂದ ಮತ್ತೆ ಎರಡು 5G ಫೋನ್ ಲಾಂಚ್‌!..ಅಚ್ಚರಿಯ ಬೆಲೆ!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A14 5G ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ ಈ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 15W ಫಾಸ್ಟ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಯಲ್ಲಿ 4G LTE, ವೈ-ಫೈ, ಬ್ಲೂಟೂತ್, USB ಟೈಪ್-ಸಿ, ಮತ್ತು 3.5mm ಹೆಡ್‌ಫೋನ್‌ ಜ್ಯಾಕ್ ಅನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A23 ಸ್ಮಾರ್ಟ್‌ಫೋನ್‌ ಫೀಚರ್ಸ್‌
ನೂತನ ಗ್ಯಾಲಕ್ಸಿ A23 ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದ್ದು, ಇನ್ನು ಡಿಸ್‌ಪ್ಲೇ 1080 x 2408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಹಾಗೆಯೇ 120Hz ರಿಫ್ರೆಶ್‌ ರೇಟ್‌ ಪಡೆದಿದ್ದು, ವಾಟರ್‌ಡ್ರಾಪ್‌ ನಾಚ್‌ ರಚನೆ ಪಡೆದಿದೆ. ಈ ಫೋನ್‌ ಕ್ವಾಡ್‌ ಕ್ಯಾಮೆರಾ ರಚನೆಯನ್ನು ಒಳಗೊಂಡೊಂದಿದ್ದು, ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸಲ್‌ ಸೆನ್ಸಾರ್‌ನಲ್ಲಿದೆ. ಹಾಗೆಯೇ ಈ ಫೋನ್ ಸ್ನ್ಯಾಪ್‌ಡ್ರಾಗನ್‌ 695 ಪ್ರೊಸೆಸರ್‌ ಪವರ್‌ ಅನ್ನು ಪಡೆದಿದ್ದು, 5000mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದೆ. ಇದಕ್ಕೆ ಪೂರಕವಾಗಿ 25W ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್‌ನಿಂದ ಮತ್ತೆ ಎರಡು 5G ಫೋನ್ ಲಾಂಚ್‌!..ಅಚ್ಚರಿಯ ಬೆಲೆ!

ಬೆಲೆ ಮತ್ತು ಲಭ್ಯತೆ
ಸ್ಯಾಮ್‌ಸಂಗ್‌ ಗ್ಯಾಲಕ್ಸಿ A14 5G ಫೋನ್‌ 4GB RAM + 64GB ವೇರಿಯಂಟ್‌ ಬೆಲೆಯು 16,499ರೂ. ಆಗಿದೆ. ಅದೇ ರೀತಿ 6GB + 128GB ವೇರಿಯಂಟ್‌ ಬೆಲೆಯು 18,999ರೂ. ಆಗಿದೆ. 8GB + 128GB ವೇರಿಯಂಟ್‌ ದರವು 20,999ರೂ. ಆಗಿದೆ. ಇನ್ನು ಸ್ಯಾಮ್‌ಸಂಗ್‌ ಗ್ಯಾಲಕ್ಸಿ A23 ಫೋನ್‌ 6GB RAM +128GB ಬೆಲೆಯು 22,999ರೂ. ಆಗಿದೆ. ಅದೇ ರೀತಿ 8GB + 128GB ಬೆಲೆಯು 24,999ರೂ. ಆಗಿದೆ.

Best Mobiles in India

English summary
Samsung Galaxy A14 5G, A23 5G Launched; These both mid-range 5G smartphones.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X