ಇಂದಿನಿಂದ ಸ್ಯಾಮ್‌ಸಂಗ್‌ನ ಈ ಎರಡು 5G ಫೋನ್‌ಗಳು ಖರೀದಿಗೆ ಲಭ್ಯ!.ಆಫರ್‌ ಇದೆ!

|

ಸ್ಯಾಮ್‌ಸಂಗ್ ಸಂಸ್ಥೆಯು ಇತ್ತೀಚಿಗೆ ಭಾರತದಲ್ಲಿ ಬಿಡುಗಡೆ ಮಾಡಿರುವ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A14 5G ಮತ್ತು ಗ್ಯಾಲಕ್ಸಿ A23 5G ಸ್ಮಾರ್ಟ್‌ಫೋನ್‌ಗಳ 5G ವಲಯದಲ್ಲಿ ಗಮನ ಸೆಳೆದಿವೆ. ಇನ್ನು ಈ ಎರಡು ಫೋನ್‌ಗಳು ಇಂದಿನಿಂದ (ಜ. 19) ಮಾರಾಟ ಆರಂಭಿಸಲಿವೆ. ಅಂದಹಾಗೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A14 5G ಆರಂಭಿಕ ವೇರಿಯಂಟ್‌ ಬೆಲೆ 16,499ರೂ. ಆಗಿದೆ. ಹಾಗೆಯೇ ಗ್ಯಾಲಕ್ಸಿ A23 5G ಸ್ಮಾರ್ಟ್‌ಫೋನ್‌ ಬೇಸಿಕ್‌ ವೇರಿಯಂಟ್‌ ದರವು 22,999ರೂ. ಆಗಿದೆ.

ಅಧಿಕೃತ ಸ್ಯಾಮ್‌ಸಂಗ್‌

ಹೌದು, ಸ್ಯಾಮ್‌ಸಂಗ್‌ ಗ್ಯಾಲಕ್ಸಿ A14 5G ಮತ್ತು ಗ್ಯಾಲಕ್ಸಿ A23 5G ಸ್ಮಾರ್ಟ್‌ಫೋನ್‌ ಇಂದಿನಿಂದ ಖರೀದಿಗೆ ಲಭ್ಯವಾಗಲಿವೆ. ಅಧಿಕೃತ ಸ್ಯಾಮ್‌ಸಂಗ್‌ ವೆಬ್‌ಸೈಟ್‌ ಹಾಗೂ ಪ್ರಮುಖ ರಿಟೇಲ್‌ ಸ್ಟೋರ್‌ಗಳಲ್ಲಿ ಗ್ರಾಹಕರು ಖರೀದಿಸಬಹುದಾಗಿದೆ. ಎಸ್‌ಬಿಐ, ಐಡಿಎಫ್‌ಸಿ ಬ್ಯಾಂಕ್‌ ಕಾರ್ಡ್‌ಗಳ ಮೂಲಕ ಖರೀದಿಸಿದರೆ, 2,000ರೂ. ವರೆಗೆ ಕ್ಯಾಶ್‌ಬ್ಯಾಕ್‌ ಸಿಗಲಿದೆ. ಹಾಗಾದರೇ ಗ್ಯಾಲಕ್ಸಿ A14 5G ಮತ್ತು ಗ್ಯಾಲಕ್ಸಿ A23 5G ಫೋನ್‌ಗಳ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಗ್ಯಾಲಕ್ಸಿ A14 5G : ಡಿಸ್‌ಪ್ಲೇ ವಿನ್ಯಾಸ

ಗ್ಯಾಲಕ್ಸಿ A14 5G : ಡಿಸ್‌ಪ್ಲೇ ವಿನ್ಯಾಸ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A14 5G ಸ್ಮಾರ್ಟ್‌ಫೋನ್‌ 720 x 1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. 20:9 ರಚನೆಯ ಅನುಪಾತವನ್ನು ಹೊಂದಿದೆ.

ಗ್ಯಾಲಕ್ಸಿ A14 5G : ಪ್ರೊಸೆಸರ್‌ ಕಾರ್ಯವೈಖರಿ

ಗ್ಯಾಲಕ್ಸಿ A14 5G : ಪ್ರೊಸೆಸರ್‌ ಕಾರ್ಯವೈಖರಿ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A14 5G ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 13 ಓಎಸ್‌ ನಲ್ಲಿ ಕಾರ್ಯನಿರ್ವಹಿಸುತ್ತದೆ. ಜೊತೆಗೆ 6 GB RAM + 128 GB ಆಯ್ಕೆ ಪಡೆದಿದ್ದು, ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿಯನ್ನು 1TB ವರೆಗೂ ವಿಸ್ತರಿಸಬಹುದಾದ ಆಯ್ಕೆ ನೀಡಿದೆ.

ಗ್ಯಾಲಕ್ಸಿ A14 5G : ಕ್ಯಾಮೆರಾ ಸೆನ್ಸಾರ್

ಗ್ಯಾಲಕ್ಸಿ A14 5G : ಕ್ಯಾಮೆರಾ ಸೆನ್ಸಾರ್

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A14 5G ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಗ್ಯಾಲಕ್ಸಿ A14 5G : ಬ್ಯಾಟರಿ

ಗ್ಯಾಲಕ್ಸಿ A14 5G : ಬ್ಯಾಟರಿ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A14 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 15W ಫಾಸ್ಟ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಯಲ್ಲಿ 4G LTE, ವೈ-ಫೈ, ಬ್ಲೂಟೂತ್, USB ಟೈಪ್-ಸಿ, ಮತ್ತು 3.5mm ಹೆಡ್‌ಫೋನ್‌ ಜ್ಯಾಕ್ ಅನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A23 ಸ್ಮಾರ್ಟ್‌ಫೋನ್‌ ಫೀಚರ್ಸ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A23 ಸ್ಮಾರ್ಟ್‌ಫೋನ್‌ ಫೀಚರ್ಸ್‌

ಗ್ಯಾಲಕ್ಸಿ A23 5g ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದ್ದು, ಇನ್ನು ಡಿಸ್‌ಪ್ಲೇ 1080 x 2408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಹಾಗೆಯೇ 120Hz ರಿಫ್ರೆಶ್‌ ರೇಟ್‌ ಪಡೆದಿದ್ದು, ವಾಟರ್‌ಡ್ರಾಪ್‌ ನಾಚ್‌ ರಚನೆ ಪಡೆದಿದೆ. ಈ ಫೋನ್‌ ಕ್ವಾಡ್‌ ಕ್ಯಾಮೆರಾ ರಚನೆಯನ್ನು ಒಳಗೊಂಡೊಂದಿದ್ದು, ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸಲ್‌ ಸೆನ್ಸಾರ್‌ನಲ್ಲಿದೆ. ಹಾಗೆಯೇ ಈ ಫೋನ್ ಸ್ನ್ಯಾಪ್‌ಡ್ರಾಗನ್‌ 695 ಪ್ರೊಸೆಸರ್‌ ಪವರ್‌ ಅನ್ನು ಪಡೆದಿದ್ದು, 5000mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದೆ. ಇದಕ್ಕೆ ಪೂರಕವಾಗಿ 25W ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿದೆ.

Best Mobiles in India

English summary
Samsung Galaxy A14 5G, Galaxy A23 5G can be purchased via Samsung.com and other online channels. The devices are set to go on sale today at 6 PM. Know more details in kannada.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X