Home
ಸುದ್ದಿಜಾಲ

ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A22 5G ಸ್ಮಾರ್ಟ್‌ಫೋನ್‌ ಲಾಂಚ್‌! ಬೆಲೆ ಎಷ್ಟು?

ಸ್ಮಾರ್ಟ್‌ಫೋನ್‌ ದೈತ್ಯ ಸ್ಯಾಮ್‌ಸಂಗ್‌ ಕಂಪೆನಿ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಹೊಸ ಸ್ಯಾಮ್‌ಸಂಗ್ ಗ್ಯಾಲಕ್ಸಿ A22 5G ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದ್ದು, 90Hz ಡಿಸ್ಪ್ಲೇ ಹೊಂದಿದೆ.

ಸ್ಯಾಮ್‌ಸಂಗ್

ಹೌದು, ಸ್ಯಾಮ್‌ಸಂಗ್ ಕಂಪೆನಿ ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A22 5G ಸ್ಮಾರ್ಟ್‌ಫೋನ್‌ ಅನ್ನು ಲಾಂಚ್‌ ಮಾಡಿದೆ. ಇದು ಆಕ್ಟಾ-ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6GB RAM + 128GB ಮತ್ತು 8GB RAM + 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆಯನ್ನು ಹೊಂದಿದೆ. ಇದರ ಆರಂಭಿಕ ಆವೃತ್ತಿಯ ಬೆಲೆ 19,999 ರೂ. ಆಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಸ್ಯಾಮ್‌ಸಂಗ್ ಗ್ಯಾಲಕ್ಸಿ A22 5G ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6 ಇಂಚಿನ ಫುಲ್‌-ಹೆಚ್‌ಡಿ + ಇನ್ಫಿನಿಟಿ-ವಿ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದ್ದು, 399 ಪಿಪಿಐ ಸಾಂದ್ರತೆಯನ್ನು ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ 82.3% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಪಡೆದುಕೊಂಡಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಸ್ಯಾಮ್‌ಸಂಗ್ ಗ್ಯಾಲಕ್ಸಿ A22 5G ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಒನ್ ಯುಐ ಕೋರ್ 3.1 ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಜೊತೆಗೆ 6GB RAM + 128GB ಮತ್ತು 8GB RAM + 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಎರಡು ವೇರಿಯೆಂಟ್‌ ಆಯ್ಕೆಯನ್ನು ಪಡೆದುಕೊಂಡಿದೆ. ಇದನ್ನು ಮೈಕ್ರೊ ಎಸ್ಡಿ ಕಾರ್ಡ್ ಮೂಲಕ 1 ಟಿಬಿ ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಶೂಟರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ನು ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 15W ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ವೈಫೈ, ಬ್ಲೂಟೂತ್, ಜಿಪಿಎಸ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಇನ್ನು ಈ ಫೋನ್ ಸೈಡ್-ಮೌಂಟೆಡ್ ಫಿಂಗರ್ಪ್ರಿಂಟ್ ಸೆನ್ಸಾರ್ ಅನ್ನು ಸಹ ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A22 5G ಸ್ಮಾರ್ಟ್‌ಫೋನ್‌ 6GB RAM + 128GB ಶೇಖರಣಾ ರೂಪಾಂತರಕ್ಕೆ 19,999ರೂ. ಬೆಲೆ ಹೊಂದಿದೆ. ಇನ್ನು 8GB RAM+ 128GB ಸ್ಟೋರೇಜ್ ಆವೃತ್ತಿಯ ಬೆಲೆ 21,999 ರೂ.ಹೊಂದಿದೆ. ಇದು ಗ್ರೇ, ಮಿಂಟ್ ಮತ್ತು ವೈಲೆಟ್ ಬಣ್ಣಗಳಲ್ಲಿ ಬರುತ್ತದೆ. ಇದು ಜುಲೈ 25 ರಿಂದ ವಿವಿಧ ಚಿಲ್ಲರೆ ಅಂಗಡಿಗಳ ಮೂಲಕ ದೇಶದಲ್ಲಿ ಖರೀದಿಗೆ ಲಭ್ಯವಿರುತ್ತದೆ. ಇಂದು ರಾತ್ರಿ ಮಧ್ಯರಾತ್ರಿಯಿಂದ ಸ್ಯಾಮ್‌ಸಂಗ್.ಕಾಮ್ ಮತ್ತು ಪ್ರಮುಖ ಆನ್‌ಲೈನ್ ಪೋರ್ಟಲ್‌ಗಳ ಮೂಲಕ ಫೋನ್ ಮಾರಾಟವಾಗಲಿದೆ. ಇನ್ನು ಲಾಂಚ್ ಆಫರ್‌ನಲ್ಲಿ ಎಚ್‌ಡಿಎಫ್‌ಸಿ ಬ್ಯಾಂಕ್ ಕಾರ್ಡ್ ಹೊಂದಿರುವವರಿಗೆ 1,500 ಕ್ಯಾಶ್‌ಬ್ಯಾಕ್ ಮತ್ತು ವಿವಿಧ ಬ್ಯಾಂಕಿಂಗ್ ಮತ್ತು ಎನ್‌ಬಿಎಫ್‌ಸಿ ಪಾಲುದಾರರ ಮೂಲಕ ಇಎಂಐ ಆಯ್ಕೆಗಳನ್ನು ಒಳಗೊಂಡಿವೆ.

Best Mobiles in India

English summary
Samsung Galaxy A22 5G was launched in India on Friday as the company's newest 5G smartphone.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+