ಸ್ಯಾಮ್‌ಸಂಗ್ 5G ಫೋನ್‌ ಖರೀದಿಸುವ ಗ್ರಾಹಕರಿಗೆ ಭರ್ಜರಿ ಸಿಹಿ ಸುದ್ದಿ ಇಲ್ಲಿದೆ!

|

ಸ್ಯಾಮ್‌ಸಂಗ್ ಟೆಕ್‌ ಸಂಸ್ಥೆಯ ಭಿನ್ನ ಸಾಮರ್ಥ್ಯದ ಸ್ಮಾರ್ಟ್‌ಫೋನ್‌ಗಳ ಮೂಲಕ ಮಾರುಕಟ್ಟೆಯಲ್ಲಿ ಸದ್ದು ಮಾಡುತ್ತ ಮುನ್ನಡೆದಿದೆ. ಸಂಸ್ಥೆಯು ಇತ್ತೀಚಿನ 5G ಸ್ಮಾರ್ಟ್‌ಫೋನ್‌ಗಳು ಸಹ ಹೆಚ್ಚು ಆಕರ್ಷಕ ಎನಿಸಿವೆ. ಸದ್ಯ ಸ್ಯಾಮ್‌ಸಂಗ್‌ ಸಂಸ್ಥೆಯ 5G ಸ್ಮಾರ್ಟ್‌ಫೋನ್‌ ಖರೀದಿಸುವ ಗ್ರಾಹಕರಿಗೆ ಭಾರೀ ಸಿಹಿಸುದ್ದಿ ಇದೆ.

ಸ್ಯಾಮ್‌ಸಂಗ್

ಹೌದು, ಸ್ಯಾಮ್‌ಸಂಗ್ ಕಂಪನಿಯು ತನ್ನ 5G ಫೋನ್‌ವೊಂದರ ಬೆಲೆಯಲ್ಲಿ ಈಗ ಭರ್ಜರಿ ಬೆಲೆ ಇಳಿಕೆ ಮಾಡಿದೆ. ಅದುವೇ ಸ್ಯಾಮ್‌ಸಂಗ್ ಗ್ಯಾಲಕ್ಸಿ A22 5G ಸ್ಮಾರ್ಟ್‌ಫೋನ್‌ ಆಗಿದೆ. ಈ ಫೋನ್‌ ಬೆಲೆಯಲ್ಲಿ ಈಗ 2000ರೂ. ಕಡಿತ ಆಗಿದೆ. ಈ ಫೋನ್ 6GB + 128GB ಮತ್ತು 8GB + 128GB ಸ್ಟೋರೇಜ್‌ನ ಎರಡು ವೇರಿಯಂಟ್‌ ಆಯ್ಕೆಗಳನ್ನು ಹೊಂದಿದ್ದು, ಎರಡು ವೇರಿಯಂಟ್‌ಗಳಿಗೂ ಬೆಲೆ ಇಳಿಕೆ ಅನ್ವಯವಾಗುತ್ತದೆ.

ಸ್ಯಾಮ್‌ಸಂಗ್

ಸ್ಯಾಮ್‌ಸಂಗ್ ಗ್ಯಾಲಕ್ಸಿ A22 5G ಫೋನಿನ 6GB + 128GB ವೇರಿಯಂಟ್‌ ಬೆಲೆಯು 19,999 ರೂ. ಆಗಿದ್ದು, ಬೆಲೆ ಇಳಿಕೆಯಿಂದಾಗಿ 17,999 ರೂ. ಗಳಲ್ಲಿ ಲಭ್ಯವಾಗುತ್ತದೆ. ಹಾಗೆಯೇ 8GB + 128GB ವೇರಿಯಂಟ್‌ ಬೆಲೆಯು 21,999 ರೂ. ಆಗಿದ್ದು, ದರ ಕಡಿತದಿಂದಾಗಿ 19,999ರೂ. ಗಳಿಗೆ ದೊರೆಯುತ್ತದೆ. ಇನ್ನುಳಿದಂತೆ ಸ್ಯಾಮ್‌ಸಂಗ್ ಗ್ಯಾಲಕ್ಸಿ A22 5G ಸ್ಮಾರ್ಟ್‌ಫೋನ್‌ ಇತರೆ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಹೇಗಿದೆ

ಡಿಸ್‌ಪ್ಲೇ ರಚನೆ ಹೇಗಿದೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ A22 5G ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6 ಇಂಚಿನ ಫುಲ್‌-ಹೆಚ್‌ಡಿ + ಇನ್ಫಿನಿಟಿ-ವಿ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದ್ದು, 399 ಪಿಪಿಐ ಸಾಂದ್ರತೆಯನ್ನು ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ 82.3% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಪಡೆದುಕೊಂಡಿದೆ.

ಪ್ರೊಸೆಸರ್‌ ಪವರ್ ಯಾವುದು

ಪ್ರೊಸೆಸರ್‌ ಪವರ್ ಯಾವುದು

ಸ್ಯಾಮ್‌ಸಂಗ್ ಗ್ಯಾಲಕ್ಸಿ A22 5G ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಒನ್ ಯುಐ ಕೋರ್ 3.1 ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಜೊತೆಗೆ 6GB RAM + 128GB ಮತ್ತು 8GB RAM + 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಎರಡು ವೇರಿಯೆಂಟ್‌ ಆಯ್ಕೆಯನ್ನು ಪಡೆದುಕೊಂಡಿದೆ. ಇದನ್ನು ಮೈಕ್ರೊ ಎಸ್ಡಿ ಕಾರ್ಡ್ ಮೂಲಕ 1 ಟಿಬಿ ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ಸೆನ್ಸಾರ್ ವಿಶೇಷ

ಕ್ಯಾಮೆರಾ ಸೆನ್ಸಾರ್ ವಿಶೇಷ

ಸ್ಯಾಮ್‌ಸಂಗ್ ಗ್ಯಾಲಕ್ಸಿ A22 5G ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಶೂಟರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಸ್ಯಾಮ್‌ಸಂಗ್ ಗ್ಯಾಲಕ್ಸಿ A22 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 15W ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ವೈಫೈ, ಬ್ಲೂಟೂತ್, ಜಿಪಿಎಸ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಇನ್ನು ಈ ಫೋನ್ ಸೈಡ್-ಮೌಂಟೆಡ್ ಫಿಂಗರ್ಪ್ರಿಂಟ್ ಸೆನ್ಸಾರ್ ಅನ್ನು ಸಹ ಹೊಂದಿದೆ. ಇದು ಗ್ರೇ, ಮಿಂಟ್ ಮತ್ತು ವೈಲೆಟ್ ಬಣ್ಣಗಳಲ್ಲಿ ಲಭ್ಯ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F23 5G ಡಿಸ್ಕೌಂಟ್‌ನಲ್ಲಿ ಲಭ್ಯ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F23 5G ಡಿಸ್ಕೌಂಟ್‌ನಲ್ಲಿ ಲಭ್ಯ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F23 5G ಫೋನ್‌ ಸಹ ಆಕರ್ಷಕ ರಿಯಾಯತಿ ಪಡೆದಿದೆ. ಗ್ರಾಹಕರು ಈ ಫೋನ್ ಅನ್ನು ರಿಯಾಯಿತಿ ಬೆಲೆಗೆ ಖರೀದಿಸಬಹುದಾಗಿದೆ. ಈ ಫೋನಿನ ಬೆಲೆಯಲ್ಲಿ ಈಗ 1,500 ರೂ. ಗಳ ಕಡಿತ ಆಗಿದ್ದು, ಬೆಲೆ ಇಳಿಕೆಯಿಂದಾಗಿ 4 GB + 128 GB ವೇರಿಯಂಟ್‌ 15,999 ರೂ. ಪ್ರೈಸ್‌ಟ್ಯಾಗ್‌ನಲ್ಲಿ ಲಭ್ಯ. ಅದೇ ರೀತಿ 6GB + 128GB ವೇರಿಯಂಟ್‌ ಮಾಡೆಲ್‌ 16,999 ರೂ. ಗಳ ದರದಲ್ಲಿ ಖರೀದಿಗೆ ದೊರೆಯುತ್ತದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F23 5G ಫೋನಿನ ಫೀಚರ್ಸ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F23 5G ಫೋನಿನ ಫೀಚರ್ಸ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F23 5G ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ ಹೆಚ್‌ಡಿ + ಇನ್ಫಿನಿಟಿ ಯು ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಮತ್ತು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ ಅನ್ನು ಒಳಗೊಂಡಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 750G SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 12 ನಲ್ಲಿ ಒಂದು UI 4.1 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128 GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದಲ್ಲದೆ 6GB ವರ್ಚುವಲ್ RAM ವಿಸ್ತರಣೆಯ ಬೆಂಬಲವೂ ಇದೆ. ಇದರೊಂದಿಗೆ ಮೈಕ್ರೋ ಎಸ್‌ಡಿ ಕಾರ್ಡ್‌ ಮೂಲಕ 1 TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ಒಳಗೊಂಡಿದೆ.

ಸ್ಮಾರ್ಟ್‌ಫೋನ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F23 5G ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ನೊಂದಿಗೆ ಬರುತ್ತದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸ್ಯಾಮ್‌ಸಂಗ್ ISOCELL JN1 ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್ ಶೂಟರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಶೂಟರ್ ಅನ್ನು ಸಹ ಒಳಗೊಂಡಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.ಸ್ಮಾರ್ಟ್‌ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 25W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

Best Mobiles in India

English summary
Samsung Galaxy A22 5G receives a Price Drop: Check New price.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X