Samsung ಈ 5000mAh ಬ್ಯಾಟರಿ ಫೋನ್ ಬೆಲೆಯಲ್ಲಿ ಶೇ.47 ನೇರ ಡಿಸ್ಕೌಂಟ್!
ದಿಗ್ಗಜ ಇ ಕಾಮರ್ಸ್ ತಾಣ ಎನಿಸಿರುವ ಫ್ಲಿಪ್‌ಕಾರ್ಟ್‌ನಲ್ಲಿ ಸದ್ಯ ಬಿಗ್ ಬಿಲಿಯನ್ ಡೇಸ್ 2024 (Flipkart Big Billion Days Sale 2024) ಸೇಲ್ ಚಾಲ್ತಿ ಇದ್ದು, ಮೊಬೈಲ್‌ಗಳು ಬೊಂಬಾಟ್ ಡಿಸ್ಕೌಂಟ್ ಬೆಲೆಯಲ್ಲಿ ಖರೀದಿಗೆ ಲಭ್ಯ ಇವೆ. ಇನ್ನು ಮೊಬೈಲ್ ಖರೀದಿಸುವ ಗ್ರಾಹಕರು ಲಭ್ಯ ಇರುವ ಬ್ಯಾಂಕ್ ಆಫರ್‌ಗಳನ್ನು ಪಡೆದುಕೊಂಡರೆ, ಮತ್ತಷ್ಟು ರಿಯಾಯಿತಿ ಪಡೆಯಬಹುದು. ಇದೀಗ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A14 5G (Samsung Galaxy A14 5G) ಮೊಬೈಲ್ ಗ್ರಾಹಕರು ಆಫರ್ ದರದಲ್ಲಿ ಖರೀದಿ ಮಾಡಬಹುದು.
ಹೌದು, ದೈತ್ಯ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A14 5G (Samsung Galaxy A14 5G) ಮೊಬೈಲ್ ಶೇ. 47% ರಷ್ಟು ನೇರ ಡಿಸ್ಕೌಂಟ್ ಪಡೆದಿದೆ. ಈ ಫೋನಿನ 6 GB RAM + 128 GB ಸ್ಟೋರೇಜ್ ವೇರಿಯಂಟ್ ಅನ್ನು ಖರೀದಿದಾರರು 10,999ರೂ. ಗಳ ಕೊಡುಗೆಯ ಬೆಲೆಯಲ್ಲಿ ಖರೀದಿ ಮಾಡಬಹುದು. ಅಲ್ಲದೇ ಹೆಚ್ಚುವರಿಯಾಗಿ ಆಯ್ದ ಬ್ಯಾಂಕ್‌ಗಳ ಆಫರ್ ಪಡೆದುಕೊಂಡರೆ, 8,999ರೂ. ಗಳಿಗೆ ಕೂಡಾ ಲಭ್ಯವಾಗಲಿವೆ.

ಇನ್ನು ಸ್ಯಾಮ್‌ಸಂಗ್ ಗ್ಯಾಲಕ್ಸಿ A14 5G ಮೊಬೈಲ್ 4GB RAM ಮತ್ತು 64GB ಹಾಗೂ 6GB RAM ಮತ್ತು 128GB ಸ್ಟೋರೇಜ್ ಆಯ್ಕೆಗಳನ್ನು ಇದು ಒಳಗೊಂಡಿದೆ. ಹಾಗೆಯೇ ಇದು 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದಿದೆ. ಇನ್ನುಳಿದಂತೆ ಸ್ಯಾಮ್‌ಸಂಗ್ ಗ್ಯಾಲಕ್ಸಿ A14 5G (Samsung Galaxy A14 5G) ಮೊಬೈಲ್‌ನ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಪಡೆದುಕೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A14 5G - ಫೀಚರ್ಸ್ ಮಾಹಿತಿ
ಸ್ಯಾಮ್‌ಸಂಗ್ ಗ್ಯಾಲಕ್ಸಿ A14 5G ಸ್ಮಾರ್ಟ್‌ಫೋನ್ 720 x 1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.6 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಹೊಂದಿದೆ. ಅಲ್ಲದೇ ಇದು 20:9 ರಚನೆಯ ಅನುಪಾತವನ್ನು ಹೊಂದಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A14 5G ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 13 ಓಎಸ್ ನಲ್ಲಿ ಕಾರ್ಯ ನಿರ್ವಹಿಸುತ್ತದೆ. ಜೊತೆಗೆ 6 GB RAM + 128 GB ಆಯ್ಕೆ ಪಡೆದಿದ್ದು, ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿಯನ್ನು 1TB ವರೆಗೂ ವಿಸ್ತರಿಸಬಹುದಾದ ಆಯ್ಕೆ ನೀಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A14 5G ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಹಾಗೂ ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A14 5G ಸ್ಮಾರ್ಟ್‌ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದ್ದು, ಇದಕ್ಕೆ ಅನುಗುಣವಾಗಿ 15W ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಯಲ್ಲಿ 4G LTE, ವೈ-ಫೈ, ಬ್ಲೂಟೂತ್, USB ಟೈಪ್-ಸಿ, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ.


Click it and Unblock the Notifications








