ಸ್ಯಾಮ್‌ಸಂಗ್ ಗ್ಯಾಲಕ್ಸಿ A21s 6GB RAM+128GB ವೇರಿಯೆಂಟ್ ಸ್ಮಾರ್ಟ್‌ಫೋನ್ ಲಾಂಚ್!
ದಕ್ಷಿಣ ಕೊರಿಯಾ ಮೂಲದ ಟೆಕ್ ದೈತ್ಯ ಸ್ಯಾಮ್‌ಸಂಗ್ ಸಂಸ್ಥೆ ಈಗಾಗಲೇ ತನ್ನ ವಿವಿಧ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿದೆ. ಹಲವು ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿರುವ ಸ್ಯಾಮ್‌ಸಂಗ್ ಇತ್ತೀಚಿಗೆ ಗ್ಯಾಲಕ್ಸಿ A ಮತ್ತು ಗ್ಯಾಲಕ್ಸಿ M ಸರಣಿಯಲ್ಲಿ ಹಲವು ಬಜೆಟ್ ಬೆಲೆಯ ಹೊಸ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಅದರ ಮುಂದುವರಿದ ಭಾಗವಾಗಿ ಇದೀಗ ಹೊಸದಾಗಿ ಗ್ಯಾಲಕ್ಸಿ A21s ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಬೆಲೆ ಮತ್ತು ಆಕರ್ಷಕ ಫೀಚರ್ಸ್‌ಗಳಿಂದ ಹೆಚ್ಚು ಗಮನಸೆಳೆದಿದೆ.

ಹೌದು, ಸ್ಯಾಮ್‌ಸಂಗ್ ಸಂಸ್ಥೆ ತನ್ನ ಗ್ಯಾಲಕ್ಸಿ A21s ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯುರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿರುವುದು ವಿಶೇಷವಾಗಿದೆ. ಹಾಗೆಯೇ ಪಂಚ್ ಹೋಲ್ ಡಿಸ್‌ಪ್ಲೇ ಸೆಲ್ಫಿ ಕ್ಯಾಮೆರಾ ಸಹ ಇದೆ. ಹಾಗೂ 5,000mAh ಸಾಮರ್ಥ್ಯದ ಬ್ಯಾಟರಿ ಲೈಫ್ ಅನ್ನು ಪಡೆದುಕೊಂಡಿದೆ. ಹಾಗಾದರೆ ಗ್ಯಾಲಕ್ಸಿ A21s ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.

ಡಿಸ್‌ಪ್ಲೇ
ಗ್ಯಾಲಕ್ಸಿ A21s ಸ್ಮಾರ್ಟ್‌ಫೋನ್ 720 x 1600 ಪಿಕ್ಸಲ್ ರೆಸಲ್ಯೂಶನ್ ಹೊಂದಿರುವ 6.5 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಜೊತೆಗೆ ಇನ್‌ಫಿನಿಟಿ O ಡಿಸ್‌ಪ್ಲೇ ಹೊಂದಿದೆ. ಡಿಸ್‌ಪ್ಲೇಯ ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 270 ppi ಆಗಿದ್ದು, ಅನುಪಾತವು 20:9 ರಷ್ಟಾಗಿದೆ. ಹಾಗೂ ಸ್ಕ್ರೀನ್ ರಕ್ಷಣೆಗಾಗಿ ಗೊರಿಲ್ಲಾ ಗ್ಲಾಸ್ ಸೌಲಭ್ಯವನ್ನು ಪಡೆದಿದೆ.

ಪ್ರೊಸೆಸರ್
ಗ್ಯಾಲಕ್ಸಿ A21s ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಎಕ್ಸಿನೋಸ್ 850 SoC ಪ್ರೊಸೆಸರ್ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 10 ಓಎಸ್ ಬೆಂಬಲದಲ್ಲಿ ಕಾರ್ಯನಿರ್ವಹಿಸಲಿದೆ. ಈ ಫೋನ್ 6GB RAM +128GB ಮತ್ತು 6GB RAM + 64GB ಸ್ಟೋರೇಜ್ ಸಾಮರ್ಥ್ಯದ ಎರಡು ವೇರಿಯಂಟ್ ಆಯ್ಕೆ ಹೊಂದಿದ್ದು, ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿ 512GB ವರೆಗೂ ವಿಸ್ತರಿಸಲು ಅವಕಾಶ ಹೊಂದಿದೆ.

ಕ್ವಾಡ್ ಕ್ಯಾಮೆರಾ ವಿಶೇಷ
ಸ್ಯಾಮ್‌ಸಂಗ್ ಗ್ಯಾಲಕ್ಸಿ A21s ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಇದರಲ್ಲಿ ಪ್ರೈಮರಿ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್-ಆಂಗಲ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಕ್ಯಾಮೆರಾ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾ ಅನ್ನು ಹೊಂದಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು, 15W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE , ಡ್ಯುಯಲ್-ಬ್ಯಾಂಡ್ ವೈ-ಫೈ, 3.5mm ಆಡಿಯೊ ಜ್ಯಾಕ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A21s ಸ್ಮಾರ್ಟ್‌ಫೋನ್ 6GB RAM + 128GB ಸ್ಟೋರೇಜ್ ಮಾದರಿಯ ಬೆಲೆ 17,499 ರೂ.ಆಗಿದ್ದು, ಇದು ಅಕ್ಟೋಬರ್ 10 ರಿಂದ ಸ್ಯಾಮ್‌ಸಂಗ್.ಕಾಂನಲ್ಲಿ ಮಾರಾಟವಾಗಲಿದೆ.
ಇದು ನೀಲಿ, ಕಪ್ಪು ಮತ್ತು ಬಿಳಿ ಆಯ್ಕೆಗಳಲ್ಲಿ ಲಭ್ಯವಿದೆ.


Click it and Unblock the Notifications








