ಈ ಜನಪ್ರಿಯ 5G ಸ್ಮಾರ್ಟ್‌ಫೋನ್ ಈಗ ಮತ್ತಷ್ಟು ಡಿಸ್ಕೌಂಟ್ ಬೆಲೆಯಲ್ಲಿ ಲಭ್ಯ!
ಜನಪ್ರಿಯ ಇ ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್ ಆಕರ್ಷಕ ಡಿಸ್ಕೌಂಟ್ ಮೂಲಕ ಗ್ರಾಹಕರನ್ನು ಸೆಳೆದಿದೆ. ಅದರಲ್ಲಿಯೂ ಮುಖ್ಯವಾಗಿ ಸ್ಮಾರ್ಟ್‌ಫೋನ್ ಒಂದಿಲ್ಲೊಂದು ಬೊಂಬಾಟ್ ಡಿಸ್ಕೌಂಟ್ ನೀಡಿ ಗಮನ ಸೆಳೆಯುತ್ತದೆ. ಹೀಗೆ ಇದೀಗ ಫ್ಲಿಪ್‌ಕಾರ್ಟ್ ತಾಣದಲ್ಲಿ ಸ್ಯಾಮ್‌ಸಂಗ್ ಸಂಸ್ಥೆಯ ಸ್ಯಾಮ್‌ಸಂಗ್ ಗ್ಯಾಲಕ್ಸಿ A14 5G ( Samsung Galaxy A14 5G ) ಮೊಬೈಲ್ ಸಖತ್ ರಿಯಾಯಿತಿ ಪಡೆದಿದ್ದು, ಬಜೆಟ್ ದರದಲ್ಲಿ ಹೊಸ 5G ಫೋನ್ ಖರೀದಿಸುವವರ ಗ್ರಾಹಕರು ವಾವ್ ಎನ್ನುವಂತೆ ಮಾಡಿದೆ.
ಹೌದು, ದೈತ್ಯ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A14 5G ( Samsung Galaxy A14 5G ) ಮೊಬೈಲ್ ಶೇ. 32% ರಷ್ಟು ನೇರ ಡಿಸ್ಕೌಂಟ್ ಪಡೆದಿದೆ. ಈ ಫೋನಿನ 4 GB RAM + 128 GB ಸ್ಟೋರೇಜ್ ವೇರಿಯಂಟ್ ಅನ್ನು ಖರೀದಿದಾರರು 10,499 ರೂ. ಗಳ ಆಫರ್ ಬೆಲೆಯಲ್ಲಿ ಖರೀದಿ ಮಾಡಬಹುದು. ಅಲ್ಲದೇ ಹೆಚ್ಚುವರಿಯಾಗಿ ಆಯ್ದ ಬ್ಯಾಂಕ್‌ಗಳ ಆಫರ್ ಪಡೆದುಕೊಂಡರೆ, ಇನ್ನಷ್ಟು ರಿಯಾಯಿತಿ ಲಭ್ಯ.

ಹಾಗೆಯೇ ಇದು 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದಿದೆ. ಇದರೊಂದಿಗೆ ಗ್ಯಾಲಕ್ಸಿ A14 5G ಫೋನ್ 4GB RAM ಮತ್ತು 64 GB ಹಾಗೂ 6 GB RAM ಮತ್ತು 128 GB ಸ್ಟೋರೇಜ್ ಆಯ್ಕೆಗಳನ್ನು ಇದು ಒಳಗೊಂಡಿದೆ. ಇನ್ನುಳಿದಂತೆ ಸ್ಯಾಮ್‌ಸಂಗ್ ಗ್ಯಾಲಕ್ಸಿ A14 5G (Samsung Galaxy A14 5G) ಮೊಬೈಲ್‌ನ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಪಡೆದುಕೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A14 5G - ಫೀಚರ್ಸ್ ಮಾಹಿತಿ
ಸ್ಯಾಮ್‌ಸಂಗ್ ಗ್ಯಾಲಕ್ಸಿ A14 5G ಮೊಬೈಲ್ 720 x 1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.6 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಹೊಂದಿದೆ. ಅಲ್ಲದೇ ಇದು 20:9 ರಚನೆಯ ಅನುಪಾತವನ್ನು ಹೊಂದಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A14 5G ಮೊಬೈಲ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 13 ಓಎಸ್ ನಲ್ಲಿ ಕಾರ್ಯ ನಿರ್ವಹಿಸುತ್ತದೆ. ಜೊತೆಗೆ 6 GB RAM + 128 GB ಆಯ್ಕೆ ಪಡೆದಿದ್ದು, ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿಯನ್ನು 1 TB ವರೆಗೂ ವಿಸ್ತರಿಸಬಹುದಾದ ಆಯ್ಕೆ ನೀಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A14 5G ಮೊಬೈಲ್ ಕ್ವಾಡ್ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಹಾಗೂ ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A14 5G ಮೊಬೈಲ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದ್ದು, ಇದಕ್ಕೆ ಅನುಗುಣವಾಗಿ 15W ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಯಲ್ಲಿ 4G LTE, ವೈ ಫೈ, ಬ್ಲೂಟೂತ್, USB ಟೈಪ್ ಸಿ, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ.


Click it and Unblock the Notifications








