ಸ್ಯಾಮ್‌ಸಂಗ್ ಗ್ಯಾಲಕ್ಸಿ A21 ಫೋನ್ ಲಾಂಚ್!..ಕ್ವಾಡ್‌ ಕ್ಯಾಮೆರಾ ಹೈಲೈಟ್‌!

|

ದಕ್ಷಿಣ ಕೊರಿಯಾ ಮೂಲದ ಟೆಕ್‌ ದೈತ್ಯ ಸ್ಯಾಮ್‌ಸಂಗ್ ಸಂಸ್ಥೆಯು ಇತ್ತೀಚಿಗೆ ಗ್ಯಾಲಕ್ಸಿ A ಮತ್ತು ಗ್ಯಾಲಕ್ಸಿ M ಸರಣಿಯಲ್ಲಿ ಹಲವು ಬಜೆಟ್‌ ಬೆಲೆಯ ಹೊಸ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಅದರ ಮುಂದುವರಿದ ಭಾಗವಾಗಿ ಸಂಸ್ಥೆಯು ಇದೀಗ ಹೊಸದಾಗಿ ಗ್ಯಾಲಕ್ಸಿ A21 ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಬೆಲೆ ಮತ್ತು ಆಕರ್ಷಕ ಫೀಚರ್ಸ್‌ಗಳಿಂದ ಹೆಚ್ಚು ಗಮನಸೆಳೆದಿದೆ.

ಗ್ಯಾಲಕ್ಸಿ A21

ಹೌದು, ಸ್ಯಾಮ್‌ಸಂಗ್ ಸಂಸ್ಥೆಯು ಯುಎಸ್‌ ಮಾರುಕಟ್ಟೆಯಲ್ಲಿ ಹೊಸದಾಗಿ ಗ್ಯಾಲಕ್ಸಿ A21 ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ನಾಲ್ಕು ಕ್ಯಾಮೆರಾಗಳನ್ನು ಒಳಗೊಂಡಿರುವುದು ವಿಶೇಷ. ಹಾಗೆಯೇ ಪಂಚ್ ಹೋಲ್ ಡಿಸ್‌ಪ್ಲೇ ಸೆಲ್ಫಿ ಕ್ಯಾಮೆರಾ ಸಹ ಇದೆ. ಹಾಗೂ 4,000mAh ಸಾಮರ್ಥ್ಯದ ಬ್ಯಾಟರಿ ಲೈಫ್‌ ಅನ್ನು ಪಡೆದುಕೊಂಡಿದೆ. ಹಾಗಾದರೆ ಗ್ಯಾಲಕ್ಸಿ A21 ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.

ಡಿಸ್‌ಪ್ಲೇ ರಚನೆ

ಡಿಸ್‌ಪ್ಲೇ ರಚನೆ

ಗ್ಯಾಲಕ್ಸಿ A21 ಸ್ಮಾರ್ಟ್‌ಫೋನ್‌ 720 x 1600 ಪಿಕ್ಸಲ್‌ ರೆಸಲ್ಯೂಶನ್‌ ಹೊಂದಿರುವ 6.5 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಜೊತೆಗೆ ಇನ್‌ಫಿನಿಟಿ O ಡಿಸ್‌ಪ್ಲೇ ಹೊಂದಿದೆ. ಡಿಸ್‌ಪ್ಲೇಯ ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 270 ppi ಆಗಿದ್ದು, ಅನುಪಾತವು 20:9 ರಷ್ಟಾಗಿದೆ. ಹಾಗೂ ಸ್ಕ್ರೀನ್‌ ರಕ್ಷಣೆಗಾಗಿ ಗೊರಿಲ್ಲಾ ಗ್ಲಾಸ್ ಸೌಲಭ್ಯವನ್ನು ಪಡೆದಿದೆ.

ಪ್ರೊಸೆಸರ್‌ ಸಾಮರ್ಥ್ಯ

ಪ್ರೊಸೆಸರ್‌ ಸಾಮರ್ಥ್ಯ

ಗ್ಯಾಲಕ್ಸಿ A21 ಸ್ಮಾರ್ಟ್‌ಫೋನ್‌ ಆಕ್ಟಾಕೋರ್ ಮೀಡಿಯಾ ಟೆಕ್ P35 ಪ್ರೊಸೆಸರ್‌ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 10 ಓಎಸ್ ಬೆಂಬಲದಲ್ಲಿ ಕಾರ್ಯನಿರ್ವಹಿಸಲಿದೆ. ಈ ಫೋನ್ 3GB + 32GB ಸ್ಟೋರೇಜ್‌ನ ವೇರಿಯಂಟ್ ಆಯ್ಕೆ ಹೊಂದಿದ್ದು, ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿ 512GB ವರೆಗೂ ವಿಸ್ತರಿಸಲು ಅವಕಾಶ ಹೊಂದಿದೆ.

ಕ್ವಾಡ್‌ ಕ್ಯಾಮೆರಾ ರಚನೆ

ಕ್ವಾಡ್‌ ಕ್ಯಾಮೆರಾ ರಚನೆ

ಗ್ಯಾಲಕ್ಸಿ A21 ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಆಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾ 16ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಸೆಕೆಂಡರಿ ಕ್ಯಾಮೆರಾವು 8ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದ್ದು, ಇನ್ನು ತೃತೀಯ ಮತ್ತು ನಾಲ್ಕನೇ ಕ್ಯಾಮೆರಾಗಳು ಕ್ರಮವಾಗಿ 2ಎಂಪಿ ಸೆನ್ಸಾರ್ ಬಲವನ್ನು ಪಡೆದಿದೆ. ಇದರೊಂದಿಗೆ ಸೆಲ್ಫಿಗಾಗಿ 13ಎಂಪಿ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ. ಜೊತೆಗೆ ಎಡಿಟಿಂಗ್ ಆಯ್ಕೆಗಳು ಇವೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಗ್ಯಾಲಕ್ಸಿ A21 ಸ್ಮಾರ್ಟ್‌ಫೋನ್‌ 4000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ ಅಪ್ ಸಾಮರ್ಥ್ಯವನ್ನು ಪಡೆದಿದೆ. ಇದರೊಂದಿಗೆ 15W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ನೀಡಿದೆ. ಜೊತೆಗೆ ರಿಯರ್‌ ಮೌಂಟೆಡ್‌ ಫಿಂಗರ್‌ಪ್ರಿಂಟ್ ಸೆನ್ಸಾರ್, 4G VoLTE, ವೈಫೈ, ಬ್ಲೂಟೂತ್‌, ಜಿಪಿಎಸ್ ಆಡಿಯೊ ಜಾಕ್ ಸೇರಿದಂತೆ ಇತ್ತೀಚಿನ ಅಗತ್ಯ ಫೀಚರ್ಸ್‌ಗಳನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಯುಎಸ್‌ ಮಾರುಕಟ್ಟೆಯಲ್ಲಿ ಬಿಡುಗಡೆ ಆಗಿರುವ ಈ ಗ್ಯಾಲಕ್ಸಿ A21 ಬೆಲೆಯು $249 ಆಗಿದೆ. (ಭಾರತದಲ್ಲಿ ಅಂದಾಜು 18,900ರೂ.). ಹಾಗೆಯೇ ಈ ಫೋನ್ ಬ್ಲ್ಯಾಕ್ ಬಣ್ಣ ಒಂದೇ ಕಲರ್ ಆಯ್ಕೆಯನ್ನು ಪಡೆದಿದೆ.

Best Mobiles in India

English summary
Samsung Galaxy A21 has 13-megapixel selfie shooter, housed in a hole-punch design.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X