ಎಂಟ್ರಿ ಕೊಟ್ಟಿದೆ ಸ್ಯಾಮ್‌ಸಂಗ್ ಗ್ಯಾಲಕ್ಸಿ A14 5G!..ಇದು ಬಜೆಟ್‌ ಬೆಲೆಯ 5G ಫೋನ್!

|

ಟೆಕ್‌ ದೈತ್ಯ ಸ್ಯಾಮ್‌ಸಂಗ್‌ ಕಂಪೆನಿ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ A ಸರಣಿಯಲ್ಲಿ ಹಲವು ಸ್ಮಾರ್ಟ್‌ಫೋನ್‌ ಪರಿಚಯಿಸಿರುವ ಸ್ಯಾಮ್‌ಸಂಗ್‌ ಇದೀಗ ಹೊಸ ಗ್ಯಾಲಕ್ಸಿ A14 5G ಅನ್ನು ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ನಲ್ಲಿ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್‌ 13 ಓಎಸ್ ಸಪೋರ್ಟ್‌ ಪಡೆದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ಯುರೋಪ್‌ನಲ್ಲಿ

ಹೌದು, ಸ್ಯಾಮ್‌ಸಂಗ್‌ ಕಂಪೆನಿ ನೂತನವಾಗಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A14 5G ಸ್ಮಾರ್ಟ್‌ಫೋನ್‌ ಅನ್ನು ಯುರೋಪ್‌ನಲ್ಲಿ ಲಾಂಚ್‌ ಮಾಡಿದೆ. ಈ ಫೋನ್ ತ್ರಿವಳಿ ಕ್ಯಾಮೆರಾ ಹೊಂದಿದ್ದು, ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸಲ್‌ ಸೆನ್ಸಾರ್‌ನಲ್ಲಿದೆ. ಹಾಗೆಯೇ ಈ ಫೋನ್ 4GB RAM + 64GB ಮತ್ತು 6GB + 128GB ಆಯ್ಕೆ ಪಡೆದಿದ್ದು, ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿಯನ್ನು 1TB ವರೆಗೂ ವಿಸ್ತರಿಸಬಹುದಾದ ಆಯ್ಕೆ ನೀಡಿದೆ. ಇನ್ನುಳಿದಂತೆ ಈ ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ವಿನ್ಯಾಸ ಮತ್ತು ರಚನೆ

ಡಿಸ್‌ಪ್ಲೇ ವಿನ್ಯಾಸ ಮತ್ತು ರಚನೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A14 5G ಸ್ಮಾರ್ಟ್‌ಫೋನ್‌ 720 x 1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. 20:9 ರಚನೆಯ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್‌ ಕಾರ್ಯವೈಖರಿ

ಪ್ರೊಸೆಸರ್‌ ಕಾರ್ಯವೈಖರಿ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A14 5G ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 13 ಓಎಸ್‌ ನಲ್ಲಿ ಕಾರ್ಯನಿರ್ವಹಿಸುತ್ತದೆ. ಜೊತೆಗೆ 6 GB RAM + 128 GB ಆಯ್ಕೆ ಪಡೆದಿದ್ದು, ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿಯನ್ನು 1TB ವರೆಗೂ ವಿಸ್ತರಿಸಬಹುದಾದ ಆಯ್ಕೆ ನೀಡಿದೆ.

ಕ್ಯಾಮೆರಾ ಸೆನ್ಸಾರ್ ಯಾವುದು

ಕ್ಯಾಮೆರಾ ಸೆನ್ಸಾರ್ ಯಾವುದು

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A14 5G ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A14 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 15W ಫಾಸ್ಟ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಯಲ್ಲಿ 4G LTE, ವೈ-ಫೈ, ಬ್ಲೂಟೂತ್, USB ಟೈಪ್-ಸಿ, ಮತ್ತು 3.5mm ಹೆಡ್‌ಫೋನ್‌ ಜ್ಯಾಕ್ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ A14 5G ಸ್ಮಾರ್ಟ್‌ಫೋನ್‌ ಭಾರತದಲ್ಲಿ 4GB RAM + 64GB ಮತ್ತು 6GB + 128GB ಇಂಟರ್‌ ಸ್ಟೋರೇಜ್ ರೂಪಾಂತರಕ್ಕೆ 12,999 ರೂ. ಹಾಗೂ 4GB RAM + 128GB ಸ್ಟೋರೇಜ್ ಬೆಲೆ ಯುರೋಪ್‌ನಲ್ಲಿ $200 (ಭಾರತದಲ್ಲಿ ಅಂದಾಜು 16,500ರೂ) ಆಗಿದೆ. ಹಾಗೆಯೇ 6GB + 128GB ವೇರಿಯಂಟ್‌ ದರವು EUR 229 (ಭಾರತದಲ್ಲಿ ಅಂದಾಜು 20,100) ಆಗಿದೆ. ಇನ್ನು ಈ ಫೋನ್ ಬ್ಲ್ಯಾಕ್, ಸಿಲ್ವರ್, ಡಾರ್ಕ್ ರೆಡ್ ಹಾಗೂ ಲೈಟ್‌ ಗ್ರೀನ್‌ ಬಣ್ಣಗಳ ಆಯ್ಕೆ ಪಡೆದಿದೆ.

Best Mobiles in India

English summary
Samsung Galaxy A14 5G with MediaTek Dimensity 700 SoC Launched: Price, Specifications.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X