ಅಗ್ಗದ ಬೆಲೆಗೆ ಸ್ಯಾಮ್‌ಸಂಗ್ 5G ಫೋನ್ ಲಭ್ಯ!..ಕೂಡಲೇ ಈ ಆಫರ್ ಪಡೆಯಿರಿ!
ಆನ್‌ಲೈನ್ ಶಾಪಿಂಗ್ ತಾಣ ಫ್ಲಿಪ್‌ಕಾರ್ಟ್‌ನಲ್ಲಿ (Flipkart) ಸದ್ಯ ಬಿಗ್ ಬಚತ್ ಡೇಸ್ ಮಾರಾಟ ಲೈವ್ ಇದೆ. ಈ ಮಾರಟದಲ್ಲಿ ಕೆಲವು ಆಯ್ದ ಮಾಡೆಲ್‌ಗಳು ವಿಶೇಷ ಡಿಸ್ಕೌಂಟ್‌ನಲ್ಲಿ ಕಾಣಿಸಿಕೊಂಡಿದ್ದು, ಹೊಸ ಫೋನ್ ಖರೀದಿಸುವ ಗ್ರಾಹಕರು ಹುಬ್ಬೇರಿಸುವಂತೆ ಮಾಡಿದೆ. ಆ ಪೈಕಿ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಇದೀಗ ಸ್ಯಾಮ್‌ಸಂಗ್ ಗ್ಯಾಲಕ್ಸಿ A14 5G (Samsung Galaxy A14 5G) ಸ್ಮಾರ್ಟ್‌ಫೋನ್ ಸಖತ್ ಆಫರ್ ದರದಲ್ಲಿ ಖರೀದಿಗೆ ಲಭ್ಯ ಇದೆ.
ಹೌದು, ಫ್ಲಿಪ್‌ಕಾರ್ಟ್ ವೆಬ್‌ಸೈಟ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A14 5G (Samsung Galaxy A14 5G) ಸ್ಮಾರ್ಟ್‌ಫೋನ್ ಶೇ. 45% ರಷ್ಟು ನೇರ ರಿಯಾಯಿತಿ ಪಡೆದುಕೊಂಡಿದೆ. ಈ ಮೊಬೈಲ್‌ನ 6 GB RAM + 128 GB ಸ್ಟೋರೇಜ್ ವೇರಿಯಂಟ್ ಅನ್ನು ಖರೀದಿದಾರರು 11,499ರೂ. ಗಳ ರಿಯಾಯಿತಿ ಬೆಲೆಯಲ್ಲಿ ಖರೀದಿ ಮಾಡಬಹುದು. ಅಲ್ಲದೇ ಹೆಚ್ಚುವರಿಯಾಗಿ ಆಯ್ದ ಬ್ಯಾಂಕ್‌ಗಳ ಆಫರ್ ಪಡೆದುಕೊಂಡರೆ, ಇನ್ನಷ್ಟು ಡಿಸ್ಕೌಂಟ್ ಸಹ ಲಭ್ಯವಾಗಲಿವೆ.

ಅಂದಹಾಗೆ ಈ ಸ್ಮಾರ್ಟ್‌ಫೋನ್ ಇದು 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದಿದೆ. ಇದರೊಂದಿಗೆ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದೆ. ಹಾಗಾದರೇ ಸ್ಯಾಮ್‌ಸಂಗ್ ಗ್ಯಾಲಕ್ಸಿ A14 5G (Samsung Galaxy A14 5G) ಸ್ಮಾರ್ಟ್‌ಫೋನಿನ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಪಡೆದುಕೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.
ಡಿಸ್‌ಪ್ಲೇ ವಿನ್ಯಾಸ ಮಾಹಿತಿ
ಸ್ಯಾಮ್‌ಸಂಗ್ ಗ್ಯಾಲಕ್ಸಿ A14 5G ಸ್ಮಾರ್ಟ್‌ಫೋನ್ 720 x 1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.6 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಜೊತೆಗೆ ಇದು 20:9 ರಚನೆಯ ಅನುಪಾತವನ್ನು ಪಡೆದುಕೊಂಡಿದೆ.
ಪ್ರೊಸೆಸರ್ ಹಾಗೂ ಮೆಮೊರಿ
ಸ್ಯಾಮ್‌ಸಂಗ್ ಗ್ಯಾಲಕ್ಸಿ A14 5G ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 13 ಓಎಸ್ ನಲ್ಲಿ ಕೆಲಸ ನಿರ್ವಹಿಸುತ್ತದೆ. ಜೊತೆಗೆ 6 GB RAM + 128 GB ಆಯ್ಕೆ ಪಡೆದಿದ್ದು, ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿಯನ್ನು 1TB ವರೆಗೂ ವಿಸ್ತರಿಸಬಹುದಾದ ಆಯ್ಕೆ ನೀಡಿದೆ.
ಟ್ರಿಪಲ್ ಕ್ಯಾಮೆರಾ ಸ್ಪೇಷಲ್
ಸ್ಯಾಮ್‌ಸಂಗ್ ಗ್ಯಾಲಕ್ಸಿ A14 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮೊದಲ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಹಾಗೂ ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಹಾಗೆಯೇ 13 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ.
ದೀರ್ಘ ಬ್ಯಾಟರಿ ಬ್ಯಾಕ್‌ಅಪ್
ಸ್ಯಾಮ್‌ಸಂಗ್ ಗ್ಯಾಲಕ್ಸಿ A14 5G ಸ್ಮಾರ್ಟ್‌ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದ್ದು, ಇದಕ್ಕೆ ಅನುಗುಣವಾಗಿ 15W ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡಲಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 4G LTE, ವೈ-ಫೈ, ಬ್ಲೂಟೂತ್, USB ಟೈಪ್-ಸಿ, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ.


Click it and Unblock the Notifications








