ಸ್ಯಾಮ್‌ಸಂಗ್‌ ಗ್ಯಾಲಕ್ಸಿ A14 ಫೋನ್‌ ಫೀಚರ್ಸ್‌ ಬಹಿರಂಗ! ಏನೆಲ್ಲಾ ನಿರೀಕ್ಷಿಸಬಹುದು?

|

ಸ್ಯಾಮ್‌ಸಂಗ್‌ ಕಂಪೆನಿಯ ಸ್ಮಾರ್ಟ್‌ಫೋನ್‌ಗಳಿಗೆ ಮಾರುಕಟ್ಟೆಯಲ್ಲಿ ಸಾಕಷ್ಟು ಬೇಡಿಕೆಯಿದೆ. ತನ್ನ ಗ್ಯಾಲಕ್ಸಿ ಎಂ, ಗ್ಯಾಲಕ್ಸಿ ಎ, ಗ್ಯಾಲಕ್ಸಿ ಎಸ್‌ ಸರಣಿಯ ಫೋನ್‌ಗಳ ಮೂಲಕ ಪ್ರಸಿದ್ಧಿ ಪಡೆದುಕೊಂಡಿದೆ. ಇದೀಗ ಗ್ಯಾಲಕ್ಸಿ ಎ ಸರಣಿಯಲ್ಲಿ ಹೊಸ ಸ್ಮಾರ್ಟ್‌ಫೋನ್‌ ಪರಿಚಯಿಸಲು ತಯಾರಿ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಅನ್ನು ಗ್ಯಾಲಕ್ಸಿ A14 ಸ್ಮಾರ್ಟ್‌ಫೋನ್‌ ಎಂದು ಹೆಸರಿಸಲಾಗಿದೆ. ಇದು ಮೀಡಿಯಾಟೆಕ್‌ ಹಿಲಿಯೋ G80 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿರಲಿದೆ ಎಂದು ವರದಿಯಾಗಿದೆ.

ಸ್ಯಾಮ್‌ಸಂಗ್‌

ಹೌದು, ಸ್ಯಾಮ್‌ಸಂಗ್‌ ಕಂಪೆನಿ ಶೀಘ್ರದಲ್ಲೇ ಗ್ಯಾಲಕ್ಸಿ A14 ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಲು ಪ್ಲಾನ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿರುವ ಸಾಧ್ಯತೆಯಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯವನ್ನು ಪಡೆದಿರಲಿದೆ ಎನ್ನಲಾಗಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿರಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೊನ್‌ ವಿಶೇಷತೆ ಏನಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A14 ಸ್ಮಾರ್ಟ್‌ಫೋನ್‌ 6.8 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿರುವ ಸಾಧ್ಯತೆಯಿದೆ. ಈ ಡಿಸ್‌ಪ್ಲೇ 1080 x 2408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿರಲಿದೆ. ಇದು 20:9 ರಚನೆಯ ಅನುಪಾತವನ್ನು ಒಳಗೊಂಡಿರಲಿದೆ. ಇನ್ನು ಡಿಸ್‌ಪ್ಲೇ 388 ಪಿಪಿಐ ಪಿಕ್ಸೆಲ್‌ ಸಾಂದ್ರತೆಯನ್ನು ಹೊಂದಿರಲಿದೆ. ಇದು 107.78 % ಸ್ಕ್ರೀನ್ ಟು ಬಾಡಿ ಅನುಪಾತವನ್ನು ಹೊಂದಿರಲಿದೆ ಎಂದುಯ ಅಂದಾಜಿಸಲಾಗಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A14 ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ G80 SoC ಪ್ರೊಸೆಸರ್‌ ವೇಗವನ್ನು ಪಡೆದಿದೆ. ಇದು ಆಂಡ್ರಾಯ್ಡ್‌ 13 OS ಆಧಾರಿತ One UI 5 ನೊಂದಿಗೆ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಮಾಲಿ G52 GPU ಸಪೋರ್ಟ್‌ ಪಡೆದಿರುವ ಸಾಧ್ಯತೆಯಿದೆ. ಹಾಗೆಯೇ 6GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿರಲಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಕೂಡ ಅವಕಾಶ ನೀಡಲಾಗಿದೆ.

ಕ್ಯಾಮೆರಾ ಸೆಟ್‌ಅಪ್‌ ಏನಿರಲಿದೆ?

ಕ್ಯಾಮೆರಾ ಸೆಟ್‌ಅಪ್‌ ಏನಿರಲಿದೆ?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A14 ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ನಲ್ಲಿ ಬರುವ ನಿರೀಕ್ಷೆಯಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, ಎರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಮತ್ತು ಮೂರನೆ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿರಲಿದೆ. ಇದಲ್ಲದೆ 13 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿರುವ ನಿರೀಕ್ಷೆಯಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್‌ಗಳೇನು?

ಬ್ಯಾಟರಿ ಮತ್ತು ಇತರೆ ಫೀಚರ್ಸ್‌ಗಳೇನು?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A14 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ. ಇದು ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಹೆಡ್‌ಫೋನ್‌ ಜ್ಯಾಕ್‌ ಅನ್ನು ಒಳಗೊಂಡಿರಲಿದೆ. ಇದಲ್ಲದೆ ಆಕ್ಸಿಲೆರೋಮೀಟರ್‌, ಪ್ರಾಕ್ಸಿಮಿಟಿ ಸೆನ್ಸಾರ್‌, ಗೈರೋಸ್ಕೋಪ್‌, ಲೈಟ್‌ ಸೆನ್ಸಾರ್‌ ಅನ್ನು ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A14 ಸ್ಮಾರ್ಟ್‌ಫೋನ್‌ ಭಾರತದಲ್ಲಿ ಬಜೆಟ್‌ ಬೆಲೆಯಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಬಣ್ಣದ ಆಯ್ಕೆಗಳಲ್ಲಿ ಬರಲಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿಯಿಲ್ಲ. ಇನ್ನು ಈ ಸ್ಮಾರ್ಟ್‌ಫೋನ್‌ ಬಿಡುಗಡೆಯ ಅಧಿಕೃತ ದಿನಾಂಕ ಕೂಡ ಇನ್ನು ಬಹಿರಂಗವಾಗಿಲ್ಲ. ಆದರೆ ಈ ಸ್ಮಾರ್ಟ್‌ಫೋನ್‌ ಶೀಘ್ರದಲ್ಲೇ ಮಾರುಕಟ್ಟೆಗೆ ಎಂಟ್ರಿ ನೀಡೋದು ಪಕ್ಕಾ ಆಗಿದೆ.

Best Mobiles in India

English summary
Samsung launches a new Galaxy A series smartphones soon.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X