ಸ್ಯಾಮ್‌ಸಂಗ್‌ ಗ್ಯಾಲಕ್ಸಿ A22s 5G ಸ್ಮಾರ್ಟ್‌ಫೋನ್‌ ಲಾಂಚ್‌! ಫೀಚರ್ಸ್‌ ಹೇಗಿದೆ?

|

ದಕ್ಷಿಣ ಕೋರಿಯಾದ ಟೆಕ್‌ ದೈತ್ಯ ಸ್ಯಾಮ್‌ಸಂಗ್‌ ಕಂಪೆನಿ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಎಂ ಮತ್ತು ಎ ಸರಣಿಯಲ್ಲಿ ಅನೇಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಹೊಸ ಗ್ಯಾಲಕ್ಸಿ A22s 5G ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್‌

ಹೌದು, ಸ್ಯಾಮ್‌ಸಂಗ್‌ ಕಂಪೆನಿ ಹೊಸ ಗ್ಯಾಲಕ್ಸಿ A22s 5G ಸ್ಮಾರ್ಟ್‌ಫೋನ್‌ ರಷ್ಯಾ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಈ ಫೋನ್‌ 6.6-ಇಂಚಿನ TFT ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮಿಂಟ್‌, ಗ್ರೇ ಮತ್ತು ವೈಟ್‌ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿಶೇಷ

ಡಿಸ್‌ಪ್ಲೇ ವಿಶೇಷ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A22s 5G ಸ್ಮಾರ್ಟ್‌ಫೋನ್‌ 1,080x2,408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6 ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ TFT LCD ಡಿಸ್‌ಪ್ಲೇ ಆಗಿದ್ದು, ವಾಟರ್‌ ಡ್ರಾಪ್‌ ನಾಚ್‌ ಶೈಲಿಯನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಹೊಂದಿದೆ. ಇದು ಆಂಡ್ರಾಯ್ಡ್‌ 11 ಆಧಾರಿತ One UI ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಹಾಗೂ 128GB ಸ್ಟೋರೇಜ್‌ ಆಯ್ಕೆಗಳಲ್ಲಿ ಬರುತ್ತದೆ. ಜೊತೆಗೆ ಮೈಕ್ರೊ SD ಕಾರ್ಡ್ ಬಳಸಿಕೊಂಡು 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A22s 5G ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ f/1.8ಲೆನ್ಸ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸಾರ್ f/2.2 ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ f/2.4 ಲೆನ್ಸ್‌ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ರಿಯರ್‌ ಕ್ಯಾಮೆರಾದಲ್ಲಿ 10x ಡಿಜಿಟಲ್ ಜೂಮ್ ಮತ್ತು 120fps ಸ್ಲೋ ಮೋಷನ್ ವೀಡಿಯೋದಂತಹ ವಿಶೇಷ ಫೀಚರ್ಸ್‌ ಅನ್ನು ನೀಡಲಾಗ್ತಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A22s 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 15W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ USB ಟೈಪ್-C ಪೋರ್ಟ್, 3.5mm ಆಡಿಯೋ ಜ್ಯಾಕ್, Wi-Fi 802.11 ac, Wi-Fi ಡೈರೆಕ್ಟ್, NFC, ಮತ್ತು ಬ್ಲೂಟೂತ್ v5.0ಯನ್ನು ಬೆಂಬಲಿಸಲಿದೆ. ಇದು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಹೊಸ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A22s 5G ಬೆಲೆ ಮತ್ತು ಲಭ್ಯತೆಯ ಬಗ್ಗೆ ಇನ್ನು ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಈ ಫೋನ್ ಮಿಂಟ್, ಗ್ರೇ ಮತ್ತು ವೈಟ್ ಬಣ್ಣದ ಆಯ್ಕೆಗಳಲ್ಲಿ ಬಿಡುಗಡೆಯಾಗಿದೆ. ಇದು 4GB RAM + 64GB ಮತ್ತು 4GB RAM + 128GB ಸ್ಟೋರೇಜ್ ಆಯ್ಕೆಗಳಲ್ಲಿ ದೊರೆಯಲಿದೆ.

ಸ್ಮಾರ್ಟ್‌ಫೋನ್‌

ಇನ್ನು ಈ ಸ್ಮಾರ್ಟ್‌ಫೋನ್‌ ಈಗಾಗಲೇ ಭಾರತದಲ್ಲಿ ಲಾಂಚ್‌ ಆಗಿರುವ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A22 5G ರಿಬ್ರಾಂಡೆಡ್‌ ಆವೃತ್ತಿಯಾಗಿದೆ. ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A22 5G ಸ್ಮಾರ್ಟ್‌ಫೋನ್‌ ಆರಂಭಿಕ ಬೆಲೆ 19,999 ರೂ. ಆಗಿದೆ. ಈ ಫೋನ್‌ 6.6 ಇಂಚಿನ ಫುಲ್‌-ಹೆಚ್‌ಡಿ + ಇನ್ಫಿನಿಟಿ-ವಿ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6GB RAM + 128GB ಮತ್ತು 8GB RAM + 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆಯನ್ನು ಹೊಂದಿದೆ.

Best Mobiles in India

English summary
The phone is a rebadged model of the Samsung Galaxy A22 5G that was launched in India in July this year.to know more visit to kannada.gizbot.com.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X