Home
ಸುದ್ದಿಜಾಲ

ವರ್ಷಪೂರ್ತಿ ಸದ್ದು ಮಾಡಿದ್ದ ಸ್ಯಾಮ್‌ಸಂಗ್‌ನ ಈ ಫೋನ್‌ ಬೆಲೆ ಇಳಿಕೆ! ಮಿಸ್‌ ಮಾಡ್ಕೋಬೇಡಿ!

ಇಡೀ ವರ್ಷ ಸದ್ದು ಮಾಡಿದ ಸ್ಮಾರ್ಟ್‌ಫೋನ್‌ಗಳಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A14 5G ಕೂಡ ಒಂದಾಗಿದೆ. ಸ್ಯಾಮ್‌ಸಂಗ್‌ ಸಂಸ್ಥೆಯ ಈ ಸ್ಮಾರ್ಟ್‌ಫೋನ್‌ ಇದೇ ವರ್ಷ ಜನವರಿಯಲ್ಲಿ ಅನಾವರಣಗೊಂಡಿತ್ತು. ಇದೀಗ ವರ್ಷಾಂತ್ಯದ ಸಮಯದಲ್ಲಿ ಈ ಸ್ಮಾರ್ಟ್‌ಫೋನ್‌ ಬೆಲೆ ಭಾರಿ ಇಳಿಕೆಯನ್ನು ಕಂಡಿದೆ. ಈ ಮೂಲಕ ಮೊಬೈಲ್‌ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ.

ಹೌದು, ಸ್ಯಾಮ್‌ಸಂಗ್‌ ಗ್ಯಾಲಕ್ಸಿ A14 5G ಸ್ಮಾರ್ಟ್‌ಫೋನ್‌ ಭಾರತದಲ್ಲಿ ಬೆಲೆ ಕಡಿತವನ್ನು ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನಿನ ಮೂರು ಸ್ಟೋರೇಜ್‌ ವೇರಿಯೆಂಟ್‌ ಆಯ್ಕೆಗಳ ಮೇಲೂ ಕೂಡ ಬೆಲೆ ಕಡಿತವನ್ನು ಮಾಡಲಾಗಿದೆ. ಈ ಸ್ಮಾರ್ಟ್‌ಫೋನ್‌ ಎಕ್ಸಿನೋಸ್‌ 1330 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗಾದ್ರೆ ಗ್ಯಾಲಕ್ಸಿ A14 5G ಸ್ಮಾರ್ಟ್‌ಫೋನ್‌ ಬೆಲೆ ಕಡಿತದ ನಂತರದ ಬೆಲೆ ಎಷ್ಟು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ವರ್ಷಪೂರ್ತಿ ಸದ್ದು ಮಾಡಿದ್ದ ಸ್ಯಾಮ್‌ಸಂಗ್‌ನ ಈ ಫೋನ್‌ ಬೆಲೆ ಇಳಿಕೆ!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A14 5G ಬೆಲೆ ಕಡಿತದ ನಂತರದ ಬೆಲೆ ಎಷ್ಟು?
ಸ್ಯಾಮ್‌ಸಂಗ್‌ ಗ್ಯಾಲಕ್ಸಿ A14 5G ಸ್ಮಾರ್ಟ್‌ಫೋನಿನ ಮೂರು ಸ್ಟೋರೇಜ್‌ ವೇರಿಯೆಂಟ್‌ ಆಯ್ಕೆಗಳ ಮೇಲೆ 2,000ರೂ ಗಳಷ್ಟು ಬೆಲೆ ಕಡಿತವನ್ನು ಘೋಷಿಸಲಾಗಿದೆ. ಇದರಿಂದ ಬೇಸ್‌ ಮಾಡೆಲ್‌ 4GB + 64GB ಸ್ಟೋರೇಜ್‌ ಆಯ್ಕೆಯು 16,499ರೂ ಬದಲಿಗೆ 14,499ರೂ ಬೆಲೆಗೆ ಲಭ್ಯವಾಗಲಿದೆ. ಇನ್ನು 6GB + 128GB ಸ್ಟೋರೇಜ್‌ ಆಯ್ಕೆಯು 18,999ರೂ ಬದಲಿಗೆ 16,999ರೂ ಬೆಲೆಯಲ್ಲಿ ದೊರೆಯಲಿದೆ. ಇದರ ಟಾಪ್ ಮಾಡೆಲ್‌ 8GB + 128GB ಸ್ಟೋರೇಜ್‌ ಆಯ್ಕೆಯು 20,999ರೂ ಬದಲಿಗೆ 18,999ರೂ ಬೆಲೆಯಲ್ಲಿ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್‌ ಗಾಢ ಕೆಂಪು, ಕಪ್ಪು ಅಥವಾ ತಿಳಿ ಹಸಿರು ಬಣ್ಣದ ಆಯ್ಕೆಗಳಲ್ಲಿ ಪಡೆಯಬಹುದು.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A14 5G ಫೀಚರ್ಸ್ ಹೇಗಿದೆ?
ಸ್ಯಾಮ್‌ಸಂಗ್‌ ಗ್ಯಾಲಕ್ಸಿ A14 5G ಸ್ಮಾರ್ಟ್‌ಫೋನ್‌ 6.6 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 2408 x 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಜೊತೆಗೆ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಇದು 90Hz ರಿಫ್ರೆಶ್ ರೇಟ್ ಮತ್ತು ಡ್ಯೂಡ್ರಾಪ್ ನಾಚ್ ಅನ್ನು ಹೊಂದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A14 5G ಪ್ರೊಸೆಸರ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A14 5G ಸ್ಮಾರ್ಟ್‌ಫೋನ್‌ ಎಕ್ಸಿನೋಸ್‌ 1330 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್‌ 14 ಆಧಾರಿತ One UI 6.0 ಸಾಫ್ಟ್‌ವೇರ್ ಅನ್ನು ಬೂಟ್ ಮಾಡುತ್ತದೆ. ಹಾಗೆಯೇ 4GB + 64GB 6GB + 128GB 8GB + 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆಗಳಲ್ಲಿ ಬರಲಿದೆ. ಇದಲ್ಲದೆ ಮೆಮೊರಿ ಕಾರ್ಡ್‌ನ ಮೂಲಕ 1TB ವರೆಗೂ ಸಂಗ್ರಹ ಸಾಮರ್ಥ್ಯದವರೆಗೂ ವಿಸ್ತರಿಸಬಹುದಾಗಿದೆ.

ವರ್ಷಪೂರ್ತಿ ಸದ್ದು ಮಾಡಿದ್ದ ಸ್ಯಾಮ್‌ಸಂಗ್‌ನ ಈ ಫೋನ್‌ ಬೆಲೆ ಇಳಿಕೆ!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A14 5G ಕ್ಯಾಮೆರಾ ಸೆಟಪ್‌ ಏನಿದೆ?
ಸ್ಯಾಮ್‌ಸಂಗ್‌ ಗ್ಯಾಲಕ್ಸಿ A14 5G ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A14 5G ಬ್ಯಾಟರಿ ಮತ್ತು ಇತರೆ
ಸ್ಯಾಮ್‌ಸಂಗ್‌ ಗ್ಯಾಲಕ್ಸಿ A14 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 15W ಫಾಸ್ಟ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಯಲ್ಲಿ 4G LTE, ವೈ-ಫೈ, ಬ್ಲೂಟೂತ್, USB ಟೈಪ್-ಸಿ, ಮತ್ತು 3.5mm ಹೆಡ್‌ಫೋನ್‌ ಜ್ಯಾಕ್ ಅನ್ನು ಒಳಗೊಂಡಿದೆ. ಇದು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸರ್‌ನೊಂದಿಗೆ ಬರುತ್ತದೆ.

Best Mobiles in India

English summary
Samsung Galaxy A14 5G Smartphone receives Massive price cut in India: Details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+