ಗುಡ್‌ನ್ಯೂಸ್: ಸ್ಯಾಮ್‌ಸಂಗ್ ಗ್ಯಾಲಕ್ಸಿ A21s ಸ್ಮಾರ್ಟ್‌ಫೋನ್ ಬೆಲೆ ಇಳಿಕೆ!
ಸ್ಯಾಮ್‌ಸಂಗ್ ಕಂಪನಿಯು ಇತ್ತೀಚೆಗೆ ಗ್ಯಾಲಕ್ಸಿ A ಸರಣಿಯಲ್ಲಿ ಬಿಡುಗಡೆ ಗ್ಯಾಲಕ್ಸಿ A21s ಸ್ಮಾರ್ಟ್‌ಫೋನ್‌ನ ವಿಶೇಷ ಫೀಚರ್ಸ್‌ಗಳಿಂದ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಈಗ ಕಡಿತ ಆಗಿದ್ದು ಗ್ರಾಹಕರನ್ನು ಆಕರ್ಷಿಸಿದೆ. ಕ್ವಾಡ್ ಕ್ಯಾಮೆರಾ ಸೆಟ್‌ಅಪ್ ಹಾಗೂ 5,000mAh ಸಾಮರ್ಥ್ಯದ ಬ್ಯಾಟರಿ ಈ ಸ್ಮಾರ್ಟ್‌ಫೋನಿನ ಪ್ರಮುಖ ಹೈಲೈಟ್ಸ್‌ಗಳಾಗಿವೆ.

ಹೌದು, ಸ್ಯಾಮ್‌ಸಂಗ್ ಗ್ಯಾಲಕ್ಸಿ A21s ಸ್ಮಾರ್ಟ್‌ಫೋನಿನ 6GB + 64GB ವೇರಿಯಂಟ್ ಬೆಲೆಯಲ್ಲಿ ಈಗ 1000ರೂ. ಇಳಿಕೆ ಆಗಿದೆ. ಮೇ ತಿಂಗಳಿನಲ್ಲಿ ಈ ಫೋನ್ 18,499ರೂ.ಗಳಿಗೆ ಬಿಡುಗಡೆ ಆಗಿತ್ತು ಇದೀಗ 1000ರೂ. ಕಡಿತದಿಂದಾಗಿ 17,499ರೂ.ಗಳಿಗೆ ಲಭ್ಯವಾಗಲಿದೆ. ಈ ಫೋನ್ ಬ್ಲ್ಯಾಕ್, ಬ್ಲೂ ಹಾಗೂ ವೈಟ್ ಬಣ್ಣಗಳ ಆಯ್ಕೆಯನ್ನು ಹೊಂದಿದೆ. ಇನ್ನುಳಿದಂತೆ ಯಾವೆಲ್ಲಾ ಫೀಚರ್ಸ್‌ಗಳನ್ನು ಪಡೆದಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಗ್ಯಾಲ್ಯಾಕ್ಸಿ A21s ಡಿಸ್‌ಪ್ಲೇ
ಗ್ಯಾಲ್ಯಾಕ್ಸಿ A21s ಸ್ಮಾರ್ಟ್‌ಫೋನ್ 720x1600 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯವನ್ನು ಒಳಗೊಂಡಿದ್ದು, 6.5 ಇಂಚಿನ ಫುಲ್ ಹೆಚ್‌ಡಿ ಪ್ಲಸ್ IPS ಡಿಸ್‌ಪ್ಲೇಯನ್ನು ಹೊಂದಿದೆ. ಹಾಗೆಯೇ ಡಿಸ್‌ಪ್ಲೇಯ ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 263 ppi ಆಗಿದ್ದು, 20:9 ಅನುಪಾತವನ್ನು ಪಡೆದಿದೆ. ಗೇಮಿಂಗ್ ಹಾಗೂ ವಿಡಿಯೊ ವೀಕ್ಷಣೆಗೆ ಪೂರಕವಾಗಿದೆ.

ಗ್ಯಾಲ್ಯಾಕ್ಸಿ A21s ಪ್ರೊಸೆಸರ್
ಗ್ಯಾಲ್ಯಾಕ್ಸಿ A21s ಸ್ಮಾರ್ಟ್‌ಫೋನ್ ಆಕ್ಟಾಕೋರ್ Exynos 7904 SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 ಓಎಸ್ ಬೆಂಬಲ ಪಡೆದಿದೆ. ಹಾಗೆಯೇ ಮೂರು ವೇರಿಯಂಟ್ ಮಾದರಿಗಳಿರಲಿದ್ದು, ಅವುಗಳು ಕ್ರಮವಾಗಿ 3GB+32GB, 4GB+64GB, ಮತ್ತು 6GB+64GB ಸಾಮರ್ಥ್ಯವನ್ನು ಒಳಗೊಂಡಿವೆ. ಇದರೊಂದಿಗೆ ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಸಂಗ್ರಹವನ್ನು ವಿಸ್ತರಿಸಿಕೊಳ್ಳುವ ಅವಕಾಶ ನೀಡಲಾಗಿದೆ.

ಗ್ಯಾಲ್ಯಾಕ್ಸಿ A21s ಕ್ಯಾಮೆರಾ
ಗ್ಯಾಲ್ಯಾಕ್ಸಿ A21s ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ಕ್ವಾಡ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಮುಖ್ಯ ಕ್ಯಾಮೆರಾವು 48ಮೆಗಾಪಿಕ್ಸಲ್ ಸೆನ್ಸಾರ್‌ನಲ್ಲಿರಲಿದೆ. ಸೆಕೆಂಡರಿ ಕ್ಯಾಮೆರಾವು 8 ಮೆಗಾಪಿಕ್ಸಲ್‌ನಲ್ಲಿದೆ. ಅದೇ ರೀತಿ ತೃತೀಯ ಹಾಗೂ ನಾಲ್ಕನೇ ಕ್ಯಾಮೆರಾಗಳು ಕ್ರಮವಾಗಿ 2 ಮೆಗಾಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ ಪಡೆದಿವೆ. ಮುಂಭಾಗದಲ್ಲಿ 13 ಮೆಗಾಪಿಕ್ಸಲ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಒದಗಿಸಲಾಗಿದೆ.

ಗ್ಯಾಲ್ಯಾಕ್ಸಿ A21s ಬ್ಯಾಟರಿ
ಗ್ಯಾಲ್ಯಾಕ್ಸಿ A21s ಸ್ಮಾರ್ಟ್‌ಫೋನಿನಲ್ಲಿ 5,000mAh ಸಾಮರ್ಥ್ಯದ ದೀರ್ಘಕಾಲದ ಬ್ಯಾಟರಿಯನ್ನು ಒದಗಿಸಲಾಗಿದೆ. ಇದರೊಂದಿಗೆ 15W ಸಾಮರ್ಥ್ಯದ ಫಾಸ್ಟ್ ಚಾರ್ಜರ್ ಸೌಲಭ್ಯ ಸಹ ಪಡೆದುಕೊಂಡಿದೆ. ಹಾಗೆಯೇ ವೈಫೈ, ಬ್ಲೂಟೂತ್, ಜಿಪಿಎಸ್, ಫಿಂಗರ್‌ಪ್ರಿಂಟ್ ಸೆನ್ಸಾರ್ ಸೌಲಭ್ಯಗಳು ಸಹ ಇವೆ.


Click it and Unblock the Notifications








