ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A21s ಫೋನ್ ಬಿಡುಗಡೆಗೆ ಸಿದ್ದತೆ!
ಸ್ಮಾರ್ಟ್‌ಫೋನ್ ದಿಗ್ಗಜ ಎನಿಸಿಕೊಂಡಿರುವ ಸ್ಯಾಮ್‌ಸಂಗ್ ಕಂಪೆನಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಸೈ ಎನಿಸಿಕೊಂಡಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಮಾರುಕಟ್ಟೆಗೆ ಪರಿಚಯಿಸಿರೋ ಸ್ಯಾಮ್‌ಸಂಗ್ ಕಂಪೆನಿ ಸ್ಮಾರ್ಟ್‌ಫೋನ್ ಪ್ರಿಯರ ನೆಚ್ಚಿನ ಬ್ರಾಂಡ್ ಆಗಿ ಗುರುತಿಸಿಕೊಂಡಿದೆ. ಸದ್ಯ ಇದೀಗ ತನ್ನ ಮತ್ತೊಂದು ಹೊಸ ಸ್ಮಾರ್ಟ್‌ಫೋನ್ ಅನ್ನು ಭಾರತದ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.

ಹೌದು, ದಕ್ಷಿಣ ಕೋರಿಯಾದ ಸ್ಮಾರ್ಟ್‌ಫೋನ್ ದಿಗ್ಗಜ ಸ್ಯಾಮ್‌ಸಂಗ್ ಕಂಪೆನಿ ಭಾರತೀಯ ಮಾರುಕಟ್ಟೆಯಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A21s ಅಧಿಕೃತವಾಗಿ ಬಿಡುಗಡೆ ಮಾಡಲು ಸಜ್ಜಾಗಿದೆ. ಸದ್ಯ ಸ್ಯಾಮ್‌ಸಂಗ್ ಗ್ಯಾಲಕ್ಸಿ A21s ಜೂನ್ 17 ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ ಎಂದು ಕಂಪನಿ ಅಧಿಕೃತವಾಗಿ ದೃಡಪಡಿಸಿದೆ. ಈಗಾಗಲೇ ಈ ಸ್ಮಾರ್ಟ್‌ಫೋನ್ ಕಳೆದ ತಿಂಗಳು ಯುಕೆ ನಲ್ಲಿ ಬಿಡುಗಡೆಯಾಗಿದ್ದು ಈಗ ಭಾರತಕ್ಕೆ ಬರಲು ಸಜ್ಜಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ವಿಶೇಷತೆ ಏನು ಹಾಗೂ ವಿನ್ಯಾಸ ಹೇಗಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ
ಸ್ಯಾಮ್‌ಸಂಗ್ ಗ್ಯಾಲಕ್ಸಿ A21s ಸ್ಮಾರ್ಟ್‌ಫೋನ್ 720 × 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಎಚ್‌ಡಿ + ಇನ್ಫಿನಿಟಿ-ಒ ಡಿಸ್‌ಪ್ಲೇಯನ್ನು ಹೊಂದಿದೆ. ಅಲ್ಲದೆ ಈ ಡಿಸ್‌ಪ್ಲೇ 20: 9 ರಚನೆಯ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್
ಇನ್ನು ಈ ಸ್ಮಾರ್ಟ್‌ಫೋನ್ ಎಕ್ಸಿನೋಸ್ 850 ಆಕ್ಟಾ-ಕೋರ್ ಪ್ರೊಸೆಸರ್ ವೇಗವನ್ನು ಹೊಂದಿದೆ. ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್ 3GB RAM +32GB ಹಾಗೂ 4GB RAM +64GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ವೇರಿಯೆಂಟ್ ಆಯ್ಕೆಯನ್ನ ಹೊಂದಿದೆ. ಅಲ್ಲದೆ ಮೆಮೊರಿ ಕಾರ್ಡ್ ಮೂಲಕ 512GB ವರೆಗೆ ವಿಸ್ತರಿಸಬಹುದಾದ ಆಂತರಿಕ ಸಂಗ್ರಹ ಸಾಮರ್ಥ್ಯವನ್ನ ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿನ್ಯಾಸ
ಸ್ಯಾಮ್‌ಸಂಗ್ ಗ್ಯಾಲಕ್ಸಿ A21s ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ , ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್, ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿರಲಿದೆ ಎನ್ನಲಾಗ್ತಿದೆ.

ಬ್ಯಾಟರಿ ಮತ್ತು ಇತರೆ
ಇನ್ನು ಈ ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು, 15W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ, ಹಾಟ್‌ಸ್ಪಾಟ್, ಬ್ಲೂಟೂತ್, ಅನ್ನು ಬೆಂಬಲಿಸಲಿದೆ. ಇದಲ್ಲದೆ ಫಿಂಗರ್‌ಪ್ರಿಂಟ್ ಸೆನ್ಸಾರ್, ಫೇಸ್ ರೆಕಗ್ನಿಷನ್, 4G VOLTE ಯುಎಸ್‌ಬಿ ಟೈಪ್-ಸಿ ಅನ್ನು ಸಹ ಒಳಗೊಂಡಿರಲಿದೆ.

ಬೆಲೆ ಮತ್ತು ಲಭ್ಯತೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ A21s ಸ್ಮಾರ್ಟ್‌ಫೋನ್ ಭಾರತೀಯ ಮಾರುಕಟ್ಟೆಯಲ್ಲಿ ಸುಮಾರು 17,000 ರೂ.ಗಳಿಗೆ ಲಬ್ಯವಾಗಲಿದೆ ಎನ್ನಲಾಗ್ತಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕಪ್ಪು, ನೀಲಿ ಮತ್ತು ಬಿಳಿ ಸೇರಿದಂತೆ ಮೂರು ಬಣ್ಣ ಆಯ್ಕೆಗಳಲ್ಲಿ ಲಭ್ಯವಾಗಲಿದೆ ಎಂದು ಅಂದಾಜಿಸಲಾಗಿದೆ.


Click it and Unblock the Notifications








