Samsung Galaxy A15 ಫೋನಿನ ಆಫರ್ ಬೆಲೆ ತಿಳಿದ್ರೆ, ನೀವು OMG ಅಂತೀರಾ!
ದಕ್ಷಿಣ ಕೊರಿಯಾ ಟೆಕ್ ದೈತ್ಯ ಸ್ಯಾಮ್‌ಸಂಗ್ ತನ್ನ ಗ್ಯಾಲಕ್ಸಿ ಸರಣಿಯಲ್ಲಿ ಹಲವು ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಅವುಗಳ ಪೈಕಿ ಬಜೆಟ್ ದರದಲ್ಲಿ ಕಾಣಿಸಿಕೊಂಡಿರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ A15 5G (Samsung Galaxy A15 5G) ಮೊಬೈಲ್ ಈಗ ಸುಮಾರು 2,500 ರೂ.ಗಳಷ್ಟು ರಿಯಾಯಿತಿ ಪಡೆದಿದೆ. ಈ ಮೊಬೈಲ್ ಮೀಡಿಯಾ ಟೆಕ್ ಹಿಲಿಯೊ G99 SoC ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ.
ಹೌದು, ಸ್ಯಾಮ್‌ಸಂಗ್ ಗ್ಯಾಲಕ್ಸಿ A15 5G (Samsung Galaxy A15 5G) ಬಲು ಆಕರ್ಷಕ ಬೆಲೆಯಲ್ಲಿ ಕಾಣಿಸಿಕೊಂಡಿದ್ದು, ಇದೀಗ 2,500 ರೂ.ಗಳ ಕಡಿಮೆ ಆಗಿದೆ. 6GB + 128GB ವೇರಿಯಂಟ್ 15,499 ರೂ, ಆಗಿದೆ. ಹಾಗೆಯೇ 8GB + 128GB ವೇರಿಯಂಟ್ 16,999 ರೂ. ಗಳ ದರದಲ್ಲಿ ಕಾಣಿಸಿಕೊಂಡಿದೆ. ಅದೇ ರೀತಿ 8GB + 256GB ವೇರಿಯಂಟ್ 19,999 ರೂ. ಗಳ ಬೆಲೆಯಲ್ಲಿ ಲಭ್ಯ ಇದೆ.

ಅಂದಹಾಗೆ ಸ್ಯಾಮ್‌ಸಂಗ್ ಗ್ಯಾಲಕ್ಸಿ A15 ಮೊಬೈಲ್ ಮೀಡಿಯಾ ಟೆಕ್ ಹಿಲಿಯೊ G99 SoC ಪ್ರೊಸೆಸರ್ ಪವರ್ ಸೌಲಭ್ಯ ಪಡೆದಿದೆ. ಅಲ್ಲದೇ ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಪಡೆದುಕೊಂಡಿದೆ. ಅಲ್ಲದೇ ಈ ಫೋನ್ 13 ಮೆಗಾ ಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಪಡೆದಿದೆ. ಇನ್ನುಳಿದಂತೆ ಸ್ಯಾಮ್‌ಸಂಗ್ ಗ್ಯಾಲಕ್ಸಿ A15 5G ಮೊಬೈಲ್‌ನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A15 ಫೀಚರ್ಸ್ ಹೀಗಿವೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ A15 ಮೊಬೈಲ್ 6.5 ಇಂಚಿನ S AMOLED ಇನ್ಫಿನಿಟಿ U ನಾಚ್ ಡಿಸ್‌ಪ್ಲೇ ಅನ್ನು ಹೊಂದಿದೆ. ಈ ಡಿಸ್‌ಪ್ಲೇ 1080 x 2340 ಪಿಕ್ಸೆಲ್ ಸ್ಕ್ರಿನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ನೊಂದಿಗೆ ಬರಲಿದೆ. ಇದು 800 ನಿಟ್ಸ್ ಬ್ರೈಟ್‌ನೆಸ್ ಅನ್ನು ನೀಡುತ್ತದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A15 ಮೊಬೈಲ್ 4G ಮಾದರಿಯು ಮೀಡಿಯಾ ಟೆಕ್ ಹಿಲಿಯೊ G99 SoC ಪ್ರೊಸೆಸರ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 14 ಓಎಸ್ ಸಫೋರ್ಟ್ ಜೊತೆಗೆ ರನ್ ಆಗಲಿದೆ. ಹಾಗೆಯೇ ಇದು 8GB RAM ಮತ್ತು 128 GB ಹಾಗೂ 8 GB RAM ಮತ್ತು 256 GB ಆಂತರೀಕ ಸ್ಟೋರೇಜ್ ಸಾಮರ್ಥ್ಯದಲ್ಲಿ ಲಭ್ಯ ಇದೆ. ಇದರ 5G ಆವೃತ್ತಿಯು 8GB RAM ಮತ್ತು 256GB ಸ್ಟೋರೇಜ್ ಸಾಮರ್ಥ್ಯದಲ್ಲಿ ಇದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A15 ಮೊಬೈಲ್ ತ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಇದರ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್, ದ್ವಿತೀಯ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್, ತೃತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಹೊಂದಿದೆ. ಇದರ ಜೊತೆಗೆ 13 ಮೆಗಾ ಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಪಡೆದುಕೊಂಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A15 ಮೊಬೈಲ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದೆ. ಇದಕ್ಕೆ ಪೂರಕವಾಗಿ ಈ ಫೋನ್ 25W ವೇಗದ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್, ಹಾಟ್‌ಸ್ಪಾಟ್, ವೈಫೈ, ಯುಎಸ್‌ಬಿ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಹೊಂದಿದೆ. ಈ ಡಿವೈಸ್ ಸೈಡ್-ಫೇಸಿಂಗ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಹೊಂದಿದೆ.


Click it and Unblock the Notifications








