ಬಿಡುಗಡೆಗೂ ಮುನ್ನವೇ ಸ್ಯಾಮ್‌ಸಂಗ್ ಗ್ಯಾಲಕ್ಸಿ A15 ಫೀಚರ್ಸ್ ಬಹಿರಂಗ!
ಸ್ಯಾಮ್‌ಸಂಗ್ ಕಂಪೆನಿ ಶೀಘ್ರದಲ್ಲೇ ಭಾರತದಲ್ಲಿ ಮತ್ತೊಂದು ಸ್ಮಾರ್ಟ್‌ಫೋನ್ ಪರಿಚಯಿಸಲು ತಯಾರಿ ನಡೆಸಿದೆ. ಇದನ್ನು ಸ್ಯಾಮ್‌ಸಂಗ್ ಗ್ಯಾಲಕ್ಸಿ A15 ಎಂದು ಗುರುತಿಸಲಾಗಿದೆ. ಈ ಸ್ಮಾರ್ಟ್‌ಫೋನ್ ಬಿಡುಗಡೆ ದಿನಾಂಕ ಇನ್ನು ಅಧಿಕೃತವಾಗಿಲ್ಲವಾದರೂ ರೆಂಡರ್ ವೆಬ್‌ನಲ್ಲಿ ಕಾಣಿಸಿಕೊಂಡಿದೆ. ಇದರಲ್ಲಿ ಫೋನ್‌ನ ಲುಕ್ ಹಾಗೂ ನಿರೀಕ್ಷಿತ ಫೀಚರ್ಸ್ ಬಹಿರಂಗವಾಗಿದೆ.
ಹೌದು, ಸ್ಯಾಮ್‌ಸಂಗ್ ಗ್ಯಾಲಕ್ಸಿ A15 ಭಾರತಕ್ಕೆ ಶೀಘ್ರದಲ್ಲೇ ಎಂಟ್ರಿ ನೀಡುವ ಸೂಚನೆ ಸಿಕ್ಕಿದೆ. ಅದರಂತೆ ಆನ್‌ಲೈನ್ ವೆಬ್‌ಸೈಟ್‌ಗಳಲ್ಲಿ ಇದರ ಫೀಚರ್ಸ್ ಕಾಣಿಸಿಕೊಂಡಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಹೆಲಿಯೊ P35 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುವ ನಿರೀಕ್ಷೆಯಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಹೊಂದಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A15 ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಸ್ಯಾಮ್‌ಸಂಗ್ ಗ್ಯಾಲಕ್ಸಿ A15 ಸ್ಮಾರ್ಟ್‌ಫೋನ್ 6.5 ಇಂಚಿನ ಫುಲ್ ಹೆಚ್‌ಡಿ ಡಿಸ್‌ಪ್ಲೇಯೊಂದಿಗೆ ಬರುತ್ತದೆ ಎಂದು ಊಹಿಸಲಾಗಿದೆ. ಇದು 720 x 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿರಲಿದೆ. ಇದು 20:9 ರಚನೆಯ ಅನುಪಾತವನ್ನು ಹೊಂದಿರಲಿದ್ದು, 270ಪಿಪಿಐ ಪಿಕ್ಸೆಲ್ ಸಾಂದ್ರತೆಯೊಂದಿಗೆ ಬರಲಿದೆ ಎಂದು ಅಂದಾಜಿಸಲಾಗಿದೆ. ಇನ್ನು ಡಿಸ್‌ಪ್ಲೇ ವಾಟರ್ ಡ್ರಾಪ್ ನಾಚ್ ವಿನ್ಯಾಸದೊಂದಿಗೆ ಬರಲಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A15 ಪ್ರೊಸೆಸರ್ ಯಾವುದು?
ಸ್ಯಾಮ್‌ಸಂಗ್ ಗ್ಯಾಲಕ್ಸಿ A15 ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ Exynos 1330 SoC ನಲ್ಲಿ ಕಾರ್ಯನಿರ್ವಹಿಸುತ್ತದೆ. ಇದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಬರಲಿದೆ. ಹಾಗೆಯೇ ಕಾರ್ಯನಿರ್ವಹಿಸಲಿದೆ. ಇದು 8GB RAM ಮತ್ತು 64GB ಇಂಟರ್ ಸ್ಟೋರೇಜ್‌ನೊಂದಿಗೆ ಬರಲಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು 1TB ವರೆಗೆ ವಿಸ್ತರಿಸುವುದಕ್ಕೆ ಅವಕಾಶವನ್ನು ಸಹ ನೀಡಲಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A15 ಕ್ಯಾಮೆರಾ ಸೆಟ್‌ಅಪ್
ಸ್ಯಾಮ್‌ಸಂಗ್ ಗ್ಯಾಲಕ್ಸಿ A15 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸಾರ್ ಇರಲಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾದೊಂದಿಗೆ ಬರುವ ನಿರೀಕ್ಷೆಯನ್ನು ಇಡಲಾಗಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A15 ಬ್ಯಾಟರಿ ಮತ್ತು ಇತರೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ A15 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಬರಲಿದೆ. ಇದು ವೇಗದ ಚಾರ್ಜಿಂಗ್ ಅನ್ನು ಕೂಡ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಹೊಂದಿರಲಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್ ಅನ್ನು ಒಳಗೊಂಡಿರಲಿದೆ ಎನ್ನಲಾಗಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A15 ಬೆಲೆ ಮತ್ತು ಲಭ್ಯತೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ A15 ಸ್ಮಾರ್ಟ್‌ಫೋನ್ 19,990ರೂ ಆರಂಬಿಕ ಬೆಲೆಯಲ್ಲಿ ಲಭ್ಯವಾಗುವ ನಿರೀಕ್ಷೆಯಿದೆ. ಈ ಸ್ಮಾರ್ಟ್‌ಫೋನ್ ಬಿಡುಗಡೆ ದಿನಾಂಕ ಹತ್ತಿರವಾಗ್ತಿದ್ದ ಹಾಗೇ ಇದರ ನಿಖರವಾದ ಬೆಲೆ ವಿವರಗಳು ಬಹಿರಂಗವಾಗಲಿದೆ. ಇನ್ನು ಸ್ಮಾರ್ಟ್‌ಫೋನ್ ಯಾವೆಲ್ಲಾ ಕಲರ್ ಆಯ್ಕೆಗಳಲ್ಲಿ ಬರಲಿದೆ ಎಂಬುದು ಇನ್ನು ಖಚಿತವಾಗಿಲ್ಲ.
ಇದಲ್ಲದೆ ಸ್ಯಾಮ್‌ಸಂಗ್ ಗ್ಯಾಲಕ್ಸಿ S23 FE ಸ್ಮಾರ್ಟ್‌ಫೋನ್ ಸಹ ಮುಂದಿನ ತಿಂಗಳು ಮಾರುಕಟ್ಟೆಗೆ ಎಂಟ್ರಿ ನೀಡಲಿದೆ. ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 1 ಚಿಪ್‌ಸೆಟ್ ನಲ್ಲಿ ಕಾರ್ಯನಿರ್ವಹಿಸುತ್ತದೆ. ಈ ಸ್ಮಾರ್ಟ್‌ಫೋನ್ 6.4 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಬೆಂಬಲಿಸಲಿದೆ ಎಂದು ನಿರೀಕ್ಷಿಸಲಾಗಿದೆ.


Click it and Unblock the Notifications








