ಟೆಕ್ ವಲಯದಲ್ಲಿ ಬಿರುಗಾಳಿ ಎಬ್ಬಿಸಿದ ಸ್ಯಾಮ್‌ಸಂಗ್! ಹೇಗಿದೆ ಈ ಹೊಸ ಫೋನ್!
ಸ್ಮಾರ್ಟ್‌ಫೋನ್ ಪ್ರಿಯರಲ್ಲಿ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದ್ದ ಸ್ಯಾಮ್‌ಸಂಗ್ ಗ್ಯಾಲಕ್ಸಿ A14 4G ಸ್ಮಾರ್ಟ್‌ಫೋನ್ ಬಿಡುಗಡೆಯಾಗಿದೆ. ಭಾರತದ ಮಾರುಕಟ್ಟೆಗೆ ಎಂಟ್ರಿ ನೀಡಿರುವ ಈ ಸ್ಮಾರ್ಟ್‌ಫೋನ್ ಬಜೆಟ್ ಸ್ನೇಹಿ ಬೆಲೆಯಲ್ಲಿ ಲಭ್ಯವಾಗಲಿದೆ. ಇನ್ನು ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿರುವ ವಿಶೇಷವಾಗಿದೆ.
ಹೌದು, ಸ್ಯಾಮ್‌ಸಂಗ್ ಗ್ಯಾಲಕ್ಸಿ A14 4G ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನು ಸ್ಮಾರ್ಟ್‌ಫೋನ್ ಸ್ಯಾಮ್‌ಸಂಗ್ ಎಕ್ಸಿನೋಸ್ 850 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ ಸ್ಯಾಮ್‌ಸಂಗ್ RAM ಪ್ಲಸ್ ಫೀಚರ್ಸ್ ಅನ್ನು ಪಡೆದುಕೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A14 4G ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಸ್ಯಾಮ್‌ಸಂಗ್ ಗ್ಯಾಲಕ್ಸಿ A14 4G ಸ್ಮಾರ್ಟ್‌ಫೋನ್ 6.6 ಇಂಚಿನ ಐಪಿಎಸ್ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 2408 × 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಡಿಸ್‌ಪ್ಲೇ ವಾಟರ್‌ಡ್ರಾಪ್ ನಾಚ್ ವಿನ್ಯಾಸವನ್ನು ಹೊಂದಿದ್ದು, ಸ್ಟ್ಯಾಂಡರ್ಡ್ 60Hz ರಿಫ್ರೆಶ್ ರೇಟ್ ಮತ್ತು 480 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಒಳಗೊಂಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A14 4G ಪ್ರೊಸೆಸರ್ ಯಾವುದು?
ಸ್ಯಾಮ್‌ಸಂಗ್ ಗ್ಯಾಲಕ್ಸಿ A14 4G ಸ್ಮಾರ್ಟ್‌ಫೋನ್ ಎಕ್ಸಿನೋಸ್ 850 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ 4GB ವರ್ಚುವಲ್ RAM ಬೆಂಬಲವನ್ನು ನೀಡುತ್ತದೆ. ಇದರೊಂದಿಗೆ ಮೈಕ್ರೊ SD ಕಾರ್ಡ್ ಸ್ಲಾಟ್ ಮೂಲಕ ಕೂಡ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A14 4G ಕ್ಯಾಮೆರಾ ಸೆಟ್‌ಅಪ್
ಸ್ಯಾಮ್‌ಸಂಗ್ ಗ್ಯಾಲಕ್ಸಿ A14 4G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಕ್ಯಾಮೆರಾ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A14 4G ಬ್ಯಾಟರಿ ಬ್ಯಾಕ್‌ಅಪ್ ಎಷ್ಟಿದೆ?
ಸ್ಯಾಮ್‌ಸಂಗ್ ಗ್ಯಾಲಕ್ಸಿ A14 4G ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 10W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಯುಎಸ್‌ಬಿ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ. ಇದಲ್ಲದೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಸಹ ನೀಡಲಾಗಿದೆ.

ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A14 4G ಬೆಲೆ ಮತ್ತು ಲಭ್ಯತೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ A14 4G ಸ್ಮಾರ್ಟ್‌ಫೋನ್ ಬೇಸ್ ಮಾಡೆಲ್ 4GB RAM ಮತ್ತು 64GB ರೂಪಾಂತರದ ಆಯ್ಕೆಗೆ 13,999 ರೂ. ಬೆಲೆ ಹೊಂದಿದೆ. ಇದರ 128GB ಸ್ಟೋರೇಜ್ ಆಯ್ಕೆಯ ಮಾದರಿಯು 14,999ರೂ.ಬೆಲೆಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕಪ್ಪು, ತಿಳಿ ಹಸಿರು ಮತ್ತು ಬೆಳ್ಳಿ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇದಲ್ಲದೆ SBI ಬ್ಯಾಂಕ್ ಕ್ರೆಡಿಟ್ ಕಾರ್ಡ್‌ನೊಂದಿಗೆ ವಿಶೇಷ ರಿಯಾಯಿತಿ ಪಡೆಯಬಹುದು. ಗ್ರಾಹಕರು ಮೊಬಿಕ್ವಿಕ್ ವ್ಯಾಲೆಟ್ ಮೂಲಕ ಪಾವತಿಸಿದರೆ, ಸ್ಯಾಮ್‌ಸಂಗ್ 1,500ರೂ. ವರೆಗೆ ಕ್ಯಾಶ್‌ಬ್ಯಾಕ್ ಸಹ ನೀಡಲಿದೆ.


Click it and Unblock the Notifications








