ಸ್ಯಾಮ್‌ಸಂಗ್ ಗ್ಯಾಲಕ್ಸಿ A21s ಸ್ಮಾರ್ಟ್‌ಫೋನ್ ಬಿಡುಗಡೆ!
ಸ್ಮಾರ್ಟ್‌ಫೋನ್ ದಿಗ್ಗಜ ಎನಿಸಿಕೊಂಡಿರುವ ಸ್ಯಾಮ್‌ಸಂಗ್ ಕಂಪೆನಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಬಿಡುಗಡೆ ಮಾಡಿ ಸೈ ಎನಿಸಿಕೊಂಡಿದೆ. ಈಗಾಗಲೇ ಹಲವು ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸುವ ಮೂಲಕ ಸ್ಮಾರ್ಟ್‌ಫೋನ್ ಪ್ರಿಯರಿಂದ ಜನಪ್ರಿಯತೆಯನ್ನ ಗಳಿಸಿಕೊಂಡಿದೆ. ಸದ್ಯ ಇದೀಗ ಸ್ಯಾಮ್‌ಸಂಗ್ ಕಂಪೆನಿ ತನ್ನ ಮತ್ತೊಂದು ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ.

ಹೌದು, ದಕ್ಷಿಣ ಕೊರಿಯಾದ ಟೆಕ್ ದೈತ್ಯ ಸ್ಯಾಮ್‌ಸಂಗ್ ಕಂಪನಿ ತನ್ನ ಮತ್ತೊಂದು ಮಧ್ಯ ಶ್ರೇಣಿಯ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಸದ್ಯ ಈ ಸ್ಮಾರ್ಟ್‌ಫೋನ್ ಅನ್ನು ಸ್ಯಾಮ್‌ಸಂಗ್ ಗ್ಯಾಲಕ್ಸಿ A21s ಸ್ಮಾರ್ಟ್‌ಫೋನ್ ಎಂದು ಹೆಸರಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, 48 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಮುಖ್ಯ ಕ್ಯಾಮೆರಾವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ವಿಶೇಷತೆ ಹಾಗೂ ವಿನ್ಯಾಸ ಏನಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್ಪ್ಲೇ
ಇನ್ನು ಈ ಸ್ಮಾರ್ಟ್‌ಫೋನ್ 720 x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಇನ್ಫಿನಿಟಿ-ಒ ಡಿಸ್ಪ್ಲೇ ವಿನ್ಯಾಸವನ್ನು ಹೊಂದಿದ್ದು, 20:9 ರಚನೆಯ ಅನುಪಾತವನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ ವೀಡಿಯೋ ಕರೆ ಹಾಗೂ ವೀಡಿಯೋ ವೀಕ್ಷಣೆಗೆ ಯೋಗ್ಯವಾದ ಡಿಸ್‌ಪ್ಲೇ ಮಾದರಿಯನ್ನ ಹೊಂದಿದೆ.

ಪ್ರೊಸೆಸರ್
ಇನ್ನು ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಎಕ್ಸಿನೋಸ್ 850 ಪ್ರೊಸೆಸರ್ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್ 10 ಆಧಾರಿತ ಒನ್ ಯುಐ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್ 6GB RAM ಮತ್ತು 64GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನ ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನ ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿನ್ಯಾಸ
ಸ್ಯಾಮ್‌ಸಂಗ್ ಗ್ಯಾಲಕ್ಸಿ A21s ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್, ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಹೊಂದಿವೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಇನ್ನು ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು, 15W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ A21s ಸ್ಮಾರ್ಟ್‌ಫೋನ್ 4GB RAM + 64GB ಸಂಗ್ರಹ ಸಾಮರ್ಥ್ಯದ ಆಯ್ಕೆಯಲ್ಲಿ ಬೆಲೆ 16499 ರೂ. ಮತ್ತು 6GB RAM + 64GB ಮಾದರಿಗೆ 18,499 ರೂ. ಬೆಲೆಯನ್ನ ನಿಗಧಿಪಡಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕಪ್ಪು, ನೀಲಿ ಮತ್ತು ಬಿಳಿ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿರುತ್ತದೆ.


Click it and Unblock the Notifications








