Home
ಸುದ್ದಿಜಾಲ

ಸ್ಯಾಮ್‌ಸಂಗ್‌ನ ಈ ಜನಪ್ರಿಯ ಫೋನ್‌ ಈಗ ಹೊಸ ಅವತಾರದಲ್ಲಿ ಲಾಂಚ್‌!

ಜನಪ್ರಿಯ ಸ್ಯಾಮ್‌ಸಂಗ್‌ ಮೊಬೈಲ್‌ ಕಂಪೆನಿಯು ಇತ್ತೀಚಿಗೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A15 ಫೋನ್‌ ಅನ್ನು ಬಿಡುಗಡೆ ಮಾಡಿ ಮೊಬೈಲ್‌ ಪ್ರಿಯರನ್ನು ಆಕರ್ಷಿಸಿದೆ. ಇದೀಗ ಸ್ಯಾಮ್‌ಸಂಗ್‌ ಸಂಸ್ಥೆಯು ಗ್ಯಾಲಕ್ಸಿ A15 ಫೋನಿನಲ್ಲಿ ಹೊಸ ವೇರಿಯಂಟ್‌ ಆಯ್ಕೆಯನ್ನು ಘೋಷಿಸಿದ್ದು, ಅದುವೇ 6GB + 128GB ಆಗಿದೆ.

ಹೌದು, ಸ್ಯಾಮ್‌ಸಂಗ್‌ ಮೊಬೈಲ್‌ ಸಂಸ್ಥೆಯು ನೂತನವಾಗಿ 6GB + 128GB ಆಂತರೀಕ ಸ್ಟೋರೇಜ್‌ ವೇರಿಯಂಟ್‌ ಆಯ್ಕೆಯನ್ನು ಭಾರತೀಯ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಅಂದಹಾಗೆ ಈ ಫೋನ್‌ ಬ್ಲೂ ಬ್ಲಾಕ್, ಬ್ಲೂ ಮತ್ತು ಲೈಟ್‌ ಬ್ಲೂ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಗ್ರಾಹಕರು ಪ್ರಮುಖ ಈ ಕಾಮರ್ಸ್‌ ತಾಣಗಳು, ಸ್ಯಾಮ್‌ಸಂಗ್‌ ವೆಬ್‌ಸೈಟ್‌ ಹಾಗೂ ಪ್ರಮುಖ ರಿಟೇಲ್‌ ಸ್ಟೋರ್‌ಗಳ ಮೂಲಕ ಖರೀದಿ ಮಾಡಬಹುದಾಗಿದೆ.

ಸ್ಯಾಮ್‌ಸಂಗ್‌ನ ಈ ಜನಪ್ರಿಯ ಫೋನ್‌ ಈಗ ಹೊಸ ಅವತಾರದಲ್ಲಿ ಲಾಂಚ್‌!

ಹಾಗೆಯೇ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A15 ಫೋನ್‌ 8GB + 128GB ಮತ್ತು 8GB + 256GB ಸ್ಟೋರೇಜ್‌ ವೇರಿಯಂಟ್‌ ಮಾದರಿಯಲ್ಲಿ ಖರೀದಿಗೆ ಲಭ್ಯ. ಇನ್ನು ಈ ಫೋನ್‌ ಮೀಡಿಯಾ ಟೆಕ್‌ ಹಿಲಿಯೊ G99SoC ಪ್ರೊಸೆಸರ್‌ ಪವರ್‌ ಸೌಲಭ್ಯ ಪಡೆದಿದ್ದು, ಇದರೊಂದಿಗೆ5,000mAh ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್ ಕೂಡಾ ಪಡೆದಿದೆ. ಹಾಗಾದರೇ ಇನ್ನುಳಿದಂತೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A15 ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್‌ನ ಈ ಜನಪ್ರಿಯ ಫೋನ್‌ ಈಗ ಹೊಸ ಅವತಾರದಲ್ಲಿ ಲಾಂಚ್‌!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A15 - ಫೀಚರ್ಸ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A15 ಮೊಬೈಲ್‌ 6.5 ಇಂಚಿನ S-AMOLED ಇನ್ಫಿನಿಟಿ-U ನಾಚ್ ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇ 1080 x 2340 ಪಿಕ್ಸೆಲ್‌ ಸ್ಕ್ರಿನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ನೊಂದಿಗೆ ಬರಲಿದೆ. ಇದು 800 ನಿಟ್ಸ್‌ ಬ್ರೈಟ್‌ನೆಸ್ ಅನ್ನು ನೀಡುತ್ತದೆ.

ಹಾಗೆಯೇ ಸ್ಯಾಮ್‌ಸಂಗ್‌ ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6100+ ಪ್ರೊಸೆಸರ್ ಪವರ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಈ ಫೋನ್‌ ಆಂಡ್ರಾಯ್ಡ್‌ 14 ಓಎಸ್‌ ಸಪೋರ್ಟ್ ಕೂಡಾ ಪಡೆದಿದೆ. ಇನ್ನು ಇದು ನೂತನ 6GB + 128GB ವೇರಿಯಂಟ್‌ ಜೊತೆಗೆ 8GB + 128GB ಮತ್ತು 8GB + 256GB ಸ್ಟೋರೇಜ್‌ ಆಯ್ಕೆಗಳಲ್ಲಿ ಲಭ್ಯ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A15 ಮೊಬೈಲ್‌ ಮೂರು ರಿಯರ್‌ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್, ಎರಡನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್‌, ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ ಸೆಲ್ಫಿಗಾಗಿ ಮುಂಭಾಗದಲ್ಲಿ 13 ಮೆಗಾ ಪಿಕ್ಸೆಲ್ ಕ್ಯಾಮೆರಾ ನೀಡಲಾಗಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A15 ಮೊಬೈಲ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ 25W ಫಾಸ್ಟ್‌ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಬ್ಲೂಟೂತ್‌, ಹಾಟ್‌ಸ್ಪಾಟ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಅನ್ನು ಹೊಂದಿದೆ. ಈ ಡಿವೈಸ್‌ ಸೈಡ್-ಫೇಸಿಂಗ್ ಫಿಂಗರ್‌ಪ್ರಿಂಟ್ ಸೆನ್ಸಾರ್‌ಅನ್ನು ಪಡೆದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A15 ಮೊಬೈಲ್‌ ಒಟ್ಟು ಮೂರು ವೇರಿಯಂಟ್‌ ಆಯ್ಕೆಗಳಲ್ಲಿ ಲಭ್ಯ. ಅವುಗಳು ಕ್ರಮವಾಗಿ 6GB+128GB, 8GB+256GB ಮತ್ತು 8GB+128GB ಆಗಿದೆ. ಇನ್ನು ಗ್ಯಾಲಕ್ಸಿ A15 5G 8GB+256GB ವೇರಿಯಂಟ್‌ ಬೆಲೆ 22499ರೂ, ಇನ್ನು 8GB+128GB ವೇರಿಯಂಟ್‌ ದರವು 19499ರೂ. ಅದೇ ರೀತಿ 6GB+128GB ವೇರಿಯಂಟ್‌ ಬೆಲೆಯು 17999ರೂ. ಆಗಿದೆ.

Best Mobiles in India

English summary
Samsung Galaxy A15 5G launch in new 6GB RAM and 128GB variant in India. Check price, offer, specs and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+