ಸ್ಯಾಮ್‌ಸಂಗ್ ಗ್ಯಾಲಕ್ಸಿ A21s ಸ್ಮಾರ್ಟ್‌ಫೋನ್ ಫೀಚರ್ಸ್ ಬಹಿರಂಗ!
ಸ್ಮಾರ್ಟ್‌ಫೋನ್ ವಲಯದಲ್ಲಿ ಹಲವು ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿವೆ. ಈಗಾಗಲೇ ಹಲವು ಕಂಪೆನಿಗಳು ತಮ್ಮ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಸೈ ಎನಿಸಿಕೊಂಡಿದೆ. ಅಲ್ಲದೆ ಮಾರುಕಟ್ಟೆಯಲ್ಲಿ ಸ್ಮಾರ್ಟ್‌ಫೋನ್ ದಿಗ್ಗಜರೆನಿಸಿಕೊಂಡಿವೆ. ಈ ಸಾಲಿನಲ್ಲಿ ಸ್ಯಾಮ್‌ಸಂಗ್ ಕಂಪೆನಿ ಕೂಡ ಸೇರಿದ್ದು ತನ್ನ ವಿಶೇಷ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ದಿಗ್ಗಜ ಎನಿಸಿಕೊಂಡಿದೆ. ಸದ್ಯ ಇದೀಗ ಸ್ಯಾಮ್‌ಸಂಗ್ ಕಂಪೆನಿ ಮತ್ತೊಂದು ಹೊಸ ಮಾದರಿಯ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಲು ವೇದಿಕೆ ಸಿದ್ದಪಡಿಸಿಕೊಳ್ಳುತ್ತಿದೆ.

ಹೌದು, ಸ್ಮಾರ್ಟ್‌ಫೋನ್ ದಿಗ್ಗಜ ಸ್ಯಾಮ್‌ಸಂಗ್ ಕಂಪೆನಿ ತನ್ನ ಹೊಸ ಸ್ಯಾಮ್‌ಸಂಗ್ ಗ್ಯಾಲಕ್ಸಿ A21s ಸ್ಮಾರ್ಟ್‌ಫೋನ್ ಬಿಡುಗಡೆಗೆ ಸಿದ್ದತೆ ನಡೆಸಿದೆ. ಇನ್ನು ಈ ಸ್ಮಾರ್ಟ್‌ಫೋನ್ ಹೊಸ ವಿನ್ಯಾಸವನ್ನು ಒಳಗೊಂಡಿದ್ದು, ಹೊಸ ಮಾದರಿಯ ಫೀಚರ್ಸ್‌ಗಳನ್ನ ಹೊಂದಿರಲಿದೆ ಎಂದು ಹೇಳಲಾಗ್ತಿದೆ. ಇನ್ನು ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನ ಹೊಂದಿರಲಿದೆ ಅನ್ನೊದು ಆನ್‌ಲೈನ್‌ನಲ್ಲಿ ಲೀಕ್ ಆಗಿದೆ. ಸದ್ಯ ಆನ್‌ಲೈನ್ ಲೀಕ್ ಮಾಹಿತಿಯ ಪ್ರಕಾರ ಗ್ಯಾಲಕ್ಸಿ A21s ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನ ಹೊಂದಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿರಿ.

ಡಿಸ್‌ಪ್ಲೇ
ಸ್ಯಾಮ್‌ಸಂಗ್ ಗ್ಯಾಲಕ್ಸಿ A21s ಸ್ಮಾರ್ಟ್‌ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ ಡಿಸ್‌ಪ್ಲೇಯನ್ನ ಹೊಂದಿರಲಿದೆ ಎಂದು ಹೇಳಲಾಗ್ತಿದೆ. ಇದಲ್ಲದೆ ಈ ಡಿಸ್‌ಪ್ಲೇಯು ಎಚ್‌ಡಿ + PLS TFT ಡಿಸ್‌ಪ್ಲೇ ವಿನ್ಯಾಸವನ್ನ ಹೊಂದಿದೆ ಎಂದು ನಿರೀಕ್ಷಿಸಲಾಗಿದೆ. ಅಲ್ಲದೆ ವೀಡಿಯೋ ಕರೆಗಳು ಹಾಗೂ ವೀಡಿಯೋ ವೀಕ್ಷಣೆಗೆ ಯೋಗ್ಯವಾದ ಡಿಸ್‌ಪ್ಲೇ ಮಾದರಿಯನ್ನ ಹೊಂದಿದೆ ಎಂದು ಅಂದಾಜಿಸಲಾಗಿದೆ.

ಪ್ರೊಸೆಸರ್
ಇನ್ನು ಈ ಸ್ಮಾರ್ಟ್‌ಫೋನ್ ಸ್ಯಾಮ್‌ಸಂಗ್ ಎಕ್ಸಿನೋಸ್ 850 ಆಕ್ಟಾ-ಕೋರ್ SoC ಪ್ರೊಸೆಸರ್ ಅನ್ನು ಹೊಂದಿರಲಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ ಎಂದು ಹೇಳಲಾಗ್ತಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್ 3GB RAM ಮತ್ತು 32GB ಹಾಗೂ 64GB ಆಂತರಿಕ ಶೇಖರಣಾ ಸಾಮರ್ಥ್ಯದ ವೇರಿಯೆಂಟ್ ಆಯ್ಕೆಯನ್ನ ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ ಸಂಗ್ರಹಣಾ ಸಾಮರ್ಥ್ಯವನ್ನ ವಿಸ್ತರಿಸಿಕೊಳ್ಳುವ ಅವಕಾಶವನ್ನ ಸಹ ನೀಡಲಾಗಿದೆ.

ಕ್ಯಾಮೆರಾ ವಿನ್ಯಾಸ
ಸ್ಯಾಮ್‌ಸಂಗ್ ಗ್ಯಾಲಕ್ಸಿ A21s ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಕ್ಯಾಮೆರಾಹೊಂದಿರಲಿದೆ ಎನ್ನಲಾಗಿದೆ. ಇದಲ್ಲದೆ ಇನ್ನು ಎರಡು ಕ್ಯಾಮೆರಾಗಳ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿರಲಿದೆ ಎಂದು ಹೇಳಲಾಗ್ತಿದೆ.

ಬ್ಯಾಟರಿ ಮತ್ತು ಲಭ್ಯತೆ
ಇನ್ನು ಸ್ಯಾಮ್‌ಸಂಗ್ ಗ್ಯಾಲಕ್ಸಿ A21s ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹೆಡ್‌ಫೋನ್ ಜ್ಯಾಕ್, ಬ್ಲೂಟೂತ್ 5.0, ಯುಎಸ್‌ಬಿ ಪೋರ್ಟ್ ಮತ್ತು ಎನ್‌ಎಫ್‌ಸಿ ಅನ್ನು ಬೆಂಬಲಿಸಲಿದೆ ಎಂದು ಹೇಳಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ 5G ಬೆಂಬಲವನ್ನು ಹೊಂದಿರುವುದಿಲ್ಲ ಎಂದು ಹೇಳಲಾಗಿದೆ. ಇನ್ನು ಲೀಕ್ ಮಾಹಿತಿ ಪ್ರಕಾರ ಸ್ಯಾಮ್‌ಸಂಗ್ ಗ್ಯಾಲಕ್ಸಿ A21s ಬೆಲೆ ಯುರೋ 199 (ಸರಿಸುಮಾರು ರೂ. 16,200) ಅಥವಾ ಯುರೋ 209 (ಸರಿಸುಮಾರು 17,100 ರೂ.) ನಿಂದ ಪ್ರಾರಂಭವಾಗಲಿದೆ ಎಂದು ಅಂದಾಜಿಸಲಾಗಿದೆ.


Click it and Unblock the Notifications








