Home
ಸುದ್ದಿಜಾಲ

ಟೆಕ್‌ ವಲಯಕ್ಕೆ ಗ್ರ್ಯಾಂಡ್‌ ಎಂಟ್ರಿ ಕೊಟ್ಟ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A15 ಸ್ಮಾರ್ಟ್‌ಫೋನ್‌!

ಸ್ಯಾಮ್‌ಸಂಗ್‌ ಕಂಪೆನಿ ತನ್ನ ಗ್ಯಾಲಕ್ಸಿ ಎ ಸರಣಿಯಲ್ಲಿ ಹೊಸ ಫೋನ್‌ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಅನ್ನು ಗ್ಯಾಲಕ್ಸಿ A15 ಎಂದು ಗುರುತಿಸಲಾಗಿದ್ದು, ಮೀಡಿಯಾಟೆಕ್‌ ಹಿಲಿಯೊ G99SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದರ 5G ಆವೃತ್ತಿಯು ಡೈಮೆನ್ಸಿಟಿ 6100 ಪ್ಲಸ್ ಚಿಪ್‌ಸೆಟ್‌ನಲ್ಲಿ ಕಾರ್ಯನಿರ್ವಹಿಸಲಿದೆ.

ಹೌದು, ಸ್ಯಾಮ್‌ಸಂಗ್‌ ಗ್ಯಾಲಕ್ಸಿ A15 ಸ್ಮಾರ್ಟ್‌ಫೋನ್‌ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 25W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇದಲ್ಲದೆ ಭದ್ರತೆಗಾಗಿ ಸೈಡ್‌ ಫೇಸಿಂಗ್‌ ಫಿಂಗರ್‌ಪ್ರಿಂಟ್‌ ಸೆನ್ಸಾರ್‌ ಅನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಟೆಕ್‌ ವಲಯಕ್ಕೆ ಗ್ರ್ಯಾಂಡ್‌ ಎಂಟ್ರಿ ಕೊಟ್ಟ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A15!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A15 ಡಿಸ್‌ಪ್ಲೇ ರಚನೆ
ಸ್ಯಾಮ್‌ಸಂಗ್‌ ಗ್ಯಾಲಕ್ಸಿ A15 ಸ್ಮಾರ್ಟ್‌ಫೋನ್‌ 6.5 ಇಂಚಿನ S-AMOLED ಇನ್ಫಿನಿಟಿ-U ನಾಚ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1080 x 2340 ಪಿಕ್ಸೆಲ್‌ ಸ್ಕ್ರಿನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ನೊಂದಿಗೆ ಬರಲಿದೆ. ಇದು 800 ನಿಟ್ಸ್‌ ಬ್ರೈಟ್‌ನೆಸ್ ಅನ್ನು ನೀಡುತ್ತದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A15 ಪ್ರೊಸೆಸರ್‌ ಯಾವುದು?
ಸ್ಯಾಮ್‌ಸಂಗ್‌ ಗ್ಯಾಲಕ್ಸಿ A15 ಸ್ಮಾರ್ಟ್‌ಫೋನಿನ 4G ಮಾದರಿಯು ಮೀಡಿಯಾಟೆಕ್‌ ಹಿಲಿಯೊ G99SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದರ 5G ಆವೃತ್ತಿಯು ಡೈಮೆನ್ಸಿಟಿ 6100 ಪ್ಲಸ್ ಚಿಪ್‌ಸೆಟ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್‌ 14 ಬೆಂಬಲದೊಂದಿಗೆ ರನ್‌ ಆಗಲಿದೆ. ಹಾಗೆಯೇ 4G ಆವೃತ್ತಿಯಲ್ಲಿ 8GB RAM ಮತ್ತು 128GB ಹಾಗೂ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದಲ್ಲಿ ಬರಲಿದೆ. ಇದರ 5G ಆವೃತ್ತಿಯು 8GB RAM ಮತ್ತು 256GB ಸ್ಟೋರೇಜ್‌ ಸಾಮರ್ಥ್ಯದಲ್ಲಿ ಬರಲಿದೆ.

ಟೆಕ್‌ ವಲಯಕ್ಕೆ ಗ್ರ್ಯಾಂಡ್‌ ಎಂಟ್ರಿ ಕೊಟ್ಟ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A15!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A15 ಕ್ಯಾಮೆರಾ ಸೆಟ್‌ಅಪ್‌
ಸ್ಯಾಮ್‌ಸಂಗ್‌ ಗ್ಯಾಲಕ್ಸಿ A15 ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಒಳಗೊಂಡಿದೆ. ಇದರ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಪಡೆದುಕೊಂಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A15 ಬ್ಯಾಟರಿ ಮತ್ತು ಇತರೆ
ಸ್ಯಾಮ್‌ಸಂಗ್‌ ಗ್ಯಾಲಕ್ಸಿ A15 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 25W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್‌, ಹಾಟ್‌ಸ್ಪಾಟ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಅನ್ನು ಹೊಂದಿದೆ. ಈ ಡಿವೈಸ್‌ ಸೈಡ್-ಫೇಸಿಂಗ್ ಫಿಂಗರ್‌ಪ್ರಿಂಟ್ ಸೆನ್ಸಾರ್‌ಅನ್ನು ಹೊಂದಿದೆ.

ಟೆಕ್‌ ವಲಯಕ್ಕೆ ಗ್ರ್ಯಾಂಡ್‌ ಎಂಟ್ರಿ ಕೊಟ್ಟ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A15!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A15 ಬೆಲೆ ಮತ್ತು ಲಭ್ಯತೆ
ಸ್ಯಾಮ್‌ಸಂಗ್‌ ಗ್ಯಾಲಕ್ಸಿ A15 ಸ್ಮಾರ್ಟ್‌ಫೋನ್‌ ಪ್ರಸ್ತುತ ವಿಯೆಟ್ನಾಂನಲ್ಲಿ ಬಿಡುಗಡೆ ಆಗಿದೆ. ಆದರಿಂದ ಈ ಸ್ಮಾರ್ಟ್‌ಫೋನ್‌ 4G ರೂಪಾಂತರದ ಬೆಲೆ VND 4,990,000 (ಅಂದಾಜು 17,136ರೂ) ಮತ್ತು 5G ರೂಪಾಂತರದ ಆಯ್ಕೆಯು VND 6,290,000 (ಅಂದಾಜು 21,601ರೂ) ಬೆಲೆ ಹೊಂದಿದೆ. ಇದು ಪರ್ಸನಾಲಿಟಿ ಯೆಲ್ಲೋ, ಫ್ಯಾಂಟಸಿ ಬ್ಲೂ, ಆಪ್ಟಿಮಿಸ್ಟಿಕ್ ಬ್ಲೂ ಮತ್ತು ಬ್ಯಾನ್ ಲಿನ್ಹ್ ಬ್ಲ್ಯಾಕ್‌ನಂತಹ ಕಲರ್‌ ಆಯ್ಕೆಗಳಲ್ಲಿ ಬರುತ್ತದೆ. ಈ ಫೋನ್‌ ಭಾರತದಲ್ಲಿ ಯಾವಾಗ ಬಿಡುಗಡೆ ಆಗಲಿದೆ ಅನ್ನೊದರ ಬಗ್ಗೆ ಯಾವುದೇ ಮಾಹಿತಿಯಿಲ್ಲ.

Best Mobiles in India

English summary
Samsung Galaxy A15 With Key Island feature launched
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+